ಯಾರಿಂದಲೂ ಕದಿಯಲಾರದ ಸಂಪತ್ತು ವಿದ್ಯೆ


Team Udayavani, Jan 25, 2019, 11:40 AM IST

shiv-3.jpg

ತಾಂಬಾ: ಪ್ರಪಂಚದಲ್ಲಿ ಏನಾದರೂ ಕದಿಯಬಹುದು. ಆದರೆ ಕಲಿತ ವಿದ್ಯೆ ಕದಿಯಲು ಯಾರಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರು ಭೌತಿಕ ಸಂಪತ್ತಿನ ಆಸ್ತಿ ಗಳಿಸುವುದಕ್ಕಿಂತ ವಿದ್ಯೆಯನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಚಾಂದಕವಠೆ ಎಸ್‌ಪಿ ಹೈಸ್ಕೂಲ್‌ ಮುಖ್ಯಶಿಕ್ಷಕ ಎಸ್‌.ಬಿ. ಹಂಚನಾಳ ಹೇಳಿದರು.

ಅಥರ್ಗಾ ಗ್ರಾಮದ ಜ್ಞಾನಭಾರತಿ ವಿದ್ಯಾಮಂದಿರ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಹಾಗೂ ಪೌಢ ಶಾಲೆಯ 18ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ನೈತಿಕ ಮೌಲ್ಯ, ರಾಷ್ಟ್ರಪ್ರೇಮ ಬೆಳೆಸಬೇಕೆಂದು ಸಲಹೆ ನೀಡಿದರು.

ರೇವಣಸಿದ್ದಪ್ಪ ಬಂಗಾರಿ ಮಾತನಾಡಿ, ಸಮಾಜದಿಂದ ನಾವು ಏನನ್ನೂ ನಿರೀಕ್ಷಿಸದೇ ಸಮಾಜ ನಮ್ಮಿಂದ ನಿರೀಕ್ಷಿಸಿದ್ದನ್ನು ಈಡೇರಿಸಬೇಕು. ಬದುಕುವುದಕ್ಕೆ ನೂರಾರು ಮಾರ್ಗಗಳಿವೆ. ಆದರೆ ಬದುಕನ್ನು ಕಟ್ಟಿಕೊಡುವ ಮಾರ್ಗದ ಆಯ್ಕೆಯಲ್ಲಿ ಎಡವದೇ ಸರಿಯಾದ ದಾರಿಯಲ್ಲಿ ಹೋದರೆ ಬದುಕು ಅರ್ಥಪೂರ್ಣವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ ಅಥರ್ಗಾ ವಿರಕ್ತಮಠದ ಮುರಘೇಂದ್ರ ಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕ ಸಮುದಾಯದ ಮೇಲಿದೆ. ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋದರೆ ಶೇ.100ರಷ್ಟು ಫಲಿತಾಂಶ ಸಾಧಿಸಲು ಸಾಧ್ಯ. ಅಲ್ಲದೆ ಮಕ್ಕಳು ಕೂಡ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದರು. ಭಾರತಿ ಶಿವುರ ವರದಿ ವಾಚಿಸಿದರು. ಗ್ರಾಪಂ ಅಧ್ಯಕ್ಷ ಗಿರೀಶ ಚಾಂದಕವಠೆ ಉದ್ಘಾಟಿಸಿದರು. ತಾಪಂ ಸದಸ್ಯ ಗಣಪತಿ ಬಾಣಿಕೋಲ್‌, ಶಿವಾನಂದ ನಿಂಬಾಳ, ಶರಣಪ್ಪ ಸಿಂದಗಿ, ನಾಗುಗೌಡ ಪಾಟೀಲ, ಶ್ರೀಶೈಲ ನಾಗಣಸೂರ, ವಿದ್ಯಾಧರ ಜೇವುರ, ಪರಶುರಾಮ ಜಿಗಜಿಣಿಗಿ, ಸುನೀಲ ರಬಶಟ್ಟಿ, ಜಯರಾಮ ರಾಠೊಡ, ಐ.ಆರ್‌. ಕಲ್ಲೂರಮಠ, ಶರಣು ಗುಣಕಿ ಇದ್ದರು. ಸೀಮಾ ಹಳ್ಳಿ ಪ್ರಾರ್ಥಿಸಿದರು. ಸಿ.ಎಸ್‌. ಮೇತ್ರಿ ಸ್ವಾಗತಿಸಿದರು. ತುಕಾರಾಮ ಚವ್ಹಾಣ ನಿರೂಪಿಸಿದರು. ಕೆ.ಟಿ. ಜಾಧವ ವಂದಿಸಿದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.