ಸರ್ಕಾರದ ಯೋಜನೆಗಳ ಸದ್ಬಳಕೆಯಾಗಲಿ
Team Udayavani, Apr 10, 2022, 5:29 PM IST
ವಿಜಯಪುರ: ಸರಕಾರದ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ದೊರೆತಾಗ ಮಾತ್ರ ಆ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಡಾ| ಎಂ.ಬಿ. ಪಾಟೀಲ ಹೇಳಿದರು.
ತಿಕೋಟಾ ತಾಪಂ ಕಚೇರಿಯಲ್ಲಿ ಆಯೋಜಿಸಿದ್ದ ತಾಪಂ ಕಚೇರಿ ಉದ್ಘಾಟನೆ ಹಾಗೂ ದಿವ್ಯಾಂಗರಿಗೆ ಕಂಪ್ಯೂಟರ್ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದಿಂದ ಫಲಾನುಭವಿಗಳಿಗೆ ಬರುವ ವಿವಿಧ ಯೋಜನೆಗಳಾಗಲಿ, ಅನುದಾನವಾಗಲಿ ನಿಜವಾದ ಫಲಾನುಭವಿಗಳಿಗೆ ದೊರಕಲಿ ಆ ಮುಖಾಂತರ ಎಲ್ಲ ಜನರ ಅಭಿವೃದ್ಧಿ ಆಗಲಿದೆ ಎಂದರು.
ತಾಪಂ ಇಒ ಸೇರಿದಂತೆ ಬಬಲೇಶ್ವರ ಕ್ಷೇತ್ರದಲ್ಲಿರುವ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದು ನಿಜಕ್ಕೂ ನನಗೆ ಹೆಮ್ಮೆಯ ವಿಷಯ ಎಂದರು.
ಬರುವ ದಿನಗಳಲ್ಲೂ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಸಮಸ್ಯೆ ಬಂದರೂ ಅದಕ್ಕೆ ಪರಿಹಾರ ಒದಗಿಸಲು ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.
ಅದೇ ರೀತಿ ಪಂಚಾಯತ್‌ಗಳಲ್ಲಿ ಅಧಿಕಾರಿಗಳಿಗೆ ಸದಾ ಬೆನ್ನೆಲುಬಾಗಿ ಸದಸ್ಯರು ಮತ್ತು ಸಾರ್ವಜನಿಕರು ಇರಬೇಕು. ಯಾವದೇ ಕಾರಣಕ್ಕೂ ಚುನಾಯಿತ ಪ್ರತಿನಿಧಿಗಳ ಅಡ್ಡ ದಾರಿ ಹಿಡಿಯದೇ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದರು.
ಪ್ರಾಸ್ತಾವಿಕ ಮಾತನಾಡಿ ತಾಪಂ ಇಒ ಎಚ್.ಡಿ. ರಾಜೇಶ, ತಾಪಂ ಕಾರ್ಯಾಲಯಕ್ಕೆ ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಶಾಸಕರನ್ನು ಸಂಪರ್ಕಿಸಿದಾಗ ಮಾರ್ಗದರ್ಶನ ಹಾಗೂ ಸಹಕಾರದಿಂದ ಹಾಜಿ ಮಸ್ತಾನ್ ದರ್ಗಾದ ಯಾತ್ರಿ ನಿವಾಸವನ್ನು ನಮ್ಮ ಕಾರ್ಯಾಲಯಕ್ಕೆ ನೀಡಿದ್ದಾರೆ. ಜೊತೆಗೆ ಎಲ್ಲ ಗ್ರಾಪಂಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಕಾರ್ಯಾಲಯದ ಆವರಣದಲ್ಲಿ ಸುಂದರ ಉದ್ಯಾನವನ ನಿರ್ಮಿಸಲಾಗಿದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ, ಮಾಜಿ ಉಪಾಧ್ಯಕ್ಷ ತಮ್ಮಣ್ಣ ಹಂಗರಗಿ, ಭಾಗೀರಥಿ ತೇಲಿ, ಜೀವಪ್ಪ ಕುರ್ಪಿ, ಪ್ರಭಾವತಿ ನಾಟೀಕಾರ, ಆರ್.ವಿ. ಮಾಸರೆಡ್ಡಿ, ಎಸ್.ಎಸ್.ಅಳ್ಳಗಿ, ವಿ.ಎಸ್. ಪುಟ್ಟಿ, ಕಲ್ಲಪ್ಪ ನಂದರಗಿ, ಪ್ರಕಾಶ ಮಸಳಿ, ಅಪರ್ಣಾ ಬದಾಮಿ, ಚೇತನ ರಾಠೊಡ, ವಿಜಯ ಯರಗಟ್ಟಿ, ಶಿವರಾಜ್ ಬಿರಾದಾರ, ಸಿದ್ರಾಯ ದಾಶ್ಯಾಳ, ಸಂತೋಷ ಗೊಜ್ಜಿ, ಮಹಾಶಾಂತ ಬಂದಿ ಇದ್ದರು. ಶಿವಾನಂದ ಹಂಜಗಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.