ಮನಗೂಳಿ-ದೇವೇಗೌಡರ ಕಂಚಿನಪ್ರತಿಮೆಗೆ ದುಷ್ಕರ್ಮಿಗಳಿಂದ ಬೆಂಕಿ
Team Udayavani, Nov 30, 2018, 12:57 PM IST
ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರ ಕಂಚಿನ ಪ್ರತಿಮೆಗೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರ ಪುತ್ಥಳಿ ಅನಾವರಣಗೊಳಿಸಲಾಗಿತ್ತು.
ಈ ಯೋಜನೆಗಾಗಿ ಸಚಿವ ಎಂ.ಸಿ. ಮನಗೂಳಿ ಅವರು ಎರಡು ವರ್ಷ ಚಪ್ಪಲಿ ಧರಿಸದೇ ಬರಿಗಾಲ ಫಕೀರನಂತೆ ಹೋರಾಟ ನಡೆಸಿದ್ದರು. ಅಂದಿನ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಯೋಜನೆ ಅನುಷ್ಠಾನಗೊಳಿಸಿ ಈ ಭಾಗದ ನೀರಾವರಿಗೆ ಆದ್ಯತೆ ಕಲ್ಪಿಸಿದ್ದರು. ಆ ಸವಿ ನೆನಪಿಗಾಗಿ ಎಂ.ಸಿ. ಮನಗೂಳಿ ಮತ್ತು ದೇವೇಗೌಡರ ಆತ್ಮೀಯತೆ ತೋರುವ ಜೋಡಿ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. 2014, ಫೆ.12ರಂದು ಎಚ್.ಡಿ.ಕುಮಾರಸ್ವಾಮಿ ಮೂರ್ತಿ ಪ್ರತಿಷ್ಠಾಪಿಸಿದ್ದರು.
ಘಟನಾ ಸ್ಥಳಕ್ಕೆ ಎಸ್‌ಪಿ ಪ್ರಕಾಶ ನಿಕ್ಕಂ, ತಹಶೀಲ್ದಾರ್, ಸಿಪಿಐ, ಇಂಡಿ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಸವನಬಾಗೇವಾಡಿ: ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ಥಳಿಗೆ ಅವಮಾನ ಎಸಗಿರುವುದು ಖಂಡನೀಯ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದ್ದಾರೆ.
ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕೆಲ ಕಿಡಿಗೇಡಿಗಳು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮನಗೂಳಿ ಅವರ ಪುತ್ಥಳಿಗೆ ಬೆಂಕಿ ಹಚ್ಚಿರುವುದು ಖಂಡನೀಯ. ಇಬ್ಬರು ನಾಯಕರು ಜಿಲ್ಲೆಯ ಹಾಗೂ ರಾಜ್ಯದ ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ಥಳಿಯನ್ನು ಆ ಭಾಗದ ರೈತರು ನಿರ್ಮಿಸಿದ್ದರು ಎಂದು ಹೇಳಿದರು.
ಯಾರೋ ಕಿಡಿಗೇಡಿಗಳು ಪುತ್ಥಳಿಗೆ ಅವಮಾನ ಎಸಗಿರುವುದು ಖಂಡನೀಯ. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಇಲ್ಲವಾದರೆ ಜಿಲ್ಲಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೆ ಹೊಣೆಯಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.