ಮಲ್ಲಿಕಾರ್ಜುನ ಅವಟಿಗೆ ರಾಜ್ಯ ಉತ್ತಮ ಉಪನ್ಯಾಸಕ ಪ್ರಶಸ್ತಿ
Team Udayavani, Sep 4, 2021, 9:18 PM IST
ವಿಜಯಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ ವಿಜಯಪುರ ಜಿಲ್ಲೆಯ ಮಲ್ಲಿಕಾರ್ಜುನ ಅವರಿಗೆ ದಕ್ಕಿದೆ.
ಜಿಲ್ಲೆಯ ಬಬಲೇಶ್ವರ ಪಟ್ಟಣದ ಅನುದಾನಿತ ಶ್ರೀಶಾಂತವೀರ ಕಲಾ, ವಿಜ್ಞಾನ, ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭೂಗೋಳ ವಿಷಯ ಉಪನ್ಯಾಸಕರಾಗಿರುವ ಮಲ್ಲಿಕಾರ್ಜುನ ಅವಟಿ, 2021-22ನೇ ಸಾಲಿನ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಷಯ ಬೋಧನೆಯಲ್ಲಿ ಪರಿಣಾಮಕಾರಿ ಕ್ರಮಗಳ ಅನುಸರಣೆ ಕಾರಣ ಇವರ ವಿಷಯದಲ್ಲಿ ಹಲವು ವಿದ್ಯಾರ್ಥಿಗಳು ಶೇಕಡಾ ನೂರರಷ್ಟು ಅಂಕ ಪಡೆದಿರುವುದು ಮಲ್ಲಿಕಾರ್ಜುನ ಅವರ ಗುಣಮಟ್ಟದ ಬೋಧನೆಗೆ ಸಾಕ್ಷಿ.
ಉಪನ್ಯಾಸಕ ವೃತ್ತಿಪರತೆ ಜೊತೆಗೆ ಸಾಹಿತ್ಯ, ಸಾಂಸ್ಕೃತಿಕ, ಸಮಾಜಸೇವೆ, ಸರ್ಕಾರಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದಾರೆ.
ವಿವಿಧ ವಿಷಯಗಳ ಮೇಲೆ ಹಲವು ಲೇಖನಗಳನ್ನು ಪ್ರಕಟಿಸಿರುವ ಮಲ್ಲಿಕಾರ್ಜುನ ಅವಟಿ, ಜಿಲ್ಲೆಯ ಸಾಹಿತ್ಯ ಸಂದರ್ಭದಲ್ಲಿ ಹಲವು ಸ್ಮರಣ ಸಂಚಿಕೆಗಳ ಸಂಪಾದಕರಾಗಿ ತಮ್ಮ ಸೇವೆ ನೀಡಿದ್ದಾರೆ.
ರಾಜ್ಯ ಮಟ್ಟದ ಹಲವು ಸ್ಪರ್ಧೆ, ಕಾರ್ಯಾಗಾರ, ಕಮ್ಮಟಗಳಂಥ ಕಾರ್ಯಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಪ್ರಶಸ್ತಿಗಳನ್ನು ಬಾಚಿದ್ದಾರೆ.
ಇವರಲ್ಲಿರುವ ಬಹುಮುಖ ಪ್ರತಿಭಾ ವ್ಯಕ್ತಿತ್ವಕ್ಕೆ ಇದೀಗ ಸರ್ಕಾರ ಪ್ರಕಟಿಸಿರುವ ಉತ್ತಮ ಉಪನ್ಯಾಸಕ 10 ಪ್ರಶಸ್ತಿಗಳಲ್ಲಿ ಮಲ್ಲಿಕಾರ್ಜುನ ಸ್ಥಾನ ಪಡೆದಿರುವುದು ಅವರ ಪ್ರತಿಭೆಗೆ ಸಾಕ್ಷಿ.
ತಮಗೆ ಪ್ರಶಸ್ತಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮಲ್ಲಿಕಾರ್ಜುನ, ಕರ್ತವ್ಯ ಬದ್ದತೆಗೆ ಪ್ರಶಸ್ತಿ ಸಂದಿರುವುದು ನನ್ನ ಹೊಣೆಗಾರಿಕೆ ಹೆಚ್ಚಿಸಿದೆ. ಬೋಧನೆಯಲ್ಲಿ ಇನ್ನೂ ಪರಿಣಾಮಕಾರಿ ಸೇವೆ ನೀಡುವ ಜವಾಬ್ದಾರಿಯನ್ನೂ ಹೇರಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.