ಲಿಂಗಾಧಾರಿತ ಅಸಮಾನತೆ ಹೋಗಲಾಡಿಸುವುದು ಎಲ್ಲರ ಜವಾಬ್ದಾರಿ
ಆತ್ಮವಿಶ್ವಾಸದಿಂದ ಅಧ್ಯಯನ ನಡೆಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತರಬೇಕು
Team Udayavani, Feb 3, 2021, 5:29 PM IST
ವಿಜಯಪುರ: ಸಮಾಜದಲ್ಲಿ ಹೆಣ್ಣು ಮಕ್ಕಳ ಸಂರಕ್ಷಣೆ ಹಾಗೂ ಅವರಿಗೆ ಉನ್ನತ ಶಿಕ್ಷಣ ದೊರೆಯುವಂತೆ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ದಾಪುಗಾಲಿಡುತ್ತಿದೆ. ಹೆಣ್ಣು ಭ್ರೂಣ ಹತ್ಯೆ ತಡೆಯುವ ಮೂಲಕ ಲಿಂಗಾಧಾರಿತ
ಅಸಮಾನತೆ ಹೋಗಲಾಡಿಸುವಲ್ಲಿ ಸಮಾಜದಲ್ಲಿನ ಎಲ್ಲರೂ ಹೊಣೆಗಾರಿಕೆ ನಿಭಾಯಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶರಾದ ಜಿಲ್ಲಾ ಕಾನೂನು ಪ್ರಾಧಿಕಾರ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ಹೇಳಿದರು.
ನಗರದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸ್ಥೆ ಸಹಯೋಗದಲ್ಲಿ ಬೇಟಿ ಬಚಾವ್ ಬೇಟಿ ಫಡಾವೋ ಕಾರ್ಯಕ್ರಮದಡಿ ನಡೆದ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ಸಮಾಜದಲ್ಲಿ ಹೆಣ್ಣು ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಬೇಕು. ಮನಸ್ಸು ಮಾಡಿದರೆ, ಆತ್ಮವಿಶ್ವಾಸದಿಂದ ಆಕೆ ಏನನ್ನಾದರೂ ಮಾಡಬಲ್ಲಳು ಎಂಬುದನ್ನೂ ಸಾಧಿಸಿ ತೋರಿಸಿದ್ದಾಳೆ. ಶಾಲಾ, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಬಹಳ ಮುಖ್ಯ. ಹಾಗೆಯೇ ಆತ್ಮವಿಶ್ವಾಸದಿಂದ ಅಧ್ಯಯನ ನಡೆಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ
ಕೀರ್ತಿ ತರಬೇಕು ಎಂದರು.
ಬೇಟಿ ಬಚಾವೋ ಬೇಟಿ ಫಡಾವೋ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ನಿರ್ಮಲಾ ದೊಡ್ಡಮನಿ ಮಾತನಾಡಿದರು. ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಲಾದ ಚಿತ್ರಕಲೆ, ರಂಗೋಲಿ, ಕವನ ರಚನೆ, ಘೋಷವಾಕ್ಯ ರಚನೆ ಮುಂತಾದ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಮತ್ತು ಬಹುಮಾನ ವಿತರಣೆ ಮಾಡಲಾಯಿತು.
ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಂಸ್ಥೆ ಅಧ್ಯಕ್ಷ ಸುರೇಶ ದೇಸಾಯಿ, ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ ದಡ್ಡಿ, ಪ್ರೌಢಶಾಲಾ ಮುಖ್ಯಸ್ಥೆ ಎಸ್.ಆರ್. ಪಾಟೀಲ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.