ಪುನರ್ವಸತಿ ಅನಿವಾರ್ಯ: ಯತ್ನಾಳ
Team Udayavani, Mar 15, 2021, 7:49 PM IST
ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆ ಯಶಸ್ವಿಯಾಗಬೇಕಾದರೆ ಭೂಸ್ವಾಧೀನ ಹಾಗೂ ಗ್ರಾಮಗಳ ಪುನರ್ವಸತಿ ಮಾಡುವುದು ಅನಿವಾರ್ಯ. ಈ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರದ ಬಗ್ಗೆ ಸೋಮವಾರದಂದು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವದು ಎಂದು ಶಾಸಕ, ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ರವಿವಾರ ಸಮೀಪದ ವಂದಾಲ ಗ್ರಾಮವನ್ನು ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಮುಳುಗಡೆ ಮಾಡುವುದಾಗಿ ಹೇಳಿ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ಬಂಧಿ ಸಿರುವದನ್ನು ಖಂಡಿಸಿ ನಾಗರಿಕ ಹೋರಾಟ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಬೆಂಬಲಿಸಿ ಅವರು ಮಾತನಾಡಿದರು.
ವಂದಾಲ ಗ್ರಾಮಸ್ಥರು ನಡೆಸುತ್ತಿರುವ ಹೋರಾಟವು ನ್ಯಾಯೋಚಿತವಾಗಿದೆ. ಯೋಜನೆಯ ಅನುಷ್ಠಾನದ ಸ್ಪಷ್ಟ ನಿರ್ಧಾರದ ನಂತರ ಮುಳುಗಡೆ ನಿಯಮದಂತೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ 2013ರಿಂದ ಇಲ್ಲಿಯವರೆಗೂ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೈಗೊಳ್ಳುವುದನ್ನು ನಿರ್ಬಂಧಿ ಸಿರುವುದರಿಂದ ಸಹಜವಾಗಿ ನಾಗರಿಕರಿಗೆ ತೊಂದರೆಯಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳ ಬಳಿ ಜಲ ಸಂಪನ್ಮೂಲ ಖಾತೆ ಇರುವುದರಿಂದ ಅವರಲ್ಲಿ ಕುರಿತು ಅ ಧಿವೇಶನದಲ್ಲಿ ಪ್ರಸ್ತಾಪಿಸಿ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದರು.
ಬಾಧಿ ತಗೊಳ್ಳುವ ಗ್ರಾಮಗಳಿಗೆ ನೂತನ ಮಾರುಕಟ್ಟೆ ದರದಂತೆ ಪರಿಹಾರ ನೀಡುವಂತಾಗಬೇಕು. ಯೋಜನೆಯ ಸಾಫಲ್ಯಕ್ಕೆ ಆಲಮಟ್ಟಿ ಜಲಾಶಯವನ್ನು 519.6 ಮೀ.ದಿಂದ 524.256 ಮೀ.ಗೆ ಎತ್ತರಿಸುವುದು ಅನಿವಾರ್ಯತೆಯಿದೆ. ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾನೂನಿಗೆ ಪುನರ್ ಪರಿಶೀಲನೆ ಮಾಡಲು ಸರ್ಕಾರದ ಮೇಲೆ ಒತ್ತಡ ತರುತ್ತೇನೆ. ನಿಧಿಗೆ ನ್ಯಾಯ ದೊರೆಯಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.
5ನೇ ದಿನದ ಧರಣಿಯಲ್ಲಿ ಜಿಪಂ ಮಾಜಿ ಸದಸ್ಯ ಶಿವಾನಂದ ಅವಟಿ, ವಿಜಯಪುರ ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಬಿ.ಆರ್. ದೊಡ್ಡಪ್ಪನವರ, ಸಂಗಯ್ಯ ಚಿಕ್ಕಮಠ, ಬಸವರಾಜ ಗುಂಗಿ, ಅರ್ಜುನ ದಳವಾಯಿ, ನಿಂಗಪ್ಪ ಇಜೇರಿ, ಭೀಮಪ್ಪ ಬಂಡಿ, ಅಂದಾನಪ್ಪ ಹತ್ತರಕಿಹಾಳ ಹಾಗೂ 50ಕ್ಕೂ ಅ ಧಿಕ ಮಹಿಳಾ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.