ತಳವಾರರಿಗೆ ಎಸ್‌ಟಿ ಪ್ರಮಾಣಪತ್ರ ನೀಡಿ


Team Udayavani, Apr 19, 2022, 5:40 PM IST

22St

ಸಿಂದಗಿ: ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಸೋಮವಾರ ಪಟ್ಟಣದಲ್ಲಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಪ್ರತಿಭಟನಾಕಾರರು ಮೈಗೆ ಗಿಡದ ತಪ್ಪಲು ಸುತ್ತಿಕೊಂಡು, ತಲೆ ಮೇಲೆ ಕಲ್ಲು ಹೊತ್ತುಕೊಂಡು ಅರಬೆತ್ತಲೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಅಂಬೇಡ್ಕರ್‌ ವೃತ್ತದಿಂದ ಆರಂಭಗೊಂಡು ಪಾದಯಾತ್ರೆ ಮೂಲಕ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಸಂಚರಿಸಿ ತಹಶೀಲ್ದಾರ್‌ ಕಚೇರಿಗೆ ತಲುಪಿತು. ಅಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.

ನಂತರ ಪ್ರತಿಭಟನಾಕಾರರು ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸುವ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ತಳವಾರ, ಪರಿವಾರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾಜಿ ಮೆಟಗಾರ, ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದ ಮಾಜಿ ಶಾಸಕ ಶರಣಪ್ಪ ಸುಣಗಾರ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ವೈ.ಸಿ. ಮಯೂರ, ಟಿಪ್ಪು ಕ್ರಾಂತಿ ಸೇನೆ ಅಧ್ಯಕ್ಷ ದಸ್ತಗೀರ್‌ ಮುಲ್ಲಾ, ಕುರುಬರ ಸಂಘದ ತಾಲೂಕಾಧ್ಯಕ್ಷ ನಿಂಗಣ್ಣ ಬಿರಾದಾರ ಮಾತನಾಡಿ, ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದಾಗಿ ಮುಖ್ಯಮಂತ್ರಿ, ಸಮಾಜಕಲ್ಯಾಣ ಇಲಾಖೆ ಸಚಿವರು, ಶಾಸಕರು ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಸ್ವತಃ ಮುಖ್ಯಮಂತ್ರಿ ಅವರೇ ತಿಳಿಸಿದ್ದರು. ಆದರೆ ಆರು ತಿಂಗಳಾದರೂ ಜಾತಿ ಪ್ರಮಾಣಪತ್ರ ನೀಡುತ್ತಿಲ್ಲ. ಮತ ಪಡೆಯಲು ಸುಳ್ಳು ಭರವಸೆ ನೀಡಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಿಂದ ತಳವಾರ ಸಮುದಾಯವನ್ನು ತೆಗೆದು ಹಾಕಿ, ಕೇಂದ್ರ ಸರ್ಕಾರದ ಗೆಜೆಟ್‌ ಹಾಗೂ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಕಾರ ಅಟಲ್‌ಜಿ ಜನಸ್ನೇಹಿ ತಂತ್ರಾಂಶದಲ್ಲಿ ಪರಿಶಿಷ್ಟ ಪಂಗಡ ಎಂದು ಸೇರಿಸಿದರೆ ಜಾತಿ ಪ್ರಮಾಣ ಪತ್ರ ಸಿಗಲಿದೆ. ಈಗಾಗಲೇ ಕೋರ್ಟ್‌ ಆದೇಶದ ಮೇರೆಗೆ ತಳವಾರ ಸಮುದಾಯದ ಕೆಲವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ದೊರಕಿ, ಗ್ರಾಪಂ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Vijayapura: House robbery, masked men caught on CCTV

Vijayapura: ಮನೆ ದರೋಡೆ, ಮುಸುಕುಧಾರಿಗಳ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Indi: ಜಂತುಹುಳು ಮಾತ್ರೆ ಸೇವಿಸಿದ 5 ಮಕ್ಕಳು ಅಸ್ವಸ್ಥ

Indi: ಜಂತುಹುಳು ಮಾತ್ರೆ ಸೇವಿಸಿದ 5 ಮಕ್ಕಳು ಅಸ್ವಸ್ಥ

Vijayapura: Police fire on robbers; one shot, four escape

Vijayapura: ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್; ಓರ್ವನಿಗೆ ಗುಂಡೇಟು, ನಾಲ್ವರು ಪರಾರಿ

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.