ಜೆಡಿಎಸ್ ಜನಪರ ಪಕ್ಷ: ಮನಗೂಳಿ
Team Udayavani, Dec 31, 2017, 12:10 PM IST
ಸಿಂದಗಿ: ನೀರಾವರಿ, ಸಹಕಾರ ಕ್ಷೇತ್ರ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜೆಡಿಎಸ್
ಪಕ್ಷದ ಅಧಿಕಾರದಲ್ಲಿ ರಾಜ್ಯ ಅಭಿವೃದ್ಧಿ ಕಂಡಿದೆ. ರಾಜ್ಯದ ಅಭಿವೃದ್ಧಿಗಾಗಿ ಮತ್ತೆ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕಾರ
ನೀಡಿ ಎಂದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಸಿ. ಮನಗೂಳಿ ಹೇಳಿದರು.
ಶನಿವಾರ ತಾಲೂಕಿನ ತಾಂಬಾ ಗ್ರಾಮದಲ್ಲಿ ಜೆಡಿಎಸ್ ತಾಲೂಕು ಘಟಕ ಹಮ್ಮಿಕೊಂಡಿದ್ದ ಮನೆ ಮನೆಗೆ ಕುಮಾರಣ್ಣ
ಕರಪತ್ರ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
2006ರಲ್ಲಿ ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿಯವರ ಅಧಿಕಾರದ ಅವಧಿಯಲ್ಲಿನ ಅಭಿವೃದ್ಧಿಪರ ಯೋಜನೆ
ಹಾಗೂ ಮಾಡಿದ ಸಾಧನೆಗಳನ್ನು ಕರಪತ್ರದ ಮೂಲಕ ಮನೆ ಮನೆಗೆ ಮುಟ್ಟಿಸುವ ಕಾರ್ಯ ಈ ಅಭಿಯಾನದ ಮುಖ್ಯ
ಉದ್ದೇಶ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರವಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಾಕಷ್ಟು ಅಭಿವೃದ್ಧಿಪರ ಕೆಲಸಗಳನ್ನು ಮಾಡಿದ್ದಾರೆ ಎಂದರು.
ಜೆಡಿಎಸ್ ಯುವ ಮುಖಂಡ ಡಾ| ಮುತ್ತು ಮನಗೂಳಿ ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ 18 ತಿಂಗಳಲ್ಲಿ ಮಾಡಿದ ಸಾಧನೆ ಯಾವ ಮುಖ್ಯಮಂತ್ರಿಗಳಿಂದಲೂ ಮಾಡಲು ಸಾಧ್ಯವಾಗಿಲ್ಲ. ಅವರು ಮಾಡಿದ ಸಾಧನೆಗಳನ್ನು ರಾಜ್ಯದ ರೈತರ, ದೀನ-ದಲಿತರ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ
ಕೈಗೊಂಡ ಕಾರ್ಯಗಳನ್ನು ಕಾರ್ಯಕರ್ತರು ಮನೆ ಮನೆಗೆ ಹೋಗಿ ಮತದಾರರ ಮನಕ್ಕೆ ಮುಟ್ಟುವಂತೆ ತಿಳಿ ಹೇಳಿ
ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದರು.
ರೈತರ ಹಾಗೂ ದೀನ ದಲಿತರ ಆಶೋತ್ತರಗಳಿಗೆ ಸ್ಪಂದಿಸಿ ಆಡಳಿತ ನಡೆಸುತ್ತದೆ ಎನ್ನುವ ಮಹತ್ವದ ಪ್ರಣಾಳಿಕೆಯನ್ನು
ಜನತೆಯ ಮುಂದಿಡುವ ನಿಟ್ಟಿನಲ್ಲಿ ಮನೆ ಮನೆಗೆ ಕುಮಾರಣ್ಣ ಎಂಬ ವಿನೂತನ ಅಭಿಯಾನವನ್ನು ಈ ಕ್ಷೇತ್ರದ 102 ಹಳ್ಳಿಗಳಲ್ಲಿ ಪ್ರತಿಯೊಂದು ಪ್ರತಿ ಮನೆಗೆ ಭೇಟಿ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಡಾ| ಮುತ್ತು ಮನಗೂಳಿ ಅವರು ಯುವಕರಿಗೆ ಮಾಲೆ ಹಾಕುವ ಮೂಲಕ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಜೆಡಿಎಸ್ ಪಕ್ಷದ ರೇಷ್ಮಾ ಪಡೆಕನೂರ ಸೇರಿದಂತೆ ಪಕ್ಷದ ಹಿರಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.