DCC ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಶಿವಾನಂದ ಪಾಟೀಲ್ ಪುನರಾಯ್ಕೆ

1997 ರಿಂದ ಸತತ ಚುನಾಯಿತ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆ

Team Udayavani, Oct 27, 2023, 8:07 PM IST

DCC ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಶಿವಾನಂದ ಪುನರಾಯ್ಕೆ

ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಜವಳಿ ಸಚಿವ ಶಿವಾನಂದ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಶುಕ್ರವಾರ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ನೂತನ ಕಛೇರಿಯಲ್ಲಿ 2023 ರಿಂದ 2028 ರ ವರೆಗೆ 5 ವರ್ಷಗಳ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷರಾಗಿಯೂ ಹಾಗೂ ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗೆ 1997 ರಿಂದ 2023 ರವರೆಗೆ ಸತತವಾಗಿ ಚುನಾಯಿತ ಅಧ್ಯಕ್ಷರಾಗಿ ಬ್ಯಾಂಕ್‍ನ್ನು ಮುನ್ನಡೆಸಿ ಐತಿಹಾಸಿಕ ದಾಖಲೆ ಬರೆದಿರುವ ಸಚಿವ ಶಿವಾನಂದ ಪಾಟೀಲ, ತಮ್ಮ ಅವಧಿಯಲ್ಲಿ ಡಿಸಿಸಿ ಬ್ಯಾಂಕ್‍ಗೆ ಸತತ ಲಾಭಗಳಿಸಿ, ಗಮನಾರ್ಹ ಪ್ರಗತಿ ಸಾದಿಧನೆ ಮಾಡಿ, ಕರ್ನಾಟಕ ರಾಜ್ಯದ ಅತ್ಯುತ್ತಮ ಡಿಸಿಸಿ ಬ್ಯಾಂಕುಗಳಲ್ಲಿ ಒಂದಾಗಿ ಮಾಡಿರುವ ಹಿರಿಮೆ ಸಲ್ಲುತ್ತದೆ.

ಉಪಾಧ್ಯಕ್ಷರಾಗಿರುವ ರಾಜಶೇಖರ ಗುಡದಿನ್ನಿ 1996 97 ರಿಂದ ಸತತವಾಗಿ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, 3ನೇ ಬಾರಿ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವುದು ವಿಸೇಷ.

ದಿ. 12-10-2023 ರಂದು ಜರುಗಿದ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕ 11 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಚಿವ ಶಿವಾನಂದ ಪಾಟೀಲ, ರಾಜಶೇಖರ ಪಾಟೀಲ ಮಾತ್ರವಲ್ಲದೇ ನಿರ್ದೇಶಕರಾಗಿ10 ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ.

ಶೇಖರ ದಳವಾಯಿ, ಬಿ.ಎಸ್. ಪಾಟೀಲ (ಯಾಳಗಿ), ಕಲ್ಲನಗೌಡ ಪಾಟೀಲ, ಹಣಮಂತ್ರಾಯಗೌಡ ಪಾಟೀಲ, ಸಂಯುಕ್ತಾ ಪಾಟೀಲ, ಗುರುಶಾಂತ ನಿಡೋಣಿ, ಸುರೇಶಗೌಡ ಬಿರಾದಾರ, ಚಂದ್ರಶೇಖರಗೌಡ ಪಾಟೀಲ (ಮನಗೂಳಿ), ಅರವಿಂದ ಪೂಜಾರಿ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕಿ ಭಾಗ್ಯಶ್ರೀ ಎಸ್. ಕೆ. ಇವರು ಪದಾಧಿಕಾರಿಗಳ ಚುನಾವಣೆಯಲ್ಲಿ ಭಾಗಿಯಾಗಿದ್ದರು. ಚುನಾವಣಾಧಿಕಾರಿಯಾಗಿ ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಆಯ್ಕೆಯನ್ನು ಘೋಷಿಸಿದರು.

ಬ್ಯಾಂಕ್‍ನ ವೃತ್ತಿಪರ ನಿರ್ದೇಶಕರಾದ ಎಸ್.ಎಸ್.ಶಿಂಧೆ, ಆಡಳಿತ ಮಂಡಳಿ ಸಲಹೆಗಾರರಾದ ಜೆ. ಕೊಟ್ರೇಶಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಡಿ. ಬಿರಾದಾರ ಸೇರಿದಂತೆ ಇತರರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.