ಹದಗೆಟ್ಟ ರಸ್ತೆಗಳ ದುರಸ್ತಿಗೆ ಜೆಡಿಎಸ್ ಕಾರ್ಯಕರ್ತರ ಆಗ್ರಹ
Team Udayavani, Jul 31, 2022, 6:46 PM IST
ಇಂಡಿ: ತಾಲೂಕಿನದ್ಯಂತ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಹರ ಸಾಹಸಪಟ್ಟರು. ಪೊಲೀಸ್ ಇಲಾಖೆಯವರು ಹೆದ್ದಾರಿ ಬಂದ್ ಮಾಡಲು ಅವಕಾಶ ಕೊಡಲಿಲ್ಲ. ತದ ನಂತರ ಪ್ರತಿಭಟನಾಕಾರರು ಇಂಡಿ ಮತ್ತು ಚಡಚಣ ರಸ್ತೆ ತಡೆದು ಕೆಲ ಕಾಲ ಪ್ರತಿಭಟನೆ ಮಾಡಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ ಮಾತನಾಡಿ, ಕಳೆದ 4-5 ವರ್ಷಗಳಿಂದ ತಾಲೂಕಿನ ಬಹುತೇಕ ರಸ್ತೆಗಳು ಹಾಳಾಗಿವೆ. ಸರ್ಕಾರ ಮತ್ತು ಜನಪ್ರತಿನಿ ಧಿಗಳು ಸಾಮಾನ್ಯ ಜನರ ಸಮಸ್ಯೆಗಳನ್ನು ಕೇಳುತ್ತಿಲ್ಲ. ಇದು ಪ್ರಜಾಪ್ರಭುತ್ವದ ದುರ್ದೈವ. ಗಾಂಧಿ àಜಿಯವರು ಈ ದೇಶಕ್ಕೆ ಹೋರಾಟ ಮತ್ತು ಸತ್ಯಾಗ್ರಹ ಮೂಲಕ ಸ್ವಾತಂತ್ರÂ ತಂದು ಕೊಟ್ಟಿದ್ದಾರೆ. ಸಾರ್ವಜನಿಕರು ಶಾಂತಿಯುತವಾಗಿ ಹೋರಾಟ ಮಾಡಬೇಕು ಎಂದರು.
ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಮಾತನಾಡಿ, ಶೇ. 90 ರಸ್ತೆಗಳು ಹಾಳಾಗಿದ್ದು ಕೂಡಲೇ ಸರ್ಕಾರ ರಸ್ತೆ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಬೇಕಾಗುತ್ತದೆ. ನಾವು ಕಾನೂನು ರಿತೀಯಲ್ಲಿ ಹೋರಾಟ ಮಾಡುತ್ತಿದ್ದು. ಹೋರಾಟದಲ್ಲಿ ನನ್ನ ಪ್ರಾಣ ಹೋದರು ಚಿಂತೆಯಿಲ್ಲ. ತಾಲೂಕಿನ ಜನತೆಗೆ ಮೂಲ ಸೌಕರ್ಯ ಒದಗಿಸಿಕೊಡಲು ಸದಾ ಸಿದ್ಧ. ಆದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ವಿನಃ ಹಿಂದೆ ಸರಿಯುವುದಿಲ್ಲ. ಜನರು ತಾಳ್ಮೆ ಕಳೆದುಕೊಳ್ಳುವ ಮೊದಲು ಹೋರಾಟಕ್ಕೆ ಸ್ಪಂದಿಸಿ ಎಂದು ಆಗ್ರಹಿಸಿದರು.
ಹೋರಾಟದಲ್ಲಿ ಶ್ರೀಶೈಲಗೌಡ ಪಾಟೀಲ, ಸಿದ್ದು ಡಂಗಾ, ಮರೆಪ್ಪ ಗಿರಣಿವಡ್ಡರ, ಬಸವರಾಜ ಹಂಜಗಿ, ಮಹಿಬೂಬ ಬೇವನೂರ, ಸಿದ್ದು ಡಂಗಾ, ಅಯೂಬ ನಾಟೀಕಾರ, ಸಿದ್ದಣಗೌಡ ಬಿರಾದಾರ, ಬಸಗೊಂಡ ಪಾಟೀಲ, ಅರವಿಂದ ಪಾಟೀಲ, ಸಂತೋಷ ಬಿರಾದಾರ, ರವಿ ಕೆಂಗೆರಿ, ಮಾಳಪ್ಪ ಉಮರಾಣಿ, ಬೀರಪ್ಪ ಸಗಾಯಿ, ನಿಯಾಝ್ ಅಗರಖೇಡ, ಇರ್ಫಾನ್ ಪಠಾಣ, ರಾಜು ಮುಲ್ಲಾ, ಬಸವರಾಜ ಹಂಜಗಿ ರವಿ ಪಾಟೀಲ (ಬದಾಮಿ), ಸಂಜು ಫಾಯಕಾರ, ಮನೋಹರ ನಾವಿ, ಬಾಲಕೃಷ್ಣ ಭೋಸಲೆ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.