ಸಂಕಷ್ಟದಲ್ಲಿದ್ದವರಿಗೆ ನೆರವು ನೀಡುವುದು ಧರ್ಮ
Team Udayavani, May 4, 2020, 3:13 PM IST
ಇಂಡಿ: ಶಾಸಕ ಯಶವಂತ್ರಾಯಗೌಡ ಪಾಟೀಲ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಲಾಕ್‌ಡೌನ್‌ದಿಂದ ಕೂಲಿ ಕೆಲಸ ಇಲ್ಲದೇ ಸಂಕಷ್ಟಕ್ಕೊಳಗಾದ ಬಡ ಕುಟುಂಬಗಳಿಗೆ ರವಿವಾರ ದಿನಸಿ ಕಿಟ್ ವಿತರಿಸಿದರು. ತನ್ಮೂಲಕ ಕ್ಷೇತ್ರದಲ್ಲಿ ಆಹಾರ ಸಾಮಗ್ರಿ ಕಿಟ್ ವಿತರಣೆಗೆ ವಿಧ್ಯುಕ್ತ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರ ದೇಶದ ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಲಾಕ್‌ಡೌನ್ ಜಾರಿ ಮಾಡಿದೆ. ಇದರಿಂದ ಬಡವರ ಬದುಕು ದುಸ್ತರವಾಗಿದೆ. ಇಂತಹ ಸಂಧರ್ಭದಲ್ಲಿ ನಿಮ್ಮ ಸಹಾಯಕ್ಕೆ ಬರುವುದು ಜನಪ್ರತಿನಿಧಿಯಾದ ನನ್ನ ಧರ್ಮವಾಗಿದೆ. ಕ್ಷೇತ್ರದ 80 ಗ್ರಾಮಗಳ 11 ಸಾವಿರ ಬಡವರು, ನಿರ್ಗತಿಕರಿಗೆ ಆಹಾರ ದಿನಸಿ ಕಿಟ್ ವಿತರಿಸಲು ಯೋಜಿಸಲಾಗಿದ್ದು, ಇದಕ್ಕಾಗಿ 33 ಲಕ್ಷ ರೂ. ವ್ಯಯಿಸಲಾಗಿದೆ. ಗ್ರಾಮದ ಮುಖಂಡರು ಬಡವರ ಮನೆಬಾಗಿಲಿಗೆ ಕಿಟ್ ತಲುಪಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಬೇರೆ ಕಡೆ ದುಡಿಯಲು ಹೋಗಿ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ ಸುಮಾರು 400 ಕುಟುಂಬಗಳ ಸಮಸ್ಯೆಗಳನ್ನು ಶಾಸಕ ಯಶವಂತ್ರಾಯಗೌಡ ಪಾಟೀಲ ಆಲಿಸಿ ಅವರಿಗೆ ದಿನಸಿ ಕಿಟ್ ವಿತರಿಸಿದರು. ತಾಪಂ ಅಧ್ಯಕ್ಷ ಅಣ್ಣಾರಾಯ ಬಿದರಕೋಟಿ, ಗ್ರಾಪಂ ಅಧ್ಯಕ್ಷ ವಿಠ್ಠಲ ಗೌಡ ಪಾಟೀಲ, ಜಿಪಂ ಸದಸ್ಯ ಹಣಮಂತ ಖಂಡೇಕಾರ, ಶ್ರೀಕಾಂತ ಕುಡಿಗನೂರ, ಸಿದ್ಧಾರೂಢ ಮರಗೂರ, ಪ್ರಭು ಹೊಸಮನಿ, ಭೀರಪ್ಪ ಪೂಜಾರಿ, ಕಲ್ಲನಗೌಡ ಬಿರಾದಾರ, ಇಲಿಯಾಸ ಬೋರಾಮಣಿ, ಜಾವೀದ ಮೋಮಿನ, ಮಲ್ಲು ಮಡ್ಡಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.