ಕೋವಿಡ್ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿ
Team Udayavani, May 31, 2021, 8:07 PM IST
ವಿಜಯಪುರ: ನರೇಂದ್ರ ಮೋದಿ ದೇಶದ ಪ್ರಧಾನಿಯಾಗುತ್ತಲೇ ದೇಶದ ಅಭಿವೃದ್ಧಿ ದಿಕ್ಕನ್ನೇ ಬದಲಿಸಿದರು. ಎರಡು ವರ್ಷಗಳಿಂದ ದೇಶದಲ್ಲಿ ಕಾಣಿಸಿಕೊಂಡಿರುವ ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸಂಜೀವಿನಿ ಎನಿಸಿದ ಲಸಿಕೆ, ಔಷ ಧ ಕಂಡು ಹಿಡಿಯುವಂಥ ಮಹತ್ವದ ಹೆಜ್ಜೆಯಲ್ಲಿ ಯಶಸ್ವಿಯಾಗಿದ್ದಾರೆ.
ಸಜ್ಜನಶೀಲವಾಗಿ ಕೆಲಸ ಮಾಡಲು ಬಾರದ ಪ್ರತಿಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿವೆ ಎಂದು ಸಂಸದ ರಮೇಶ ಜಿಗಜಿಣಗಿ ಟೀಕಿಸಿದರು. ರವಿವಾರ ನಗರದಲ್ಲಿ ಮೋದಿ ಅವರ ಎರಡನೇ ಅವ ಧಿಯ ಸರ್ಕಾರ ಅ ಧಿಕಾರಕ್ಕೆ ಬಂದ ಎರಡನೇ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇವಾ ಸಪ್ತಾಹದ ಅಂಗವಾಗಿ ಬಿಜೆಪಿ ನಗರ ಘಟಕ ಹಮ್ಮಿಕೊಂಡಿದ್ದ ಮಾಸ್ಕ್, ಸ್ಯಾನಿಟೈಸರ್, ಆಹಾರ ಕಿಟ್ ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೌರಕಾರ್ಮಿಕರಿಗೆ ಸನ್ಮಾನ ಮಾಡಿ ಮಾತನಾಡಿದ ಅವರು, ಕೋವಿಡ್-19ರ ವಿರುದ್ಧ ಹೋರಾಟಕ್ಕೆ ನಾವೆಲ್ಲ ಪ್ರಧಾನಿಯವರ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದೆ ಕೋವಿಡ್ ವಿರುದ್ಧ ಹೋರಾಟದಲ್ಲಿ ನಿರಂತರ ಶ್ರಮಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಭಾರತ ಕೈಗೊಂಡ ಕ್ರಮಗಳಿಗೆ ವಿಶ್ವದ ದೇಶಗಳು ಭಾರತವನ್ನು, ಪ್ರಧಾನಿ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಪಕ್ಷದ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ನಗರ ಮಂಡಲ ಅಧ್ಯಕ್ಷ ಮಳುಗೌಡ ಪಾಟೀಲ, ಉಮೇಶ ಕಾರಜೋಳ, ಶಿವರುದ್ರ ಬಾಗಲಕೋಟ, ರವಿಕಾಂತ ಬಗಲಿ, ಗೋಪಾಲ ಘಟಕಾಂಬಳೆ, ಪಾಪುಸಿಂಗ್ ರಜಪೂತ, ಸಂತೋಷ ನಿಂಬರಗಿ, ವಿಜಯ ಜೋಶಿ, ಸತೀಶ ಪಾಟೀಲ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದಿಂದ ಮಹಾನಗರ ಪಾಲಿಕೆ ಪೌರಕಾರ್ಮಿಕರಿಗೆ ಸನ್ಮಾನಿಸಿ ಉಪಾಹಾರ ವಿತರಿಸಲಾಯಿತು. ಅಲ್ಲದೇ ಕೊಲ್ಲಾಪುರದ ಕನೇರಿಮಠ ಕಾಡಸಿದ್ದೇಶ್ವರ ಶ್ರೀಗಳಿಂದ ಹಾಗೂ ಆರೆಸ್ಸೆಸ್ ತಯಾರಿಸಿದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನೀರಿನ ಬಾಟಲ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.