ಬಸ್ಸು ನಿಲ್ದಾಣದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ!
Team Udayavani, Jan 1, 2020, 7:46 PM IST
ವಿಜಯಪುರ: ರೈಲಿನಲ್ಲಿ, ಆ್ಯಂಬುಲೆನ್ಸ್ ನಲ್ಲಿ ಹೆರಿಗೆಯಾಗಿರುವ ಘಟನೆಗಳನ್ನು ನಾವು ಓದಿರುತ್ತೇವೆ. ಅದರೆ ವಿಜಯಪುರದಲ್ಲಿ ಹೊಸ ವರ್ಷದ ಮೊದಲ ದಿನವೇ ಗರ್ಭಿಣಿಯೊಬ್ಬರು ಬಸ್ ನಿಲ್ದಾಣದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆಯೊಂದು ವರದಿಯಾಗಿದೆ.
ಇಲ್ಲಿನ ನಿಡಗುಂದಿ ಪಟ್ಟಣದಲ್ಲಿರುವ ಬಸ್ ನಿಲ್ದಾಣದಲ್ಲಿ ಗರ್ಭಿಣಿಯೊಬ್ಬರು ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭದಲ್ಲೇ ಅವರಿಗೆ ಹೆರಿಗ ಬೇನೆ ಕಾಣಿಸಿಕೊಂಡಿದೆ. ಆಗ ಪರಿಸ್ಥಿತಿಯನ್ನು ಅರಿತುಕೊಂಡ ಸ್ಥಳೀಯರು ಬಸ್ ನಿಲ್ದಾಣದಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಲು ವ್ಯವಸ್ಥೆ ಮಾಡಿದ್ದಾರೆ. ಇದರ ಪರಿಣಾಮವಾಗಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬಸವನಬಾಗೇವಾಡಿ ಮೂಲದ ಮಹಾದೇವಿ ಎಂಬ ಗರ್ಭಿಣಿ ಹೆರಿಗೆಗೆಂದು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ತೆರಳಲು ತಮ್ಮವರೊಂದಿಗೆ ಬಸ್ಸಿಗಾಗಿ ಕಾಯುತ್ತಿದ್ದರು. ಆ ಸಂದರ್ಭದಲ್ಲಿ ಮಹಾದೇವಿಯವರಿಗೆ ಇದ್ದಕ್ಕಿದ್ದಂತೆ ಹೆರಿಗೆ ಬೇನೆ ಕಾಣಿಸಿಕೊಂಡಿದ್ದು ಇದು ತೀವ್ರವಾಗುತ್ತಿದ್ದಂತೆ ನಿಲ್ದಾಣದ ಒಂದು ಪಕ್ಕದಲ್ಲೇ ಬಟ್ಟೆಗಳನ್ನು ಅಡ್ಡವಾಗಿಸಿ ಆಕೆಯ ಹೆರಿಗೆಗೆ ಆಕೆಯ ಜೊತೆಗಿದ್ದವರು ಮತ್ತು ಸ್ಥಳೀಯರು ವ್ಯವಸ್ಥೆ ಮಾಡಿದ್ದಾರೆ. ಬಳಿಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಾದೇವಿ ಇದೀಗ ಸುದ್ದಿಯ ಕೇಂದ್ರವಾಗಿದ್ದಾರೆ.
ಸುರಕ್ಷಿತ ಹೆರಿಗೆಯ ಬಳಿಕ ತಾಯಿ ಮತ್ತು ನವಜಾತ ಶಿಶುವನ್ನು ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಇದೀಗ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದ್ದು, ಮಹಾದೇವಿಯವರಿಗೆ ಇದು ಎರಡನೇ ಹೆರಿಗೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.