![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 22, 2021, 2:34 PM IST
ವಿಜಯಪುರ: ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಬ್ಬರ ಜೋರಾಗಿದೆ. ರಾಜ್ಯದ ರೋಗಿಗಳಿಗೆ ಆಕ್ಸಿಜನ್ ಕೊರತೆ ಇದೆ. ಇಂಥ ಸ್ಥಿತಿಯಲ್ಲಿ ರಾಜ್ಯದ ಜಿಂದಾಲ್ ಸಂಸ್ಥೆ ಉತ್ಪಾದಿಸುವ ಅರ್ಧ ಆಕ್ಸಿಜನ್ ಮಹಾರಾಷ್ಟ್ರ ರಾಜ್ಯಕ್ಕೆ ಕಳುಹಿಸಲಾಗುತ್ತಿದೆ. ರಾಜ್ಯದಲ್ಲೇ ಕೊರತೆ ಇರುವಾಗ ಅನ್ಯರಿಗೆ ಕಳಿಸುವ ಸರ್ಕಾರದ ನಿರ್ಧಾರ ಸರಿಯಲ್ಲ. ಕೂಡಲೇ ಈ ಕುರಿತು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಮಾಜಿ ಸಚಿವ, ಬಬಲೇಶ್ವರ ಶಾಸಕ ಡಾ.ಎಂ.ಬಿ. ಪಾಟೀಲ ಹೇಳಿದರು
ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯಕ್ಕೆ ಆಕ್ಸಿಜನ್ ನೆರವು ನೀಡುವುದಕ್ಕೆ ನನ್ನ ವಿರೋಧ ಇಲ್ಲ. ಆದರೆ ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆ ಆದರೂ ರಾಜ್ಯದಲ್ಲೇ ಕೊರತೆ ಇದ್ದು, ನಮಗೆ ಸರಿದೂಗಿದ ಬಳಿಕ ಅನ್ಯರ ನೆರವಿಗೆ ನಿಲ್ಲಬೇಕು ಎಂದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆ ಸಿಗುತ್ತಿಲ್ಲ, ರೆಮಿಡಿಸಿವಿರ್ ಸೇರಿ ಪ್ರಮುಖ ಔಷಧ ಕೊರತೆ ಇದೆ. ಆಕ್ಸಿಜನ್ ಕೊರತೆ, ವೆಂಟಿಲೇಟರ್ ಕೊರತೆ ಹೀಗೆ ಹಲವು ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ. ಹೀಗಾಗಿ ಕೂಡಲೇ ಈ ಸಮಸ್ಯೆ ಬಗೆ ಹರಿಸಲು ಸರ್ಕಾರ ಆದ್ಯತೆ ನೀಡಬೇಕು ಎಂದು ಅಗ್ರಹಿಸಿದರು.
ಜಿಲ್ಲೆಯಲ್ಲಿ ರೋಗ ಉಲ್ಬಣದ ಹಿನ್ನೆಲೆಯಲ್ಲಿ ನನ್ನ ಅಧಕ್ಷತೆಯಲ್ಲಿನ ಬಿಎಲ್ಡಿಇ ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡನಲ್ಲಿ 250 ಹಾಸಿಗೆ ಹೆಚ್ಚಿಸಲಾಗಿದೆ. ಮತ್ತೊಂದೆಡೆ ಸರ್ಕಾರ ನಿಗದಿ ಮಾಡಿದ ದರದಲ್ಲೇ ರಿಯಾಯಿತಿ ನೀಡುವ ನಿರ್ಧಾರ ಕೈಗೊಂಡಿದ್ದೇವೆ. ಇದು ಕಷ್ಟ ಕಾಲದಲ್ಲಿ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವಲ್ಲಿ ನಮ್ಮ ಸಣ್ಣ ಸೇವೆ ಎಂದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.