ಸಾಲ ಸೌಲಭ್ಯ ಸದುಪಯೋಗವಾಗಲಿ

Team Udayavani, Jan 4, 2021, 5:51 PM IST

ಸಾಲ ಸೌಲಭ್ಯ ಸದುಪಯೋಗವಾಗಲಿ

ಸಿಂದಗಿ: ದೇಶದ ರೈತರ ಆರ್ಥಿಕ ಜೀವನಅಭಿವೃದ್ಧಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘಗಳ ಪಾತ್ರ ಹಿರಿದಾಗಿದೆ ಎಂದು ವಿಜಯಪುರ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.

ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿ.ವಿಜಯಪುರ ಕೇಂದ್ರ ಕಚೇರಿ ಅಡಿಯಲ್ಲಿ ಜರುಗಿದಸಿಂದಗಿ ತಾಲೂಕಿನ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯ ನಿರ್ವಾಹಕರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಬೆನ್ನೆಲುಬು ರೈತ. ದೇಶ ಹಳ್ಳಿಗಳಿಂದಕೂಡಿದ್ದು ಕೃಷಿ ಪ್ರಧಾನ ದೇಶವಾಗಿದೆ. ಗ್ರಾಮೀಣಮಟ್ಟದಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘಗಳು ಜನತೆ ಹಾಗೂ ರೈತಾಪಿ ವರ್ಗದವರದೈನಂದಿನ ಬದುಕಿಗೆ ಹಾಗೂ ಕೃಷಿ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿ, ಅಗತ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ಸಂಜೀವಿನಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಸಹಕಾರ ಸಂಘಗಳವಿಶ್ರಾಂತ ಅಪರ ನಿಬಂಧಕರು ಹಾಗೂವಿಜಯಪುರ ಡಿಸಿಸಿ ಬ್ಯಾಂಕಿನ ವೃತ್ತಿಪರ ನಿರ್ದೇಶಕಎಂ.ಜಿ. ಪಾಟೀಲ ಮಾತನಾಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳ ಸಮರ್ಪಕ ಕಾರ್ಯನಿರ್ವಹಣೆಗೆ ಸಹಕಾರ ಸಂಘಗಳ ಕಾಯ್ದೆ, ಕಾನೂನುಗಳ ಪರಿಪಾಲನೆ, ಸಂಘಗಳಿಂದ ಸರಕಾರದ ವಿವಿಧ ಯೋಜನೆಗಳ ಅನುಷ್ಠಾನ,ಸದಸ್ಯರಿಗೆ ಅಗತ್ಯ ವಸ್ತುಗಳ ವಿತರಣೆ ಹಾಗೂ ಇತರೆ ಸೇವಾ ಸೌಲಭ್ಯತೆಗಳು ಸಹಕಾರಿಯಾಗಿವೆ ಎಂದು ಹೇಳಿದರು.

2020-21ನೇ ಸಾಲಿಗೆ ರಾಜ್ಯ ಸರಕಾರಜಾರಿಗೊಳಿಸಿದ ಶೂನ್ಯ ಬಡ್ಡಿ ದರದಲ್ಲಿ ಒಂದುಕುಟುಂಬಕ್ಕೆ ಗರಿಷ್ಠ 3 ಲಕ್ಷ ರೂ.ವರೆಗೆ ಅಲ್ಪಾವಧಿ  ಬೆಳೆ ಸಾಲ ಹಾಗೂ ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಕುಟುಂಬ ಒಂದಕ್ಕೆ ರಿಯಾಯಿತಿ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂ.ವರೆಗೆ ಮಧ್ಯಮಾವಧಿ, ದೀರ್ಘಾವಧಿ ಯೋಜನೆಗಳ ಬಗ್ಗೆ ಸವಿಸ್ತಾರ ಮಾರ್ಗದರ್ಶನ ನೀಡಿದರು. ರೈತರಿಗೆ ಈ ದಿಶೆಯಲ್ಲಿ ಸೂಕ್ತ ತಿಳಿವಳಿಕೆ ನೀಡುವುದರೊಂದಿಗೆ ಎಲ್ಲ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಿಳಿಸಿದರು.

ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹನುಮಂತ್ರಾಯಗೌಡ ಬಿರಾದಾರ ಪಾಟೀಲಮಾತನಾಡಿ, ವಿಜಯಪುರ ಡಿಸಿಸಿ ಬ್ಯಾಂಕು ವಿವಿಧ ಉದ್ದೇಶಗಳಿಗಾಗಿ ಒಟ್ಟು 2391 ಕೋಟಿ ರೂ. ಸಾಲನೀಡಿದೆ. ಕೃಷಿಗಾಗಿ 1170 ಕೋಟಿ ರೂ. ಸಾಲನೀಡಿದೆ. ವಿಜಯಪುರ ಜಿಲ್ಲೆಯಲ್ಲಿ ಬದಲಾದ ಕೃಷಿ ಮತ್ತು ಬೆಳೆ ಪದ್ಧತಿಗೆ ಅನುಗುಣವಾಗಿ2020-21ನೇ ಸಾಲಿನಲ್ಲಿ 1100 ಕೋಟಿರೂ. ಕೃಷಿ ಸಾಲ ಹಾಗೂ 900 ಕೋಟಿ ರೂ. ಕೃಷಿಯೇತರ ಸಾಲ ಸೇರಿ ಒಟ್ಟು 2000 ಕೋಟಿರೂ. ಸಾಲ ನೀಡುವ ಯೋಜನೆ ಹೊಂದಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕುಎಂದು ಹೇಳಿದರು.

ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್‌.ಡಿ. ಬಿರಾದಾರ ಮಾತನಾಡಿದರು.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಾಜಿನಿರ್ದೇಶಕ ಶಿವಪ್ಪಗೌಡ ಬಿರಾದಾರ, ಎ.ಎಸ್‌. ನಾಡಗೌಡ, ಡಿಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕಸತೀಶ ಪಾಟೀಲ, ಉಪ ಪ್ರಧಾನ ವ್ಯವಸ್ಥಾಪಕ ಟಿ.ವೈ. ಬರಕಡೆ, ಎಸ್‌.ಜಿ. ಬಡಾನವರ,ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್‌.ಜಿ. ಕುಂಬಾರ, ಎಸ್‌.ಆರ್‌. ನಾಯಕ,ಆರ್‌.ಎಂ. ಬಣಗಾರ, ಡಿಸಿಸಿ ಬ್ಯಾಂಕ್‌ ಹಾಗೂಸಿಂದಗಿ ತಾಲೂಕಿನ ಎಲ್ಲ ಪಿಕೆಪಿಎಸ್‌ಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಭಾಗವಹಿಸಿದ್ದರು.ಪ್ರಧಾನ ವ್ಯವಸ್ಥಾಪಕ ಸತೀಶ ಪಾಟೀಲಸ್ವಾಗತಿಸಿದರು. ಆರ್‌.ಎಂ. ಬಣಗಾರ ನಿರೂಪಿಸಿದರು. ವ್ಯವಸ್ಥಾಪಕ ಎಂ.ಜಿ. ಬಿರಾದಾರ ನಿರೂಪಿಸಿದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.