ಸ್ವಾತಂತ್ರ್ಯ ದಿನಾಚರಣೆಗೆ ಸ್ಥಳ ಪರಿಶೀಲನೆ
Team Udayavani, Aug 12, 2020, 2:56 PM IST
ವಿಜಯಪುರ: ಜಿಲ್ಲಾಡಳಿತದಿಂದ ಆ. 15ರಂದು ಸ್ವಾತಂತ್ರ್ಯೊತ್ಸವ ಆಚರಣೆಗಾಗಿ ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್ ಅವರು ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಕ್ರೀಡಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದರು.
ಸ್ವಾತಂತ್ರ್ಯ ದಿನಾಚರಣೆಗಾಗಿ ಯಾವುದೇ ಲೋಪ ಇಲ್ಲದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮ ಆರಂಭಕ್ಕೆ ಮುನ್ನ ಗಣ್ಯರಿಗೆ ಕ್ರೀಡಾಂಗಣದಲ್ಲಿರುವ ದೈಹಿಕ ಶಿಕ್ಷಣ ಅದ್ಯಯನ ಕೇಂದ್ರದಲ್ಲಿ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಧ್ವಜಾರೋಹಣ ಸಂದರ್ಭದಲ್ಲಿ ಪತ್ರಕರ್ತರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೇಡ್ ಕೈಗೊಳ್ಳುವಾಗ ಯಾವುದೇ ರೀತಿಯಲ್ಲಿ ಲೋಪಗಳಾಗದಂತೆ ಪರೇಡ್ ಸ್ಥಳ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಪೂರ್ವ ಸಿದ್ಧತೆಯಾಗಿ ಪರೇಡ್ ಮಾಡಲು ಹಾಗೂ ಧ್ವಜಾರೋಹಣಕ್ಕೆ ಮೊದಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್ ಮೋಹನಕುಮಾರಿ, ನಿಂಗಪ್ಪ ಗೋಠೆ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.