ವಿಜಯಪುರದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ: ನಡಹಳ್ಳಿ
Team Udayavani, Mar 29, 2019, 4:35 PM IST
ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ. ಜೆಡಿಎಸ್ ಅಭ್ಯರ್ಥಿ ಇದ್ದರೂ ಅವರದ್ದು ಅಸ್ತಿತ್ವದಲ್ಲಿ ಇಲ್ಲದ ಪಕ್ಷ. ಸದ್ಯದ ಮಟ್ಟಿಗೆ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನಿಸಿಕೊಂಡಿದೆ. ಹೀಗಾಗಿ ಈ ಬಾರಿಯೂ ಮೋದಿ ಅವರನ್ನು ಮತ್ತೆ ದೇಶದ ಪ್ರಧಾನಿ ಮಾಡಲು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನೇ ಗೆಲ್ಲಿಸಿ ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಮನವಿ ಮಾಡಿದರು. ತಾಲೂಕು ಬಿದರಕುಂದಿ ಗ್ರಾಮದಲ್ಲಿ
ಬುಧವಾರ ರಾತ್ರಿ ಮತ್ತೂಮ್ಮೆ ಮೋದಿ ಸರ್ಕಾರ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಸಣ್ಣಪುಟ್ಟ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಬೇಡಿ. ಈ ಬಾರಿ ಬಿಜೆಪಿ ಬೆಂಬಲಿಸಿ. ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದಕ್ಕಾಗಿ, ದೇಶಕೋಸ್ಕರ ಓಟ್ ಮಾಡಿ. ಜಿಗಜಿಣಗಿ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುವವರಲ್ಲ. ಅವರು ಜಿಲ್ಲೆಗೆ ಹೆಚ್ಚಿನ ಅನುದಾನ ತಂದಿದ್ದು ದಾಖಲೆ ಸಮೇತ ಕೊಡಲು ಸಿದ್ಧರಿದ್ದೇವೆ.
ಈ ಬಾರಿ ಮುದ್ದೇಬಿಹಾಳ ಮತಕ್ಷೇತ್ರದಿಂದ ಲಕ್ಷಕ್ಕೂ ಹೆಚ್ಚು ಮತ ಬಿಜೆಪಿಗೆ ಹಾಕಿಸಲು ನನ್ನ ಕೈ ಬಲಪಡಿಸಿ ಎಂದರು. ಅಭ್ಯರ್ಥಿ ರಮೇಶ ಜಿಗಜಿಣಗಿ ಮಾತನಾಡಿ, ಚುನಾವಣೆ ಮುಗಿದ ಮ್ಯಾಲೆ ನಿಮ್ಮೂರಿಗೆ ಏನ್ ಮಾಡಬೇಕೋ ಅದನ್ನ ಮಾಡ್ತೀನಿ. ಈಗ ನಾವೆಲ್ಲ ಸೇರಿ ದೇಶವನ್ನು ಸುಭದ್ರಗೊಳಿಸಬೇಕಾಗಿದೆ. ಇದಕ್ಕಾಗಿ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನೇ ಬೆಂಬಲಿಸಿ ಎಂದರು.
ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ ಮತ್ತಿತರರು ಮಾತನಾಡಿದರು. ಲೋಕಸಭೆ ಚುನಾವಣೆ ಮತಕ್ಷೇತ್ರ ಉಸ್ತುವಾರಿಗಳಾದ ಮಲಕೇಂದ್ರಗೌಡ ಪಾಟೀಲ, ಶಿವಶಂಕರಗೌಡ ಹಿರೇಗೌಡರ, ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಧುರೀಣರಾದ ಪ್ರಭು ಕಡಿ, ಹೇಮರಡ್ಡಿ ಮೇಟಿ, ಸಂಗಮ್ಮ ದೇವರಳ್ಳಿ, ಎಸ್.ಎಚ್. ಲೊಟಗೇರಿ, ಬಸವರಾಜ ಗುಳಬಾಳ, ಸಂಗಮೇಶ ಕರಭಂಟನಾಳ, ಶರಣು ಬೂದಿಹಾಳಮಠ ಮತ್ತಿತರರು ಇದ್ದರು.
ಹಲವರು ತಮ್ಮ ಏರಿಯಾದ ಗುಡಿ ಕಟ್ಟಲು ಎಂಪಿ ಅನುದಾನ ಕೊಟ್ಟಿಲ್ಲ ಅಂತ ನನ್ನ ಮೇಲೆ ಸಿಟ್ಟಿಗೆದ್ದಿದ್ದಾರೆ. ಓಣಿಗೊಂದರಂತೆ ಇರುವ ಗುಡಿಗಳಿಗೆ ಎಂಪಿ ಅನುದಾನ ಎಲ್ಲಿಂದ ತರಲಿ. ಊರವರೆಲ್ಲ ಒಟ್ಟಾಗಿ ಆರಾಧಿಸುವ ಗುಡಿಯೊಂದಕ್ಕೆ 5 ಲಕ್ಷ ರೂ. ಗ್ರ್ಯಾಂಟ್ ಕೊಡಲು ಅವಕಾಶ ಇದೆ. ಊರವರೆಲ್ಲ ಒಟ್ಟಾಗಿ ಬಂದಲ್ಲಿ ಹೆಚ್ಚು ಅನುಕೂಲ. ಹೀಗಾಗಿ ನೀವು ಕೇಳಿದ ಗುಡಿಗೆ ರೊಕ್ಕ ಕೊಟ್ಟಿಲ್ಲ ಅಂತ ಸಿಟ್ಟಾಗಬೇಡಿ.
ರಮೇಶ ಜಿಗಜಿಣಗಿ, ಬಿಜೆಪಿ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.