ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Oct 8, 2018, 12:55 PM IST
ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಸತಿ ಶಾಲೆಗಳ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಿತ್ತೂರ ಚನ್ನಮ್ಮ, ಮೊರಾರ್ಜಿ ದೇಸಾಯಿ ಸೇರಿದಂತೆ ವಿವಿಧ ಸರ್ಕಾರಿ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಅನೇಕ ರೀತಿ ಸಮಸ್ಯೆ ಎದುರಿಸುತ್ತಿದ್ದಾರೆ.
ಸರ್ಕಾರ ಈ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸುಮಾರು 4,200ಕ್ಕೂ ಹೆಚ್ಚು ಶಿಕ್ಷಕರು ಅನೇಕ ವರ್ಷಗಳಿಂದ ಸಮಸ್ಯೆ
ಎದುರಿಸುತ್ತಿದ್ದರೂ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳಿಗೆ
ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಕುಮಾರ ನಾಯಕ ವರದಿ ಆಧರಿಸಿ ವಸತಿ ಶಾಲಾ ಶಿಕ್ಷಕರಿಗೆ ಒಂದು ಹೆಚ್ಚುವರಿ ವೇತನ ಬಡ್ತಿ ನೀಡಬೇಕು. ಪ್ರಾಂಶುಪಾಲರಿಗೆ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸುವುದು, ವಸತಿ ಶಾಲೆಗಳನ್ನು ಹಾಗೂ ಅಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳನ್ನು ಇಲಾಖೆ ವ್ಯಾಪ್ತಿಗೆ ನೇರವಾಗಿ ಒಳಪಡಿಸುವುದು, ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿಗಳನ್ನು ತ್ವರಿತ ಗತಿಯಲ್ಲಿ ಆರಂಭಿಸಲು ಅಗತ್ಯ ಪ್ರಕ್ರಿಯೆ ಕೈಗೊಳ್ಳುವುದು, ಎಂಒಡಿ ಕೆಲಸದಿಂದಾಗಿ ಶಿಕ್ಷಕರಿಗೆ ಅತ್ಯಂತ ತೊಂದರೆ ಹಾಗೂ ಒತ್ತಡ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಎಂಒಡಿ ರದ್ದುಗೊಳಿಸಿ ಪ್ರತಿ ವಸತಿ ಶಾಲೆಗಳಿಗೆ ಸಮಾಜ ವಿಜ್ಞಾನ ಹಾಗೂ ಗಣಿತ ಶಿಕ್ಷಕರನ್ನು ಹೆಚ್ಚುವರಿಯಾಗಿ ನಿಯೋಜಿಸುವಂತೆ ಆಗ್ರಹಿಸಿದರು.
ಕೇಂದ್ರ ಸರ್ಕಾರದ ಜವಾಹರ್ ನವೋದಯ ವಿದ್ಯಾಲಯದ ಸಿಬ್ಬಂದಿಗಳಿಗೆ ನೀಡಲಾಗುತ್ತಿರುವ ಶೇ. 10 ತುಟ್ಟಿಭತ್ಯೆ ಮಾದರಿಯಲ್ಲಿ ರಾಜ್ಯ ಸರ್ಕಾರದ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೂ ನೀಡುವುದು, ವಸತಿ ನಿಲಯಗಳಿಗೆ ಅಗತ್ಯವಿರುವ ಸ್ಟಾಫ್ ನರ್ಸ್, ಸಂಗೀತ ಶಿಕ್ಷಕರು, ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ನೌಕರರು ಹಕ್ಕೊತ್ತಾಯ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.