ಬರ ಘೋಷಣೆಗೆ ನಿಯಮ ಅಡ್ಡಿ: ಬೊಮ್ಮಾಯಿ ರಾಜಕೀಯ ಬಿಟ್ಟು ಪ್ರಧಾನಿಗೆ ಮನವಿ ಮಾಡಲಿ: ಸಚಿವ ಪಾಟೀಲ್
Team Udayavani, Aug 25, 2023, 6:07 PM IST
ವಿಜಯಪುರ: ರಾಜ್ಯದ ಬರ ಪರಿಸ್ಥಿತಿ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಮಾಡುವುದನ್ನು ಬಿಡಬೇಕು. ಅಲ್ಲದೇ ರಾಜ್ಯದ ಜನರ ಹಿತದೃಷ್ಟಿಯಿಂದ ಬರ ಘೋಷಣೆಗೆ ಅಡ್ಡಿಯಾಗಿರುವ ಎನ್‍ಡಿಆರ್‍ಎಫ್ ನಿಯಮಗಳ ಸಡಿಲಿಕೆಗಾಗಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿ, ಸಮಸ್ಯೆ ಎದುರಾಗಿದೆ. ಹೀಗಾಗಿ ರಾಜಕೀಯ ಮಾಡುವುದನ್ನು ಬಿಟ್ಟು ರೈತರ ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಧಾವಿಸಲು ಬೊಮ್ಮಾಯಿ ಅವರು ಮುಂದಾಗಲಿ ಎಂದು ಕುಟುಕಿದರು.
ಬರ ಪೀಡಿತ ಜಿಲ್ಲೆಗಳೆಂದು ಘೋಷಿಸುವ ಕುರಿತು ಕೇಂದ್ರ ಸರ್ಕಾರದ ನಿಯಮಗಳು ಅಡ್ಡಿಯಾಗಿವೆ. ಹೀಗಾಗಿ ಇಲ್ಲಿ ಮಾತನಾಡುವ ಬದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಕೀಯ ಬಿಟ್ಟು ರಾಜ್ಯದ ಜನರ ನೆರವಿಗೆ ಬರಬೇಕಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಿ ಎಂದು ಸಲಹೆ ನೀಡಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಮಳೆ ಇಲ್ಲದೇ ಬರ ಆವರಿಸಿದ್ದು, ರಾಜ್ಯ ಸರ್ಕಾರ ಬರ ಪೀಡಿತ ಜಿಲ್ಲೆಗಳೆಂದು ಘೋಷಿಸಲು ಆಗ್ರಹಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಲಿ ಎಂದರು.
ಬರ ಘೋಷಣೆ ವಿಷಯವಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ ಸಚಿವರು ಕೇಂದ್ರ ಸರ್ಕಾರದ ಎನ್‍ಡಿಆರ್‍ಎಫ್ ನಿಮಯಗಳ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿಯಾಗಿ ಬರ ಘೋಷಣೆಗೆ ಇರುವ ಮಾನದಂಡಗಳನ್ನು ಸಡಿಲಿಸಲು ಮನವಿ ಮಾಡಲಿ ಎಂದರು.
ಇದನ್ನೂ ಓದಿ: Economic growth ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ: ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.