ಪಾಲನೆಯಾಗುತ್ತಿಲ್ಲ ಸಾಮಾಜಿಕ ಅಂತರ
Team Udayavani, Apr 19, 2020, 4:47 PM IST
ಇಂಡಿ: ಸಾಮಾಜಿಕ ಅಂತರ ಕಾಪಾಡದೆ ತರಕಾರಿ ಖರೀದಿಸಿದ ಜನ
ಇಂಡಿ: ಕೋವಿಡ್-19 ಮಹಾಮಾರಿ ಅಟ್ಟಹಾಸ ವಿಜಯಪುರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಸಹಿತ ಜನ ಸಾಮಾಜಿಕ ಅಂತರ ಕಾಪಾಡದೆ ಇರುವುದರಿಂದ ಇಂಡಿಯಲ್ಲೂ ಕೋವಿಡ್ -19 ಹರಡುವಿಕೆಗೆ ಅವಕಾಶ ಮಾಡಿ ಕೊಟ್ಟಂತಾಗುತ್ತಲಿದೆ.
ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಸಾರ್ವಜನಿಕರು ಸಂತೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುತ್ತಿಲ್ಲ. ರೇಷನ್ ಅಂಗಡಿ ಮುಂದೆ ಗುಂಪು ಗುಂಪಾಗಿ ನಿಲ್ಲುವುದು, ಬೈಕ್‌ನಲ್ಲಿ ಮೂರು ಜನ ಅಡ್ಡಾಡುವುದು ಸಾಮಾನ್ಯವಾಗಿದೆ. ಪಟ್ಟಣದ ನಾಲ್ಕೈದು ಕಡೆಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ಮಂಗಳವಾರ ಹಾಗೂ ಶನಿವಾರ ಬೆಳಗ್ಗೆ 6ರಿಂದ 9ರವರೆಗೆ ಸಾಮಾಜಿಕ ಅಂತರ
ಕಾಪಾಡಿಕೊಂಡು ದಿನಸಿ, ಕಾಯಿಪಲ್ಲೆ, ಹಣ್ಣು-ಹಂಪಲು ಖರೀದಿ ಮಾಡಲಿ ಎಂಬ ಉದ್ದೇಶದಿಂದ ಸಂತೆ ಪ್ರಾರಂಭಿಸಲಾಗಿದೆ. ಆದರೆ ಜನತೆ ಇದನ್ನೆಲ್ಲವನ್ನು ಗಮನಿಸದೆ ಗುಂಪು ಗುಂಪಾಗಿ ನೂಕು ನುಗ್ಗಲು ಮಾಡುತ್ತ ಖರೀದಿಯಲ್ಲಿ ತೊಡಗಿರುವದು ವಿಷಾದನೀಯ. ವ್ಯಾಪಾರಸ್ಥರು ಹಾಗೂ ಗ್ರಾಹಕರು ಮಾಸ್ಕ್ ಹಾಕದೆ ಜಾಣ ಕುರುಡುತನ ಪ್ರದರ್ಶಸಿಸುತ್ತಿರುವದು ಕಂಡು ಬರುತ್ತಿದೆ.
ಕೋವಿಡ್ ಕುರಿತು ಸಾರ್ವಜನಿಕರಿಗೆ ಸಾಕಷ್ಟು ತಿಳಿವಳಿಕೆ ನೀಡಲಾಗಿದೆ. ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದು ಸಾರ್ವಜನಿಕರು ಮನೆಯಲ್ಲಿರಬೇಕು.
ಡಾ| ಅರ್ಚನಾ ಕುಲಕರ್ಣಿ
ತಾಲೂಕು ಆರೋಗ್ಯಾಧಿಕಾರಿ
ಪೊಲೀಸ್ ಇಲಾಖೆಯೂ ಸಾರ್ವಜನಿಕರಿಗೆ ತಿಳಿವಳಿಕೆ ಹೇಳಿದೆ. ನಮ್ಮ ಸಿಬ್ಬಂದಿ ಹಗಲಿರುಳು ಕೆಲಸ ಮಾಡುತ್ತಿದ್ದು ಜನ ಸ್ಪಂದಿಸದೇ ಇರುವುದು ಬೇಸರ ತರಿಸಿದೆ. ಅನವಶ್ಯಕವಾಗಿ ತಿರುಗಾಡುವವರ ಬೈಕ್ ವಶಪಡಿಸಿಕೊಳ್ಳಲಾಗುತ್ತಿದೆ.
ಎಂ.ಬಿ. ಸಂಕದ್, ಡಿವೈಎಸ್‌ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.