ಶಾಸಕರ ದಾಸೋಹ ಕಾರ್ಯ ಶ್ಲಾಘನೀಯ: ಸ್ವಾಮೀಜಿ
Team Udayavani, May 16, 2020, 6:55 AM IST
ತಾಳಿಕೋಟೆ: ಸಿದ್ಧಗಂಗಾ ಮಠದಲ್ಲಿಯ ಶಿಕ್ಷಣದೊಂದಿಗೆ ಅಲ್ಲಿಯ ದಾಸೋಹವನ್ನು ಸ್ವೀಕರಿಸಿ ಬೆಳೆದ ಶಾಸಕ ಎ.ಎಸ್ .ಪಾಟೀಲ(ನಡಹಳ್ಳಿ) ಅವರು ಅಲ್ಲಿಯ ದಾಸೋಹ ಕಾರ್ಯ ಇಲ್ಲಿಯೂ ತಮ್ಮ ಕೈಲಾದ ಮಟ್ಟಿಗೆ ಮುಂದುವರೆಸಿಕೊಂಡು ಹೊರಟಿರುವುದು ಮಾದರಿ ಕಾರ್ಯ ಎಂದು ಗುಂಡಕನಾಳ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣಕ್ಕೆ ವಿವಿಧ ರಾಜ್ಯಗಳಿಂದ ಆಗಮಿಸಿ ವಸತಿ ನಿಲಯಗಳಲ್ಲಿ ಸಾಂಸ್ಥಿಕ ಕ್ವಾರೆಂಟೈನ್ ನಲ್ಲಿ ಉಳಿದುಕೊಂಡಿರುವವರಿಗೆ ಶ್ರೀ ಘನಮಠೇಶ್ವರ ಕಾಲೇಜ್ ಆವರಣದಲ್ಲಿ ಸಿದ್ಧಪಡಿಸಲಾಗುತ್ತಿರುವ ಅಡುಗೆ ತಯಾರಿಕೆಗೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದ ಅವರು, ಬಡತನದಲ್ಲಿ ಹುಟ್ಟಿ ಬೆಳೆದು ಬಂದ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಅವರು ಬಡವರ ಕಷ್ಟ ಅನುಭವಿಸಿದ್ದಾರೆ. ಜನರಿಗಾಗಿ ಜನರಿಗೋಸ್ಕರ ತಮ್ಮ ಜೀವನವನ್ನುಮುಡಿಪಾಗಿಟ್ಟು ಕೆಲಸ ಮಾಡುತ್ತಿದ್ದಾರೆ. ವಿವಿಧ ರಾಜ್ಯಗಳಿಗೆ ದುಡಿಯಲು ಹೋಗಿದ್ದ ಬಡ ಕೂಲಿಕಾರ್ಮಿಕರು ಕೆಲಸವೂ ಇಲ್ಲದೇ ಇತ್ತ ಮರಳಿ ಬರಲೂ ಆಗದೇ ಅಲ್ಲಿಯೇ ಉಳಿದು ಊಟಕ್ಕೂ ಗತಿಯಿಲ್ಲದಂತೆ ತೊಂದರೆ ಪಡುತ್ತಿರುವುದನ್ನು ತಿಳಿದು ಶಾಸಕ ನಡಹಳ್ಳಿ ಅವರು ಆ ಎಲ್ಲರನ್ನು ಮರಳಿ ನಮ್ಮ ತಾಲೂಕಿಗೆ ಕರೆತಂದು ತಿಂಗಳಿಗಾಗುವಷ್ಟು ಊಟದ ಕಿಟ್ ನೀಡಿದ್ದಾರೆ. ಇಂತಹ ದಾಸೋಹವನ್ನು ಮೈಗೂಡಿಸಿಕೊಂಡು ಸಮಾಜಕ್ಕಾಗಿ ಮಿಡಿಯುತ್ತಿರುವ ಹೃದಯಕ್ಕೆ ಶ್ರೀ ಖಾಸ್ಗತರ ಹಾಗೂ ಶ್ರೀ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಸದಾ ಇರಲಿ ಎಂದು ಹಾರೈಸಿದರು.
ಕೊಡೇಕಲ್ಲ ದುರುದುಂಡೇಶ್ವರ ಮಠದ ಶಿವಕುಮಾರ ಶ್ರೀಗಳು, ಶ್ರೀ ಖಾಸYತೇಶ್ವರ ಮಠದ ಸಿದ್ದಲಿಂಗ ದೇವರು, ಶಾಸಕ ಎ.ಎಸ್ .ಪಾಟೀಲ(ನಡಹಳ್ಳಿ, ವಾಸುದೇವ ಹೆಬಸೂರ, ಶಿವಶಂಕರ ಹಿರೇಮಠ, ಎಸ್.ಎಂ.ಸಜ್ಜನ, ರಾಜು ಹಂಚಾಟೆ, ವೇ.ಮುರುಘೇಶ ವಿರಕ್ತಮಠ, ಸಾಗರ ಗುಪ್ತಾ, ಗೌರವ ಹಜೇರಿ, ಕಾಶಿನಾಥ ಗೋಗಿ, ಪ್ರವೀಣ್ ಪಾಟೀಲ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.