ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಹಸುಳೆಯ ಹತ್ಯೆ: ಆರೋಪಿ ಬಂಧನ
Team Udayavani, Aug 16, 2021, 2:40 PM IST
ವಿಜಯಪುರ: ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ವಿಕೃತ ಯುವಕನೊಬ್ಬ ಆರು ವರ್ಷದ ಬಾಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಆ.9 ರಂದು ಮಿರಗಿ ಗ್ರಾಮದಲ್ಲಿ ಬೋಳೆಗಾಂವ ಮೂಲದ ಆರು ವರ್ಷದ ಬಾಲಕಿ ಗ್ರಾಮದ ಹನಮಂತ ದೇವರ ದೇವಸ್ಥಾನದ ಬಳಿ ಆಟ ಆಡುತ್ತಿದ್ದಾಗ ಕಾಣೆಯಾಗಿದ್ದಳು. ಜೊತೆಗಿದ್ದ ಆಕೆಯ ಸಹೋದರಿ ಮನೆಗೆ ಬಂದರೂ ಈ ಬಾಲೆ ಮನೆಗೆ ಮರಳದ ಕಾರಣ ಗ್ರಾಮದಲ್ಲಿ ಹುಡುಕಿದ ಪಾಲಕರು ಹೋರ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ಇಂಡಿ ಡಿಎಸ್ ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ತನಿಖೆ ಇಳಿದ ಇಂಡಿ ಸಿಪಿಐ ರಾಜಶೇಖರ, ಹೊರ್ತಿ ಎಸ್.ಐ ಎನ್.ಬಿ.ಶಿವುರ ಹಾಗೂ ಪೊಲೀಸ್ ಸಿಬ್ಬಂದಿಗೆ ಆಘಾತ ಕಾದಿತ್ತು. ಸಾಕ್ಷಿ, ಪುರಾವೆ ಸಿಗದಂತೆ ಆರೋಪಿ ನಾಶ ಮಾಡಿದ್ದರಿಂದ ಪ್ರಕರಣ ಅತೀ ಸೂಕ್ಷ್ಮತೆಯಿಂದ ಕೂಡಿತ್ತು.
ಇದನ್ನೂ ಓದಿ:ಅಫ್ಘಾನ್ ನಲ್ಲಿ ಆತಂಕ: ಐಪಿಎಲ್ ನಲ್ಲಿ ಆಡಲಿದ್ದಾರಾ ರಶೀದ್ ಖಾನ್, ಮೊಹಮ್ಮದ್ ನಬಿ?
ಘಟನಾ ಸ್ಥಳವನ್ನು ಪರಿಶೀಲಿಸಿದ ಪೊಲೀಸ ತನಿಖಾ ಕೊನೆಗೂ ಆ.15 ರಂದು ಬೋಳೆಗಾಂವ ಗ್ರಾಮದಲ್ಲಿ ಸಂಗನಗೌಡ ಬಾಬುಗೌಡ ಬಿರಾದಾರ (24 ವ) ವಿಚಾರಣೆ ನಡೆಸಿದಾಗ ತಾನೇ ಹತ್ಯೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ.
ಓಣಿ ನಿವಾಸಿ ಬಾಲಕಿ ಆಟವಾಡುವಾಗ ಸಂಗನಗೌಡನ ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ್ದಳು. ಇದರಿಂದ ತನ್ನ ಅಜ್ಜಿ ಊಟ ಮಾಡಲು ಸಂಕಟ ಪಡಲು ಈ ಬಾಲಕಿಯೇ ಕಾರಣ ಎಂದು ಸಿಟ್ಟಿನಿಂದ ಆಕೆಯನ್ನು ಅಪಹರಿಸಿ, ಹತ್ಯೆ ಮಾಡಿ, ಸಾಕ್ಷಿ-ಪುರಾವೆ ನಾಶ ಮಾಡಿದ್ದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಎಸ್ ಪಿ ಆನಂದ್ ಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಅಲ್ಲದೇ ಸದರಿ ಕ್ಲಿಷ್ಟಕರ ಪ್ರಕರಣ ಬೇಧಿಸುವಲ್ಲಿ ಯಶಸ್ವಿ ಆಗಿರುವ ತನಿಖಾ ತಂಡವನ್ನು ಶ್ಲಾಘಿಸಿದ್ದು, ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.