ಸಚಿವರ ಗೈರು-ಸ್ಥಳೀಯರ ಆಕ್ರೋಶ: ಮುಖ್ಯಮಂತ್ರಿ ಕ್ಷಮೆಯಾಚನೆಗೆ ಆಗ್ರಹ

Team Udayavani, May 4, 2022, 1:28 PM IST

13abs

ವಿಜಯಪುರ: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಬಸವ ಜನ್ಮಭೂಮಿ ಬಸವನಬಾಗೇವಾಡಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವ ಜಯಂತಿ ಕಾರ್ಯಕ್ರಮಕ್ಕೆ ಸಚಿವರೇ ಗೈರಾಗುವ ಮೂಲಕ ಕಾಟಾಚಾರದ ಕಾರ್ಯಕ್ರಮ ಎಂಬಂತೆ ಆಚರಿಸಿದೆ. ಈ ಬಗ್ಗೆ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು ಮುಖ್ಯಮಂತ್ರಿ ಕ್ಷಮೆ ಕೋರುವಂತೆ ಆಗ್ರಹ ಕೇಳಿ ಬಂದಿದೆ.

ಬಸವನಬಾಗೇವಾಡಿಯ ಮೂಲ ನಂದೀಶ್ವರ ದೇವಸ್ಥಾನದ ಪರಿಸರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯಪುರ ಜಿಲ್ಲಾಡಳಿತ, ಜಿಪಂ, ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಜಂಟಿಯಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಗಮಿಸಬೇಕಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲಕುಮಾರ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸೇರಿದಂತೆ ಬಹುತೇಕ ಆಹ್ವಾನಿತ ಜನಪ್ರತಿನಿಧಿಗಳು ಗೈರಾಗಿದ್ದರು.

ಬಸವನಬಾಗೇವಾಡಿ ಶಾಸಕರಾದ ಮಾಜಿ ಸಚಿವ ಶಿವಾನಂದ ಪಾಟೀಲ, ಮೇಲ್ಮನೆ ಕಾಂಗ್ರೆಸ್‌ ಮುಖ್ಯ ಸಚೇತಕ ಪ್ರಕಾಶ ರಾಠೊಡ, ಕೂಡಲಸಂಗಮ ಅಭಿವೃದ್ಧಿ ಪ್ರಾ ಧಿಕಾರದ ವಿಶೇಷಾಧಿಕಾರಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ವಿ.ಎಂ.ದಾನಮ್ಮನವರ, ಸಿಇಒ ರಾಹುಲ್‌ ಶಿಂಧೆ ಸೇರಿದಂತೆ ಕೆಲವೇ ಕೆಲವರು ಮಾತ್ರ ವೇದಿಕೆಯಲ್ಲಿದ್ದರು.

ಸರ್ಕಾರ ರಾಜ್ಯಮಟ್ಟದ ಬಸವ ಜಯಂತಿ ಕಾರ್ಯಕ್ರಮವನ್ನು ಬಸವನಬಾಗೇವಾಡಿ ಪಟ್ಟಣದಲ್ಲಿ ಆಚರಿಸುವ ಕುರಿತು ಆದೇಶ ಹೊರಡಿಸಿದ್ದು ಆದೇಶಕ್ಕೆ ಸೀಮಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಮಟ್ಟದ ರಾಜ್ಯ ಸರ್ಕಾರದ ಬಸವ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಜಿಲ್ಲೆಯ ಸಚಿವರು ಗೈರಾಗಿರುವುದು ಬೇಸರ ತರಿಸಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಕಾಶ ರಾಠೊಡ ಆಕ್ಷೇಪಿಸಿದರು.

ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲೂ ಬಸವ ಜಯಂತಿ ಅಚರಿಸುವ ಮೂಲಕ ವಿಶ್ವದ ಮೊದಲ ಸಂಸತ್‌ ಸ್ಥಾಪನೆ ರೂವಾರಿ ಬಸವೇಶ್ವರರಿಗೆ ಗೌರವ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಬಸನ ಜನ್ಮಭೂಮಿಯಲ್ಲಿ ಬಸವ ಜಯಂತಿ ಆಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸಬೇಕೆಂಬ ಬೇಡಿಕೆಗೆ ಸ್ಪಂ ದಿಸಿದ್ದ ಸರ್ಕಾರ, ಆಚರಣೆ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಪ್ರಕಾಶ ರಾಠೊಡ ಆಗ್ರಹಿಸಿದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.