ಮಂತ್ರಾಲಯ ಶ್ರೀ ಅದ್ಧೂರಿ ಪುರಪ್ರವೇಶ
Team Udayavani, Dec 12, 2017, 10:30 AM IST
ವಿಜಯಪುರ: ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥರು ಪೀಠಾಧಿಪತಿಗಳಾದ ಬಳಿಕ ಪ್ರಥಮ ಬಾರಿಗೆ ಮಹಾನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಶೋಭಾಯಾತ್ರೆಯೊಂದಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಸೋಮವಾರ ಸಂಜೆ ದಿವಟಗೇರಿ ಗಲ್ಲಿಯಲ್ಲಿರುವ ರಾಘವೇಂದ್ರಸ್ವಾಮಿ ಮಠದಿಂದ ಆರಂಭಗೊಂಡ ಶೋಭಾಯಾತ್ರೆಯಲ್ಲಿ ಉಡುಪಿಯ ವಾದ್ಯ ಮೇಳ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡ, ವಾದ್ಯಗಳು, ಮಹಿಳೆಯರ ಭಜನೆಗಳೊಂದಿಗೆ ಸುಭುದೇಂದ್ರ ತೀರ್ಥರನ್ನು ಗಜರಾಜನ ಅಂಬಾರಿ ಮೇಲೆ ಮೆರವಣಿಗೆ ಮೂಲಕ ರಾಯರ ಭಕ್ತರು ಅದ್ಧೂರಿಯಾಗಿ ಸ್ವಾಗತಿಸಿದರು.
ಮೆರವಣಿಗೆಯಲ್ಲಿ ವಿವಿಧ ಪುಷ್ಪಗಳಿಂದ ಸಾಲಂಕೃತ ಒಂದು ರಥದಲ್ಲಿ ಪ್ರಾಣದೇವರು, ಮತ್ತೂಂದು ರಥದಲ್ಲಿ ಪವಿತ್ರ ವೇದಗ್ರಂಥಗಳ ಪಾರಾಯಣ ನಡೆಯುತ್ತಿತ್ತು. ದಾರಿಯುದ್ದಕ್ಕೂ ಅಸಂಖ್ಯಾತ ಭಕ್ತ ಸಮೂಹ ಶ್ರೀಗಳಿಗೆ ಭಕ್ತಿಯಿಂದ ನಮಿಸಿದರು.
ನಗರದ ದಿವಟಗೇರಿಯ ರಾಘವೇಂದ್ರ ಮಠದ ಆವರಣದಿಂದ ಪ್ರಾರಂಭಗೊಂಡ ಶೋಭಾಯಾತ್ರೆ ಸ್ಟೇಷನ್ ರಸ್ತೆ, ಬಸವೇಶ್ವರ ವೃತ್ತ, ಡಾ| ಬಿ.ಆರ್.ಅಂಬೇಡ್ಕರ ವೃತ್ತ, ಮಹಾತ್ಮಾ ಗಾಂಧೀಜಿ ವೃತ್ತ, ಛತ್ರಪತಿ ಶಿವಾಜಿ ವೃತ್ತ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಉಪಲಿ ಬುರುಜ್ ಬಳಿ ಇರುವ ಬಿಡಿಈ ಶಿಕ್ಷಣ ಸಂಸ್ಥೆಗೆ ತಲುಪಿತು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಹಿರಿಯ ಮುಖಂಡ ವಿಜುಗೌಡ ಪಾಟೀಲ, ಡಾ| ಆರ್.ಜಿ.ಮಂಗಲಗಿ, ಅಶೋಕ ಕಾಳಗಿ, ಗೋಪಾಲ ನಾಯಕ, ಮೋಹನ ಕೌತಾಳ, ಕೃಷ್ಣ ಗುನ್ನಾಳಕರ, ಶ್ರೀಕೃಷ್ಣ ಪಡಗಾನೂರ, ವಿಜಯ ಜೋಶಿ ಇತರರು ಮೆರವಣಿಗೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.