ಧರ್ಮದ ದಾರಿಯಲ್ಲಿ ನಡೆಯಿರಿ

ಮುಳುಗಡೆ ಪರಿಹಾರ ಹಣದಿಂದ ಗಣೇಶ ದೇವಸ್ಥಾನ ನಿರ್ಮಿಸಿದ್ದು ಶ್ಲಾಘನೀಯ

Team Udayavani, Jan 27, 2020, 4:11 PM IST

27-Janauary-24

ಕೊಲ್ಹಾರ: ಇಂದಿನ ದಿನಮಾನಗಳಲ್ಲಿ ಯುವಕರು ತಮ್ಮ ದಿನನಿತ್ಯದ ಕಾಯಕದ ಜೊತೆಗೆ ಭಕ್ತಿಮಾರ್ಗವನ್ನು ರೂಢಿಸಿಕೊಂಡು ಅಧ್ಯಾತ್ಮದ ಒಲವಿನಿಂದ ಧರ್ಮದ ದಾರಿಯಲ್ಲಿ ಸಾಗಬೇಕು ಎಂದು ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಗಣೇಶ ಯುವಕ ಮಂಡಳ ನಿರ್ಮಿಸಿರುವ ವಿಘ್ನೇಶ್ವರ ದೇವಸ್ಥಾನದ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪಣೆ ಮತ್ತು ಕಳಸಾರೋಹಣ ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ನಾವು ನಂಬಿದ ದೇವರ ಮೊರೆಯಲ್ಲಿ ನಂಬಿಕೆ ಅಡಿಯಲ್ಲಿ ಸಾಗಿದಾಗ ಜ್ಞಾನೋದಯವಾಗಿ ದೇವರ ಅನುಗ್ರಹವಾಗುತ್ತದೆ. ಇದರಿಂದ ಸನ್ಮಾರ್ಗದಲ್ಲಿ ಬದುಕಲು ಸಾಧ್ಯವಾಗುತ್ತದೆ. ನಾಗರಿಕ ಸಮಾಜ ದೈವ ಭಕ್ತಿ ಕಡೆಗೆ ಹೆಚ್ಚಿನ ಒಲವನ್ನು ತೋರಿಸಬೇಕು ಎಂದರು.

ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಮಾತನಾಡಿ, 1972ರಲ್ಲಿ ಹಳೆ ಕೊಲ್ಹಾರ ಗ್ರಾಮದ ಯುವಕರ ಪಡೆ ರಚಿಸಿದ ಗಣೇಶ ಯುವಕ ಮಂಡಳ ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಗಣೇಶ ಮೂರ್ತಿ ಪ್ರತಿಷ್ಠಾಪಿಸುತ್ತಿದೆ. ಮುಳುಗಡೆ ಪರಿಹಾರ ಹಣದಿಂದ ನೂತನ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದು ಸಂತಸ. ಈ ದಿಸೆಯಲ್ಲಿ ವಿಘ್ನೇಶ್ವರ ಭಕ್ತರ ಸರ್ವ ಕಂಟಕಗಳನ್ನು ಕಳೆದು ನೆಮ್ಮದಿ ಜೀವನ ಸಾಗಿಸಲು ಪ್ರೇರಣೆ ನೀಡಿ ಆಶೀರ್ವದಿಸಲಿ ಎಂದರು.

ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ದೇವಸ್ಥಾನದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಕೂಡಗಿ ಗ್ರಾಮದ ಗಂಗಾಧರ ಶಾಸ್ತ್ರಿಗಳು ಹೋಮ-ಹವನ, ನವಗ್ರಹ ರುದ್ರಪೂಜೆಯನ್ನು ವೇದ ಮಂತ್ರ ಪಠಣದೊಂದಿಗೆ ನೆರವೇರಿಸಿದರು. ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಗರ್ಭಗುಡಿಯಲ್ಲಿರುವ ಗಣಪತಿ ಮೂರ್ತಿಗೆ ಮಂತ್ರ ಪಠಣದೊಂದಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಿದರು.

ಚನ್ನಪ್ಪ ರಾವತ್ತಪ್ಪ ಬಗಲಿ ಅವರ ಮನೆಯಿಂದ ಆರಂಭವಾದ ಕಳಸದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಗಸಿ ಹತ್ತಿರವಿರುವ ದೇವಸ್ಥಾನಕ್ಕೆ ಆಗಮಿಸಿ ಕಳಸಾರೋಹಣ ಮಾಡಲಾಯಿತು. ಮುತ್ತೈದೆಯರ ಆರತಿ ಉಡಿ ತುಂಬುವ ಕಾರ್ಯಕ್ರಮಗಳು ಜರುಗಿದವು. ವಿನೀತಕುಮಾರ ದೇಸಾಯಿ, ಕಲ್ಲು ದೇಸಾಯಿ, ಶಿವಾನಂದ ತುಂಬರಮಟ್ಟಿ, ಈರಣಗೌಡ ಕೋಮಾರ, ನಾಗಪ್ಪ ಮೇಲಗಿರಿ, ಸಂಗಪ್ಪ ಹುಚ್ಚಪ್ಪಗೋಳ, ಈರಣ್ಣ ಬಿರಾದಾರ, ಮಲ್ಲಯ್ಯ ಗಣಕುಮಾರ, ಈರಯ್ಯ ಮಠಪತಿ, ಇಸ್ಮಾಯಿಲ್‌ಸಾಬನದಾಫ್‌, ಚಂದ್ರಶೇಖರ ಬೆಳ್ಳುಬ್ಬಿ, ಚನ್ನಪ್ಪ ಕೊಕಟನೂರ, ಶಾಂತಕ್ಕ ಬಾಗಿ ಇದ್ದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.