ಗುಣಮಟ್ಟದ ಕಾಮಗಾರಿಗೆ ಶಾಸಕ ನಡಹಳ್ಳಿ ಸೂಚನೆ
Team Udayavani, Mar 13, 2022, 5:50 PM IST
ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದಿಂದ ಮುಖ್ಯ ಬಜಾರ್ ಮಾರ್ಗವಾಗಿ ಇಂದಿರಾ ವೃತ್ತದವರೆಗೆ ಅಂದಾಜು 5 ಕೋಟಿ ರೂ. ಸರ್ಕಾರದ ವಿಶೇಷ ಅನುದಾನದಲ್ಲಿ ನಡೆಯುತ್ತಿರುವ ಮುಖ್ಯ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದು ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಸೂಚಿಸಿದರು.
ಶನಿವಾರ ಸಂಜೆ ಸ್ಥಳೀಯ ಅಧಿಕಾರಿಗಳೊಂದಿಗೆ ಇಂದಿರಾ ವೃತ್ತದಲ್ಲಿ ಕಾಮಗಾರಿ ಪರಿಶೀಲಿಸಿದ ಅವರು, ಮುದ್ದೇಬಿಹಾಳ ಪಟ್ಟಣದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ವಿವಿಧ ಯೋಜನೆಗಳ ಅಡಿಯಲ್ಲಿ ಈಗಾಗಲೇ 38 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಪಟ್ಟಣದಲ್ಲಿ ಬರುವ ಎಲ್ಲ 23 ವಾರ್ಡ್‌ಗಳಲ್ಲೂ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯ ಒದಗಿಸಲಾಗುವುದು. ಈ ಕೆಲಸ ಪûಾತೀತವಾಗಿ ನಡೆಯುತ್ತದೆ. ಸದ್ಯ ಪ್ರಗತಿಯಲ್ಲಿರುವ ಬಜಾರ್ ರಸ್ತೆ ಕಾಮಗಾರಿಗೆ ಪಟ್ಟಣದ ವ್ಯಾಪಾರಸ್ಥರು ಸಾಕಷ್ಟು ಸಹಕಾರ ನೀಡಿದ್ದಾರೆ. ಅವರ ಆಶಯದಂತೆ ಗುಣಮಟ್ಟದ ರಸ್ತೆ ನಿರ್ಮಾಣಗೊಳ್ಳಬೇಕು ಎಂದರು.
ಈ ವೇಳೆ ಶಾಸಕರು ಇಂದಿರಾ ವೃತ್ತದಲ್ಲಿ ಪ್ರಗತಿಯಲ್ಲಿರುವ ಪ್ರಥಮ ಹಂತದ ಕಾಮಗಾರಿಯನ್ನು ಪರಿಶೀಲಿಸಿ ತೃಪ್ತಿ ವ್ಯಕ್ತಪಡಿಸಿ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಪಿಡಬ್ಲ್ಯೂಡಿ ಎಇಇ ಆರ್.ಎಂ.ಹುಂಡೇಕಾರ, ಪಿಡಬ್ಲ್ಯೂಡಿ ಎಂಜಿನಿಯರ್‌ಗಳಾದ ಅಶೋಕ ಬಿರಾದಾರ, ಸಂದೀಪ ಕೆ., ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ, ಕರ್ನಾಟಕ ಮುಸ್ಲಿಂ ಕೌನ್ಸಿಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ರಿಸಾಲ್ದಾರ್, ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಎಲ್.ಎಂ.ನಾಯ್ಕೊಡಿ, ಬಿಜೆಪಿ ಧುರೀಣ ರಾಜೇಂದ್ರಗೌಡ ರಾಯಗೊಂಡ, ಸ್ಥಳೀಯ ಧುರೀಣರು, ಪುರಸಭೆ ಸಿಬ್ಬಂದಿ, ಗುತ್ತಿಗೆದಾರ ಮೇಲ್ವಿಚಾರಕ ಸಿಬ್ಬಂದಿ ಸೇರಿ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.