ಟಿಎಪಿಎಂಸಿಗೆ ರೈತರಿಂದ ಬೀಗ


Team Udayavani, Feb 7, 2018, 3:14 PM IST

bid-2.jpg

ಇಂಡಿ: ತೊಗರಿ ಖರೀದಿ ಕೇಂದ್ರದಲ್ಲಿ ತೊಗರಿ ಖರೀದಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ರೈತ ಮುಖಂಡರ ನೇತೃತ್ವದಲ್ಲಿ ರೈತರು ಮಂಗಳವಾರ ಟಿಎಪಿಎಂಸಿ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಂಬಲ ನೀಡಿ ರೈತರ ತೊಗರಿ ಖರೀದಿಸಲು ಮುಂದಾಗಿವೆ. ಆದರೆ ಅಧಿಕಾರಿಗಳು ಸರಿಯಾಗಿ ಕಾರ್ಯ ಮಾಡುವುದೇ ಇರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದರು.

ಅಗ ಟಿಎಪಿಎಂಸಿ ವ್ಯವಸ್ಥಾಪಕ ಆರ್‌.ಜಿ. ಕಾವಿ ಮಧ್ಯ ಪ್ರವೇಶಿಸಿ ಖರೀದಿ ಕೇಂದ್ರದಲ್ಲಿ ಹಮಾಲರು ಪ್ರತಿ ಟನ್‌ ತೊಗರಿಗೆ 60 ರೂ. ಬೇಡಿಕೆ ಇಟ್ಟಿದ್ದಾರೆ. ಆದರೆ ಕಾಂಟ್ರ್ಯಾಕ್ಟರ್‌ ಕೇವಲ 15 ರೂ. ನೀಡುತ್ತಿದ್ದಾರೆ. ಹೀಗಾಗಿ ಹಮಾಲರು ತೊಗರಿ ತುಂಬಿಕೊಳ್ಳಲು ಮುಂದಾಗುತ್ತಿಲ್ಲ ಎಂದರು.

ರೈತ ಮುಖಂಡ ಸಿದ್ದಲಿಂಗ ಹಂಜಗಿ ಮಾತನಾಡಿ, ಅಧಿಕಾರಿಗಳು ಕಾಂಟ್ರ್ಯಾಕ್ಟರ್‌ ಜೊತೆ ಮಾತನಾಡಿ ತೊಗರಿ ಖರೀದಿಸಲು ಮುಂದಾಗಬೇಕು. ಇಲ್ಲವಾದರೆ ರೈತರೆಲ್ಲರೂ ಧರಣಿ ನಡೆಸುತ್ತೇವೆಂದು ಕಾರ್ಯಾಲಯದ ಮುಂದೆ ರೈತರೊಂದಿಗೆ ಕುಳಿತುಕೊಂಡರು. 

ವ್ಯವಸ್ಥಾಪಕ ಕಾವಿ ಗುತ್ತಿಗೆದಾರನ ಜೊತೆ ದೂರವಾಣಿ ಮೂಲಕ ಮಾತನಾಡಿದರು. ಗುತ್ತಿಗೆದಾರರಿಗೆ ಇಲ್ಲಿನ ಸಮಸ್ಯೆ ಬಗ್ಗೆ ತಿಳಿಸಿದಾಗ ನಾಳೆಯಿಂದ ಖರೀದಿ ಪ್ರಾರಂಭಿಸಿ ನಾನು ಹಮಾಲರ ಸಮಸ್ಯೆ ಪರಿಹರಿಸುತ್ತೇನೆ ಎಂದು ಹೇಳಿದಾಗ ರೈತರು ಪ್ರತಿಭಟನೆ ಹಿಂಪಡೆದರು.

ಈ ಸಂದರ್ಭದಲ್ಲಿ ಭೀಮಾಶಂಕರ ಆಳೂರ, ಬಿ.ಎಸ್‌. ಹಂಜಗಿ, ಜಕ್ಕಪ್ಪಗೌಡ ಬಿರಾದಾರ, ಅರವಿಂದ ನಾಡಗೌಡ, ಬಾಳಾಸಾಹೇಬ ಪಾಟೀಲ, ಚಾಂದಸಾವ ಸೆ„ಯದ್‌, ಮಾಂತಪ್ಪ ಲಾಳಸಂಗಿ, ಪ್ರೇಮಸಿಂಗ ಜಾದವ, ಚಂದ್ರಶೇಖರ ಹಂಜಗಿ, ಮಲ್ಲು ರಾಠೊಡ, ಮಾಳು ಮುಚ್ಚಂಡಿ, ಶಿವಾನಂದ ನಾಟೀಕಾರ, ರವಿಕಾಂತ ಹೊಟಗಿ, ಸಿದ್ದು ಹದಗಲ್‌, ಬಸವರಾಜ ಲಾಳಸಂಗಿ, ಈರಪ್ಪ ಬಿರಾದಾರ, ಅಶೋಕ ರಾಠೊಡ, ಬಾಬು ರಾಠೊಡ, ರಮೇಶ ರಾಠೊಡ, ತುಕಾರಾಮ ರಾಠೊಡ, ರಮೇಶ ಜಾಧವ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.