ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸತ್ತಿದೆ:ಸಚಿವ ಈಶ್ಚರಪ್ಪ
Team Udayavani, Aug 21, 2019, 6:37 PM IST
ವಿಜಯಪುರ : ಸಚಿವ ಸ್ಥಾನ ಸಿಗದ ಶಾಸಕ ಉಮೇಶ ಕತ್ತಿ ಅವರನ್ನು ಮಾಜಿ ಸಚಿವ ಬಸವರಾಜ್ ಹೊರಟ್ಟಿ ಜೆಡಿಎಸ್ ಆಹ್ವಾನಿಸಿದ್ದಾರೆ ಎಂಬುದು ಹಾಸ್ಯಾಸ್ಪದ ಸಂಗತಿ. ಏಕೆಂದರೆ ರಾಜ್ಯದಲ್ಲಿ ಜೆಡಿಎಸ್ ಸತ್ತಿಹೋದ ಪಕ್ಷ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕುಟುಕಿದ್ದಾರೆ.
ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಹೊರಟ್ಟಿ ವಿರುದ್ಧ ವಾಗ್ದಾಳಿ ನಡೆಸಿದರು.
ಜೆಡಿಎಸ್ ಪಕ್ಷ ಸತ್ತು ಹೋಗಿದೆ ಅದಕ್ಕೆ ಜೆಡಿಎಸ್ ಪಕ್ಷದ ಬಗ್ಗೆ ಯಾಕೇ ಕೇಳ್ತಿರಾ ಎಂದು ವ್ಯಂಗ್ಯವಾಡಿದ ಈಶ್ವರಪ್ಪ,ರಾಜ್ಯ ಬಿಜೆಪಿ ಸರ್ಕಾರ ಬಹಳದಿನ ಉಳಿವುದಿಲ್ಲ ಎನ್ನುವ ಕಾಂಗ್ರೆಸ್ ನಾಯಕರ ಸ್ಥಿತಿ ಕುಡಿದ ಅಮಲಿನಲ್ಲಿ ವ್ಯಸನಿಗಳು ಬಡಬಡಿಸಿದಂತಿದೆ.
ಯಾರೋ ಕುಡಿದವರಂತೆ ಮಾತನಾಡಿದ್ದಾರೆ ಎಂದ ಮಾತ್ರಕ್ಕೆ ನಾನು ಉತ್ತರಿಸಬೇಕಿಲ್ಲ ಎಂದರು.ಯಡಿಯೂರಪ್ಪ ನೇತೃತ್ವದಲ್ಲಿ ನಮ್ಮ ಸರಕಾರ ಒಳ್ಳೆಯ ಸಚಿವ ಸಂಪುಟ ಹೊಂದಿದೆ.ಇದಲ್ಲದೇ ನಮ್ಮ ಪಕ್ಷವನ್ನು ನಂಬಿಕೊಂಡು ಬಂದವರಿಗೆ ನಮ್ಮ ನಾಯಕರು ಅನ್ಯಾಯ ಮಾಡಲ್ಲ.
ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹ ಮಾಡುವ ನಿರ್ಧಾರದ ಮೂಲಕ ಹಿಂದಿನ ಸ್ಪೀಕರ್ ಸಂವಿಧಾನ ವಿರೋಧಿ ಕೆಲಸ ಮಾಡಿದ್ದಾರೆ ಎಂದು ಹರಿಹಾಯ್ದರು.
ಸ್ಪೀಕರ್ ಹುದ್ದೆಯಂಥ ಸ್ಥಾನದಲ್ಲಿದ್ದ ರಮೇಶ ಕುಮಾರ ಕಾಂಗ್ರೆಸ್ ಪರ ಧೋರಣೆ ತೋರಿಸಿದ್ದಾರೆ.
ಉಳಿದ 13 ಸಚಿವ ಸ್ಥಾನಗಳನ್ನು ಅನರ್ಹರು ಬಿಜೆಪಿ ಸೇರಿದ ಬಳಿಕ ನಡೆಯುವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನೀಡಲಾಗುವುದು. ಅನರ್ಹರಿಗೆ ಬಿಜೆಪಿ ಅನ್ಯಾಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅನರ್ಹ ಶಾಸಕರ ವಿಷಯ ಸುಪ್ರೀಂ ಕೋರ್ಟ್ ನಲ್ಲಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.