ಪಾನಮತ್ತನಿಂದ ಜೀವ ಬೆದರಿಕೆ: ಭದ್ರತೆ ಕೋರಿ ವಕೀಲ ಮನವಿ
Team Udayavani, Jun 4, 2022, 3:57 PM IST
ವಿಜಯಪುರ: ನಗರದ ಸಜ್ಜನ ಗಾಣಿಗರ ಸೇವಾ ಸಂಘದ ಸಮಸ್ಯೆಗಳ ವಿಚಾರವಾಗಿ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ತಡರಾತ್ರಿ ತಮ್ಮ ಕಚೇರಿಗೆ ಆಗಮಿಸಿ ಜೀವ ಬೆದರಿಕೆ ಹಾಕಿದ್ದಾರೆ. ಕೂಡಲೇ ತಮಗೆ ರಕ್ಷಣೆ ನೀಡುವಂತೆ ಕೋರಿ ನಗರದ ವಕೀಲ ಡಾ|ಬಾಬು ಸಜ್ಜನ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಡಾ| ಬಾಬು ಸಜ್ಜನ, ನನ್ನ ಸಹೋದರ ಬಸವರಾಜ ಸಜ್ಜನ ಜೊತೆ ಮೇ 28ರಂದು ನಗರದಲ್ಲಿರುವ ಸದಾಶಿವನಗರ ಬಡಾವಣೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೆ. ರಾತ್ರಿ 10:30ರ ಸುಮಾರಿಗೆ ನನ್ನ ಕಚೇರಿಗೆ ಆಗಮಿಸಿದ ಪಾನಮತ್ತ ಸಿದ್ದಲಿಂಗ ಕೊರಲೂರು (ಸಜ್ಜನ) ಎಂಬ ವ್ಯಕ್ತಿ ಸಜ್ಜನ ಗಾಣಿಗರ ಸೇವಾ ಸಂಘದವರು ಹೇಳಿದಂತೆ ಸಮಸ್ಯೆ ಬಗೆಹರಿಸಿಕೊಳ್ಳದಿದ್ದರೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿದ್ದಾರೆ.
ನನಗೆ ಪ್ರಾಣ ಬೆದರಿಕೆ ಹಾಕಿರುವ ವ್ಯಕ್ತಿಯ ಹಿಂದೆ ಕೆಲವರ ಸಂಚು ಅಡಗಿದ್ದು, ಜಲನಗರ ಪೊಲೀಸ್ ಠಾಣೆಯಲ್ಲಿ ಸಿಸಿಟಿವಿ ದೃಶ್ಯಾವಳಿ ಸಮೇತ ಪ್ರಕರಣ ದಾಖಲಿಸಿದ್ದೇನೆ. ಆದರೆ ಅನಾರೋಗ್ಯಕರ ಬೆಳವಣಿಗೆಯಿಂದ ನನಗೆ ಜೀವ ಭಯವಿದ್ದು ಸಂಬಂಧಿ ಸಿವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಂಡು ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.
ಗುರಲಿಂಗಪ್ಪ ಸಜ್ಜನ, ಶಿವಕುಮಾರ ಸಜ್ಜನ, ಡಾ| ಶ್ರೀಶೈಲಪ್ಪ ಸಜ್ಜನ, ವಿ.ಎಸ್. ನಾಸಿ, ಪಿ.ಪಿ. ಖ್ಯಾತನ, ಕೆ.ಎನ್. ಮೇಟಿ, ಮಹದೇವಪ್ಪ ದೇವರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.