ಕಾನೂನು ಅರಿವು ಅಗತ್ಯ
Team Udayavani, Nov 14, 2021, 3:03 PM IST
ಬಸವನಬಾಗೇವಾಡಿ: ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಬಗ್ಗೆ ಅರಿವಿರಬೇಕು. ಅಂದಾಗ ಮಾತ್ರ ಸಮಾಜದಲ್ಲಾಗುವ ಅಪರಾಧಗಳನ್ನು ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಬನಸೋಡೆ ಹೇಳಿದರು.
ಶನಿವಾರ ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಸಭಾಭವನದಲ್ಲಿ ತಾಲೂಕಾಡಳಿತ, ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ತಾಪಂ ಸಹಯೋಗದಲ್ಲಿ ನಡೆದ ಕಾನೂನು ಅರಿವು ಹಾಗೂ ಸರ್ಕಾರಿ ಯೋಜನೆಗಳ ಅನುಕೂಲತೆಗಳ ಕುರಿತು ಹಮ್ಮಿಕೊಂಡ ಮೆಗಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ನಮ್ಮ ದೇಶದ ಪರಂಪರೆ, ಸಂಸ್ಕೃತಿ ಧರ್ಮದ ಆಧಾರದ ಮೇಲೆ ರಚನೆಯಾಗಿದೆ. ಯಾರು ಕಾನೂನಿನ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಆದರೆ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅವಶ್ಯವಾಗಿದೆ. ದೇಶದಲ್ಲಿ ಅಜ್ಞಾನದ ಕೊರತೆಯಿಂದ ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಹೀಗಾಗಿ ಹೊಸ ಹೊಸ ಕಾನೂನುಗಳು ಜಾರಿಯಾಗುತ್ತಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಸರ್ಕಾರ 6ರಿಂದ 16 ವರ್ಷದವರೆಗಿನ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಂಡು ಶಿಕ್ಷಣವಂತರಾಗಬೇಕು ಎಂದರು.
ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ಕೋರ್ಟ್ ಗಳಲ್ಲಿ ದಾವೆ ಹೂಡಿ ಕಾನೂನು ಹೋರಾಟ ಮಾಡುವ ಬದಲು ಕಾನೂನು ಸಮಿತಿಯಿಂದ ಪ್ರತಿ ತಿಂಗಳು ನಡೆಯುವ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ಮಾಡಿಕೊಳ್ಳಬೇಕು. ರಾಜ್ಯ ಕಾನೂನು ಪ್ರಾಧಿಕಾರದಿಂದ ಕಾನೂನು ಸಲಹಾ ಸಮಿತಿಯನ್ನು ರಚಿಸಲಾಗಿದೆ. ಪ್ರತಿಯೊಬ್ಬರೂ ಉಚಿತವಾಗಿ ಕಾನೂನು ಸಲಹೆ ಹಾಗೂ ಸೇವೆಯನ್ನು ಪಡೆಯಬಹುದಾಗಿದೆ ಎಂದರು.
ಸಿವಿಲ್ ನ್ಯಾಯಾಧೀಶ ಸಂದೀಪ ನಾಯಿಕ ಮಾತನಾಡಿ, ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು. ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾನೂನು ಸೇವಾ ಸಮಿತಿಯಿಂದ ಸರ್ಕಾರಿ ಯೋಜನೆಗಳ ಕುರಿತು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬರೂ ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಸರ್ಕಾರದ ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದರು.
ವಕೀಲ ರವಿ ರಾಠೊಡ ಉಪನ್ಯಾಸ ನೀಡಿದರು. ಇದೇ ಸಂಧರ್ಭದಲ್ಲಿ ಪಿಂಚಣಿ ಮಂಜೂರಾತಿಯಾದ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಲಾಯಿತು. ಗೇಡ್-2 ತಹಶೀಲ್ದಾರ್ ಪಿ.ಜೆ.ಪವಾರ, ವಕೀಲರ ಸಂಘದ ಅಧ್ಯಕ್ಷ ಎನ್.ಎಸ್.ಪಾಟೀಲ, ಜಿ.ಆರ್ .ಬೀಳಗಿ, ವಿಜಯ ಕಲ್ಲೂರ, ಸಿಡಿಪಿಒ ಸಂತೋಷ ಮ್ಯಾಗೇರಿ ಇದ್ದರು. ವೀರೇಶ ಗುಡಲಮನಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.