ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್
Team Udayavani, Apr 18, 2021, 9:10 PM IST
ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಜಯಪುರ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು, ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ
ಸಿಪಿಐ ಸುರೇಶ ಬೆಂಡೆಗುಂಬಳ ಹಾಗೂ ಎಸೈ ಎಸ್.ಪಿ.ಕಟ್ಟಿಮನಿ ನೇತೃತ್ವದಲ್ಲಿದ್ದ 17 ಪೊಲೀಸರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರಿಂದ ಬೆಟ್ಟಿಂಗ್ ಕೃತ್ಯಕ್ಕೆ ಬಳಸಿದ 1 ಲ್ಯಾಪ್‍ಟಾಪ್, 16 ಮೊಬೈಲ್ ಹಾಗೂ 92,810 ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಲ್ಲಿ ಓರ್ವ ಚಡಚಣ ಪಟ್ಟಣಕ್ಕೆ ಸೇರಿದವನಿದ್ದು, ಉಳಿದ 7 ಜನರು ಇಂಡಿ ಪಟ್ಟಣ, ತಾಲೂಕಿನ ವಿವಿಧ ಪ್ರದೇಶಕ್ಕೆ ಸೇರಿದ 25-30 ವರ್ಷದೊಳಗಿನ ಯುವಕರು. ಬಂಧಿತರನ್ನು ಶಿವು ಚಂದ್ರಾಮ್ ಬಗಲಿ, ಧರ್ಮು ಹುಚ್ಚಪ್ಪ ಹರಿಜನ, ಸಾಗರ ಸಿದರಾಯ ಸಿಂಧೆ, ಅಶ್ವತ್ಥ ಅಶೋಕ ಬನಸೋಡೆ, ಮಹ್ಮದ್ ಶಫೀಕ್ ಶಕೀಲ್ ಶೇಖ್, ಮಹೇಶ ಭೀಮಪ್ಪ ಆನಂದ, ರಾಹುಲ್ ಮನೋಹರ ಶೇರಖಾನೆ, ಸಚಿನ್ ವಿಠ್ಠಲ ರಾಠೋಡ ಎಂದು ಗುರುತಿಸಲಾಗಿದೆ ಎಂದು ಎಸ್ಪಿ ಅನುಪಮ ಅಗರವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.