![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 17, 2021, 4:48 PM IST
ವಿಜಯಪುರ: ಜಿಲ್ಲೆಯ ಅರಕೇರಿ ಗ್ರಾಮದಲ್ಲಿ 9.62 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಇಂಡಿಯಾ ರಿಸರ್ವ್ ಬಟಾಲಿಯನ್‌ನ ಆಡಳಿತ ಕಚೇರಿಯನ್ನು ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಶನಿವಾರ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್‌ದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿದರು.
ವಿಜಯಪುರ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ಐಆರ್‌ಬಿ ನೂತನ ಕಟ್ಟಡದ ಅಡಿಟೋರಿಯಂ ದಲ್ಲಿ ವ್ಯವಸ್ಥೆ ಮಾಡಲಾಗಿದ್ದ ಕಾರ್ಯಕ್ರಮದ ನೇರ ಪ್ರಸಾರ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ, ಬೀಜ ನಿಗಮ ಹಾಗೂ ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಶಾಸಕ ಬಸನಗೌಡ ಪಾಟೀಲ (ಯತ್ನಾಳ), ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಅನುಪಮ್ ಅಗರವಾಲ, ಐಆರ್‌ಬಿ ಕಮಾಂಡೆಟ್ ಎಸ್.ಡಿ. ಪಾಟೀಲ ಇದ್ದರು. ಅರಕೇರಿ ಗ್ರಾಮದಲ್ಲಿ ಕಳೆದ 2010ರಂದು
ರಿ.ಸರ್ವೇ ನಂ. 173ರ 100 ಎಕರೆ ಜಮೀನು ಮಂಜೂರು ಮಾಡಿ ಪಡೆಯ ಸ್ವಾಧೀನಕ್ಕೆ ನೀಡಲಾಗಿದೆ. ವಿಜಯಪುರ ನಗರದಿಂದ 15 ಕಿ.ಮೀ. ದೂರದಲ್ಲಿರುವ ಈ ಜಮೀನಿನಲ್ಲಿ ಈ ಆಡಳಿತ ಕಟ್ಟಡ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಶೇ. 75 ಹಾಗೂ ರಾಜ್ಯ ಸರ್ಕಾರದಿಂದ ಶೇ. 25 ಅನುದಾನ ಕಲ್ಪಿಸಲಾಗಿದ್ದು ಕಚೇರಿಯನ್ನು ಉದ್ಘಾಟಿಸಲಾಗಿದೆ.
ಇದನ್ನೂ ಓದಿ:ಇಂದು ಬೆಳಗಾವಿಯಲ್ಲಿ ಜನಸೇವಕ ಸಮಾರೋಪ
ಆಡಳಿತ ಕಚೇರಿ ವ್ಯಾಪ್ತಿಯಲ್ಲಿ 752 ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅ ಧಿಕಾರಿ, ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಡೆಪ್ಯೂಟಿ ಕಮಾಂಡೆಟ್ ಕಚೇರಿ, ಉಗ್ರಾಣ, ಅಡಿಟೋರಿಯಂ, ಕ್ಯಾಂಟೀನ್, ಕಚೇರಿಯ ಪ್ರತ್ಯೇಕ ವಿಭಾಗಗಳ ಸೌಲಭ್ಯಗಳನ್ನು ಹೊಂದಿದ್ದು, ಈ ಕಟ್ಟಡ ನಿರ್ಮಾಣದಿಂದ ಇಂಡಿಯಾ ರಿಸರ್ವ್ ಬಟಾಲಿಯನ್ ವಿಜಯಪುರ ಪಡೆಗೆ ಅತೀವ ಸಂತಸದ ಕ್ಷಣವಾಗಿದೆ ಎಂದು ಬಟಾಲಿಯನ್‌ನ ಕಮಾಂಡೆಂಟ್ ಎಸ್.ಡಿ. ಪಾಟೀಲ ಹಾಗೂ ಸಹಾಯಕ ಕಮಾಂಡೆಂಟ್ ಶರಣಬಸು ಕೋಳಾರಿ ಹೇಳಿದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ ಜೋಶಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಶ್ವಥ್‌ನಾರಾಯಣ, ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.
ಇದೇ ಸಂದರ್ಭದಲ್ಲಿ ಇಆರ್‌ಎಸ್‌ಎಸ್ (ತುರ್ತು ಪ್ರತಿಕ್ರಿಯಾ ವಾಹನ)ಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.