![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
ನರೇಗಾ ಯೋಜನೆ ಸದ್ಬಳಕೆಯಾಗಲಿ : ಸಿಇಒ
Team Udayavani, Jun 19, 2021, 4:07 PM IST
![d್ಗಹಜಹಗ್ದ್ಗಹಜ](https://www.udayavani.com/wp-content/uploads/2021/06/d್ಗಹಜಹಗ್ದ್ಗಹಜ-620x372.jpg)
ಚಡಚಣ: ಲಾಕ್‌ಡೌನ್ ಸಮಯದಲ್ಲಿ ಹಳ್ಳಿಗರಿಗೆ ಕೆಲಸವಿರುವುದಿಲ್ಲ. ನಿಮ್ಮ ಜೀವನೋಪಾಯಕ್ಕಾಗಿ ನರೇಗಾ ಯೋಜನೆ ಆರಂಭಿಸಲಾಗಿದ್ದು ಅಗತ್ಯ ಇರುವವರು ಸದ್ಬಳಕೆ ಮಾಡಿಕೊಳ್ಳುವಂತೆ ಜಿಪಂ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸಲಹೆ ನೀಡಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ ಇಂಚಗೇರಿ ಕೆರೆ ಮತ್ತು ಕನಕನಾಳ ಹಳ್ಳದ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.
ನೀವು ಸರಿಯಾಗಿ ಕೆಲಸ ಮಾಡಿದರೆ ಯಾವಾಗಲೂ ನಿಮಗೆ ಕೆಲಸ ಸಿಗುವುದು. ಗಂಡು ಹೆಣ್ಣಿಗೆ ಸಮಾನವಾಗಿ ವೇತನ ನೀಡಲಾಗುವದು. ಪ್ರತಿಯೊಬ್ಬರಿಗೂ 289 ರೂ. ಹಾಗೂ 10 ರೂ. ಸಲಕರಣೆಗಳ ಸಲುವಾಗಿ ನೀಡಲಾಗುವದು. ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿರಿ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿರಿ. ನೀವುಗಳು ಕೆಲಸಕ್ಕೆ ತಯಾರಾದರೆ ಯಾವಾಗಲೂ ಕೆಲಸ ಕೊಡುವ ಜವಾಬ್ದಾರಿ ನಮ್ಮದು. ನಿಮಗೆ ಯಾವುದೇ ತೊಂದರೆಗಳಿದ್ದರೆ ತಿಳಿಸಿರಿ ಎಂದು ಹೇಳಿದರು.
ಅಂಗವಿಕಲರು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕೆಲಸಕ್ಕೆ ಬಂದರೆ ಅವರು ಶೇ. 50 ಕೆಲಸ ಮಾಡಿದರೆ ಪೂರ್ಣ ಪಗಾರ ಕೊಡಲಾಗುವದು. ಇದರಿಂದ ಜೀವನೋಪಾಯ ಆರ್ಥಿಕ ಪರಿಸ್ಥಿತಿ ಸುಧಾರಿಸುವದು. ಚಿಕ್ಕ ಮಕ್ಕಳು ಬಂದರೆ ಅವರನ್ನು ಗಮನಿಸಲು ಆಯಾಗಳನ್ನು ನೇಮಿಸಿ ಅವರಿಗೆ ಏನಾದರೂ ತೊಂದರೆಯಾದರೆ ಪ್ರಥಮ ಚಿಕಿತ್ಸೆ ನೀಡಲಾಗುವುದು ಎಂದರು.
45 ವರ್ಷ ಮೇಲ್ಪಟ್ಟ ಮಹಿಳೆಯರು ಸೇರಿದಂತೆ ಎಲ್ಲರಿಗೂ ಆರೋಗ್ಯ ಇಲಾಖೆಯಿಂದ ಲಸಿಕೆ ಮ¤ತು ಮಾಸ್ಕ್ ನೀಡಲಾಗುವದು. ಇಂಚಗೇರಿ ಕೆರೆಯಲ್ಲಿ 77 ಜನರು ಕೆಲಸ ಮಾಡುತ್ತಿದ್ದರೆ, ಕನಕನಾಳದಲ್ಲಿ 110 ಜನರು ಕೆಲಸ ಮಾಡುತ್ತಿದ್ದಾರೆ ಎಂದರು. ತಾಪಂ ಇಒ ಸಂಜಯ ಖಡಗೇಕರ, ಸಹಾಯಕ ನಿರ್ದೇಶಕ ಮಹಾಂತೇಶ ಹೋಗೊಡಿ, ಮಹೇಶ ದೈವಾಡಿ, ಪಿಡಿಒ ವಿಶ್ವನಾಥ ರಾಠೊಡ, ಟೆಕ್ನಿಕಲ್ ಕೋ-ಆರ್ಡಿನೇಟರ್ ಶಿವಶರಣ, ಬಾಬರ, ಅರುಣ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ](https://www.udayavani.com/wp-content/uploads/2024/12/vru-150x86.jpg)
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
![1-vijay](https://www.udayavani.com/wp-content/uploads/2024/12/1-vijay-150x91.jpg)
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![23-](https://www.udayavani.com/wp-content/uploads/2024/12/23--150x90.jpg)
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
![22-](https://www.udayavani.com/wp-content/uploads/2024/12/22--150x90.jpg)
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.