ಶಿಶುಗಳ ಆರೋಗ್ಯ ಆದ್ಯತೆ ಅಗತ್ಯ
Team Udayavani, Oct 3, 2017, 12:48 PM IST
ವಿಜಯಪುರ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗರ್ಭಿಣಿ ತಾಯಂದಿರು, ಬಾಣಂತಿಯರ ಮತ್ತು ಮಗುವಿನ ಆರೋಗ್ಯ ರಕ್ಷಣೆಗಾಗಿ ಮಾತೃಪೂರ್ಣ ಎಂಬ ಮಹತ್ವಾಕಾಂಕ್ಷೆ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದರು.
ಸೋಮವಾರ ತಿಕೋಟಾ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರತಿ 1 ಲಕ್ಷ ಮಕ್ಕಳಲ್ಲಿ 133 ಮಕ್ಕಳು ಅಪೌಷ್ಟಿಕತೆಯಿಂದ ಮೃತಪಡುತ್ತಿವೆ. ಗರ್ಭಿಣಿಯರು ಹಾಗೂ ಬಾಣಂತಿ ತಾಯಿಯರ ಸಾವುಗಳ ಕೂಡ ಸಂಭವಿಸುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ
ಮಾತೃಪೂರ್ಣ ಎಂಬ ಮಹತ್ವಾಕಾಂಕ್ಷೆ ಯೋಜನೆ ಜಾರಿಗೊಳಿಸಿ ಗರ್ಭಿಣಿ, ತಾಯಂದಿರು, ಶಿಶುಗಳ ರಕ್ಷಣೆಗೆ ಮುಂದಾಗಿದೆ ಎಂದರು.
ಪ್ರತಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಿಂದ ಮಧ್ಯಾಹ್ನದ ಬಿಸಿಯೂಟ ಹಾಗೂ ಕಬ್ಬಿಣಾಂಶದ ಮಾತ್ರೆ ನೀಡುವ ವೈಶಿಷ್ಟ ಪೂರ್ಣ ಯೋಜನೆ ಇದಾಗಿದೆ. ಇದರ ನೈಜ ಅನುಷ್ಠಾನದಿಂದ ಪೂರ್ಣ ಪೌಷ್ಟಿಕಾಂಶವುಳ್ಳ ಮಧ್ಯಾಹ್ನದ ಬಿಸಿಯೂಟ ದೊರೆಯಲಿದೆ. ಜಿಲ್ಲೆಯ 26,797 ಗರ್ಭಿಣಿಯರು, 27,015 ಬಾಣಂತಿಯರು ಸೇರಿದಂತೆ 53,812 ಫಲಾನುಭವಿಗಳು ಸದುಪಯೋಗ ಪಡೆಯಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅಲ್-ಅಮೀನ್ ಮೆಡಿಕಲ್ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಎಸ್.ಎಸ್. ಯರನಾಳ ಉಪನ್ಯಾಸ ನೀಡಿದರು. ಜಿಪಂ ಸದಸ್ಯೆ ಪ್ರತಿಭಾ ಪಾಟೀಲ, ಸುಮನ್ ಕೊಲ್ಹಾರ ಮಾತನಾಡಿದರು.
ಕೃಷ್ಣಾ ಕಾಡಾ ಅಧ್ಯಕ್ಷ ಜಕ್ಕಪ್ಪ ಎಡವೆ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಸಿಇಒ ಎಂ.ಸುಂದರೇಶಬಾಬು, ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟೆ, ಮಾಜಿ ಉಪಾಧ್ಯಕ್ಷ ತಮ್ಮಣ್ಣ ಹಂಗರಗಿ, ರವಿಗೌಡ ಪಾಟೀಲ ಇದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಶೋಕ ಕೆಲವಡೆ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಚಿವ ಎಂ.ಬಿ. ಪಾಟೀಲ ಸಹಾಯ ಧನದ ಚೆಕ್ ಹಾಗೂ ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.