ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬಿಇಒ ಭೇಟಿ
Team Udayavani, Jun 22, 2020, 1:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಲ್ಹಾರ: ಬಸವನ ಬಾಗೇವಾಡಿ ಬಿಇಒ ಬಸವರಾಜ್ ತಳವಾರ ಹಾಗೂ ಡಿವೈಎಸ್ಪಿ ಇ. ಶಾಂತವೀರ ಅವರು ಭಾನುವಾರ ತಾಲ್ಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.
ಹಾಗೆಯೇ ಪಟ್ಟಣದ ಎರಡು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಬಿಇಒ ಬಸವರಾಜ್ ತಳವಾರ ಮಾತನಾಡಿ, ತಾಲೂಕಿನಲ್ಲಿ ಈ ವರ್ಷ ಒಟ್ಟು 5,231 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು 15 ಪರೀಕ್ಷಾ ಕೆಂದ್ರಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ ಸೋಂಕು ಮುನ್ನೆಚ್ಚರಿಕಾ ಕ್ರಮವಾಗಿ ಬ್ಲಾಕ್‌ಗಳಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ಹಾಕದೇ ವಿದ್ಯಾರ್ಥಿಗಳನ್ನು ಒಂದು ಮೀಟರ್ ಅಂತರದಲ್ಲಿ ಕೂರಿಸಲಾಗುವುದು. ಇದಕ್ಕಾಗಿ ಪರೀಕ್ಷಾ ಕೇಂದ್ರಗಳ ಪಕ್ಕದ ಶಾಲೆಗಳನ್ನು ಸಹ ಈ ವರ್ಷ ಪರೀಕ್ಷಾ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು.
ಡಿವೈಎಸ್ಪಿ ಇ. ಶಾಂತವೀರ ಮಾತನಾಡಿ, ಪರೀಕ್ಷೆಗಳಲ್ಲಿ ನಕಲು ನಡೆಯದಂತೆ ಹಾಗೂ ಪಾಲಕರು, ವಿದ್ಯಾರ್ಥಿಗಳ ಕಡೆಯವರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬ್ಯಾರಿಕೇಡ್ ನಿರ್ಮಿಸುತ್ತಿದ್ದು, ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಪ್ರವೇಶ ಪತ್ರವಿರುವ ಹಾಗೂ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸುತ್ತಲಿನ ನೆಟ್ ಸೆಂಟರ್‌ಗಳು ಹಾಗೂ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ತಿಳಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.