ವೋಟರ್ ಸ್ಲಿಪ್ ಮತದಾರನಿಗೆ ತಲುಪಲಿ: ಡಿಸಿ
Team Udayavani, Oct 21, 2021, 2:39 PM IST
ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭಾ ಉಪ ಚುನಾವಣೆಗಾಗಿ ಮತಕ್ಷೇತ್ರದ ವೋಟರ್ ಸ್ಲಿಪ್‌ಗಳು ಮತದಾರನಿಗೆ, ಆತನ ಕುಟುಂಬದವರಿಗೆ ಮಾತ್ರ ಒದಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಸಿಂದಗಿ ಉಪ ಚುನಾವಣೆಗೆ ಸಂಬಂಧಪಟ್ಟಂತೆ ಕೈಗೊಂಡ ವಿವಿಧ ಪೂರ್ವ ಸಿದ್ಧತೆಗಳ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದ ಅವರು, ಸಿಂದಗಿ ಕ್ಷೇತ್ರದ ಮತದಾರ ವೋಟರ್ ಸ್ಲಿಪ್‌ಗಳು ವಿತರಣೆಯಲ್ಲಿ ಯಾವುದೇ ಮಧ್ಯವರ್ತಿ, ರಾಜಕೀಯ ವ್ಯಕ್ತಿಗಳ ಹಸ್ತಕ್ಷೇಪ ಇಲ್ಲದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸರಿಯಾದ ವರದಿ ಸಲ್ಲಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಚುನಾವಣೆಯಲ್ಲಿ ಮತಕ್ಷೇತ್ರದ ವಿಕಲಚೇತನರಿಂದ ಶೇಕಡಾ ನೂರರಷ್ಟು ಮತದಾನ ಆಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ವಾಹನ ವ್ಯವಸ್ಥೆಯಂತಹ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸೆಕ್ಟರ್ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಿದ ಅವರು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಈ ಬಗ್ಗೆ ವರದಿ ಸಲ್ಲಿಸುವಂತೆ ಅವರು ಸಿಂದಗಿ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಮತದಾನ ದಿನದಂದು ಮತಗಟ್ಟೆಗಳಿಗೆ ನೇಮಿಸಿದ ಚುನಾವಣಾ ಸಿಬ್ಬಂದಿಗಳಿಗೆ ಆಹಾರದ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಇವಿಎಂ ಯಂತ್ರಗಳಲ್ಲಿ ದೋಷಗಳು ಕಂಡು ಬಂದರೆ ಕೂಡಲೇ ಅದನ್ನು ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಚುನಾವಣೆಗೆ ನೇಮಿಸಿದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಲೋಪ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪಿಆರ್‌ಒ ಮತ್ತು ಎಪಿಆರ್‌ಒಗಳು ಇನ್ನಷ್ಟು ಚುರುಕಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಬೇಕು. ಇದಕ್ಕಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಸಿಂದಗಿ ಚುನಾವಣಾಧಿಕಾರಿ ರಾಹುಲ್ ಸಿಂಧೆ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.