ಮಕ್ಕಳನ್ನು ಬುದ್ದಿವಂತರಾಗಿ ಮಾಡಿ: ನಡಹಳ್ಳಿ

Team Udayavani, Oct 29, 2021, 11:37 AM IST

12school

ಮುದ್ದೇಬಿಹಾಳ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಶಿಕ್ಷಕರು ತಮ್ಮ ಬುದ್ಧಿಮತ್ತೆಯಿಂದ ಮಕ್ಕಳನ್ನೂ ಬುದ್ಧಿವಂತರಾಗಿ ಮಾಡಲು ಪಣ ತೊಡಬೇಕು. ಶಿಕ್ಷಕ ವೃತ್ತಿ ಸಂಬಳ ತರುವ ನೌಕರಿ ಎಂದು ಪರಿಗಣಿಸದೇ ತಮ್ಮ ಪಾಂಡಿತ್ಯ ಪ್ರದರ್ಶನ, ದೇಶಕ್ಕೆ ಜ್ಞಾನವಂತರು, ಬುದ್ಧಿವಂತರನ್ನು ಕೊಡುಗೆಯಾಗಿ ನೀಡುವ ಸದವಕಾಶವೆಂದು ತಿಳಿದು ಕೆಲಸ ಮಾಡಬೇಕು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಮುದ್ದೇಬಿಹಾಳ ತಾಲೂಕಿನ ಗೋನಾಳ ಪಿಬಿ, ಕೊಪ್ಪ, ಕೊಪ್ಪ ತಾಂಡಾ, ಗುಂಡಕರ್ಚಗಿ, ಗುಡದಿನ್ನಿ, ಆಲಕೊಪ್ಪರ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ತಮ್ಮಕುಟುಂಬದಿಂದ ಕೊಡ ಮಾಡುತ್ತಿರುವ ಉಚಿತ ನೋಟ್‌ಬುಕ್‌ ವಿತರಿಸಿ, ನಂತರ ನಡೆದ ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆ ಮಕ್ಕಳು ಬಡಕುಟುಂಬಕ್ಕೆ ಸೇರಿದವರಾಗಿರುತ್ತಾರೆ. ಇವರಿಗೆ ಖಾಸಗಿ ಶಾಲೆಗಳಲ್ಲಿ ಹೆಚ್ಚು ಶುಲ್ಕ ಕೊಟ್ಟು ಕಲಿಯುವ ಶಕ್ತಿ ಇರುವುದಿಲ್ಲ. ಇದನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಬೇಕು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆಗೊಂಡು ಶಿಕ್ಷಕರಾಗಿ ನೇಮಕಗೊಳ್ಳುವ ಬುದ್ಧಿವಂತ ಶಿಕ್ಷಕರು ತಮ್ಮ ಸಾಮರ್ಥ್ಯ ಒರೆಗೆ ಹಚ್ಚಿ ತೋರಿಸಬೇಕಿದೆ ಎಂದರು.

ಪ್ರತಿ ಶಾಲೆಯಲ್ಲೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಾಸಕರು ವಿದ್ಯಾರ್ಥಿಗಳಿಂದ ಬಂದ ಸಲಹೆ ದಾಖಲಿಸಿಕೊಂಡರು. ವಿದ್ಯಾರ್ಥಿಗಳ ಭವಿಷ್ಯದ ಅನಿಸಿಕೆ ಅವರಿಂದಲೇ ಕೇಳಿ ತಿಳಿದು ಪ್ರೋತ್ಸಾಹಿಸಿದರು. ಜಾಣ ಮಕ್ಕಳ ಶಿಕ್ಷಣ ಅರ್ಧಕ್ಕೆ ನಿಲ್ಲಿಸದಂತೆ, ಅದರಲ್ಲೂ ಹೆಣ್ಣು ಮಕ್ಕಳ ಶಿಕ್ಷಣ ಮೊಟಕುಗೊಳಿದಂತೆ ಪಾಲಕರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಬಸರಕೋಡ ಶ್ರೀ ಪವಾಡ ಬಸವೇಶ್ವರ ಸಂಸ್ಥೆ ಅಧ್ಯಕ್ಷ ಕೆ.ವೈ. ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ವೀರೇಶ ಜೇವರಗಿ, ಶಿಕ್ಷಣ ಸಂಯೋಜಕ ಎಚ್‌.ಎ. ಮೇಟಿ ಸೇರಿದಂತೆ ಗಣ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.