ಭಾರತ ವಿಶ್ವ ಗುರುವಾಗಲು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಿ

Team Udayavani, Aug 15, 2020, 4:59 PM IST

ಭಾರತ ವಿಶ್ವ ಗುರುವಾಗಲು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಿ

ವಿಜಯಪುರ: ಭಾರತ ವಿಶ್ವ ಗುರುವಾಗಬೇಕಾದರೆ ಭಾರತೀಯ ಪ್ರಜೆಗಳೆಲ್ಲ ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು. ನಿಸ್ವಾರ್ಥ ಸೇವೆ ನಮ್ಮ ಧ್ಯೇಯವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಗ್ಯಾಂಗ್‌ಬಾವಡಿ ಪ್ರದೇಶದ ಎನ್‌ ಇಕೆಆರ್‌ಟಿಸಿ ಡಿಪೊ ಬಳಿ ಬಿಜೆಪಿ ವಿಜಯಪುರ ಜಿಲ್ಲಾ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ನಾಯಕರ ಮಹತ್ತರ ಕನಸು ನನಸಾಗುವ ಕಾಲ ಹತ್ತಿರ ಬರುತ್ತಿದೆ. ಮೋದಿ ಆಡಳಿತದಲ್ಲಿ ಭಾರತ ಈ ನಿಟ್ಟಿನಲ್ಲಿ ದಿಟ್ಟಹೆಜ್ಜೆ ಇರಿಸಿದೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಅನ್ಯ ಜಿಲ್ಲೆಯಿಂದ ಬಂದು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ನನ್ನನ್ನು ಜಿಲ್ಲೆಯ ಜನರು ಸಹೋದರಿಯಂತೆ ಸ್ವೀಕರಿಸಿದ್ದೀರಿ. ನಿಮ್ಮ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳಲು ಹಾಗೂ ಸರ್ಕಾರದ ಎಲ್ಲ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಸೇವೆ ಮಾಡುತ್ತೇನೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಆರ್‌.ಎಸ್‌. ಪಾಟೀಲ ಕೂಚಬಾಳ ಮಾತನಾಡಿ, ಬಿಜೆಪಿ ಕಾರ್ಯಕರ್ತರಿಗೆ ಕಾರ್ಯಾಲಯ ಕಚೇರಿ ಎಂದರೆ ಅದೊಂದು ಭಾವನಾತ್ಮಕ ಶ್ರದ್ಧಾ ಕೇಂದ್ರವಾಗಿದೆ. ಕೇವಲ ಇಟ್ಟಿಗೆ, ಮರಳು ಸಿಮೆಂಟ್‌ ಮಿಶ್ರಿತ ಜಡ ಗೋಡೆಗಳಿಂದಾದ ಆಸರೆ ಮಾತ್ರವಲ್ಲದೆ ಅವರ ಭಾವನೆಗಳ ದೇವಾಲಯದ ದೇವ ಮಂದಿರ ಎನ್ನುವ ಭಾವನೆ ನಮ್ಮದು ಎಂದರು.

ಬಿಜೆಪಿ ಕಾರ್ಯಾಲಯ ಕಾರ್ಯಕರ್ತನ ಹೃದಯ ಮತ್ತು ಮನಸ್ಸುಗಳನ್ನು ಒಂದಾಗಿಸುವ ಅವನ ಮಸ್ತಕಕ್ಕೆ ಆಹಾರ ನೀಡುವ ಚಿಂತನಾ ಕೇಂದ್ರವಾಗಿದೆ. ಕಾರ್ಯಕರ್ತರ ತೆರೆದ ಕಣ್ಣು ಕಿವಿಗಳಿಗೆ ಆಹ್ಲಾದಕರ ನಾಯಕತ್ವದ ಮಾರ್ಗದರ್ಶನ ನಿಡುವ ಕೇಂದ್ರವಾಗಲಿದೆ. ಇದರ ನಿರ್ಮಾಣಕ್ಕಾಗಿ ತಗುಲುವ ವೆಚ್ಚವನ್ನು ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಜಿಲ್ಲಾ ಕಾರ್ಯಾಲಯ ಕಟ್ಟಡ ನಿಧಿ ಅರ್ಪಣೆ ಮೂಲಕ ಸಂಗ್ರಹಿಸುತ್ತಿದೆ ಎಂದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿದರು. ಪ್ರಾಸ್ತಾವಿಕ ಮಾತನಾಡಿದ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ, ಪಕ್ಷದ ಕಚೇರಿ ನಿರ್ಮಾಣದ ಭೌತಿಕ ಸ್ವರೂಪವನ್ನು ವಿವರಿಸಿದರು.

ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್‌. ಕೆ. ಬೆಳ್ಳುಬ್ಬಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಪಕ್ಷ ಪ್ರಮುಖರಾದ ಪ್ರಕಾಶ ಅಕ್ಕಲಕೋಟ, ಭೀಮಾಶಂಕರ ಹದನೂರು, ವಿಜುಗೌಡ ಪಾಟೀಲ, ದಯಾಸಾಗರ ಪಾಟೀಲ,ಗೂಳಪ್ಪ ಶೆಟಗಾರ, ಮಲ್ಲಿಕಾರ್ಜುನ ಜೋಗುರ, ಶಿವರುದ್ರ ಬಾಗಲಕೋಟ, ವಿವೇಕಾನಂದ ಡಬ್ಬಿ, ವಿಜಯ ಜೋಶಿ ಇತರರು ಇದ್ದರು.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.