ನನ್ನ ಹೇಳಿಕೆಯನ್ನು ತಿರುಚಿ ಕಾಂಗ್ರೆಸ್ ಪ್ರಚಾರ: ರಮೇಶ್ ಜಿಗಜಿಣಗಿ
Team Udayavani, Jun 8, 2022, 12:00 PM IST
ವಿಜಯಪುರ : ಚಿಕ್ಕೋಡಿಯಲ್ಲಿ ವಾಯವ್ಯ ಶಿಕ್ಷಕರ ಮೇಲ್ಮನೆ ಕ್ಷೇತ್ರದ ಪ್ರಕಾಶ ಹುಕ್ಕೇರಿ ಬಗ್ಗೆ ನಾನು ಮಾಡಿದ ಟೀಕೆಯನ್ನು ಕಾಂಗ್ರೆಸ್ ತಿರುಚಿದ್ದು, ಬಿಜೆಪಿ ಅಭ್ಯರ್ಥಿ ಅರುಣ ಶಹಪುರ ಬಗ್ಗೆ ಟೀಕೆ ಮಾಡಿದಂತೆ ತಿರುಚಿ ಪ್ರಚಾರದಲ್ಲಿ ತೊಡಗಿದೆ. ಕಾಂಗ್ರೆಸ್ ರಾಜಕೀಯ ಸಣ್ಣತನಕ್ಕೆ ಮುಂದಾಗಿದೆ ಎಂದು ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಸ್ಪಷ್ಟಪಡಿಸಿದ್ದಾರೆ.
ತಮ್ಮ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಅಗುತ್ತಲೇ ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಸಿ ನೀಡಿದ ರಮೇಶ ಜಿಗಜಿಣಗಿ, ವಾಯವ್ಯ ಶಿಕ್ಷಕರ ಮೇಲ್ಮನೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಹಾಗೂ ಅವರ ಪಕ್ಷದ ವಸ್ತುಸ್ಥಿತಿ ಬಗ್ಗೆ ಟೀಕಿಸಿದ್ದೆ. ಪ್ರಕಾಶ ಹುಕ್ಕೇರಿ ಸುದೀರ್ಘ ರಾಜಕೀಯ ಜೀವನದಲ್ಲಿ ಏನು ಮಾಡಿದ್ದಾರೆ, ಅವರೇ ಹೇಳಬೇಕು ಎಂದು ಟೀಕಿಸಿದ್ದೆ. ಆದರೆ ತಮ್ಮ ವಿರುದ್ಧ ನನ್ನ ಟೀಕೆಯನ್ನು ತಿರುಚಿದ್ದಾರೆ. ಬಿಜೆಪಿ ಪಕ್ಷದ ನಮ್ಮ ಅಭ್ಯರ್ಥಿ ಅರುಣ ಶಹಪುರ ಅವರ ಬಗ್ಗೆ ಟೀಕಿಸಿದ್ದೇನೆ ಎಂಬಂತೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚಿಕ್ಕೋಡಿಯಲ್ಲಿ ಕಾಂಗ್ರೆಸ್ :
ಬಾಬಾಸಾಹೇಬರಿಗೆ ಮಾಡಿದ ಅವಮಾನವನ್ನೂ ಹೇಳಿದ್ದೆ. ಮೇಲ್ಮನೆ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಮಾಡಿದ ಕೆಲಸಗಳು ಏನೂ ಇಲ್ಲ ಎಂದು ಅವರ ಕಾರ್ಯವೈಖರಿ ಬಗ್ಗೆಯ ಟೀಕಿಸಿದ್ದೆ. ಆದರೆ ನನ್ನ ಈ ಟೀಕೆಯನ್ನು ಅರುಣ ಶಹಪುರ ಬಗ್ಗೆ ಟೀಕಿಸಿದ್ದಾಗಿ ತಿರುಚಲಾಗಿದೆ ಎಂದು ಸಮಜಾಯಿಷಿ ನೀಡಿ, ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಇದನ್ನೂ ಓದಿ: ಒಂದೇ ದಿನದಲ್ಲಿ ಮಹಿಳೆ ಸೇರಿದಂತೆ 12 ಮಂದಿ ಬಲೂಚಿ ಕೈದಿಗಳನ್ನು ಗಲ್ಲಿಗೇರಿಸಿದ ಇರಾನ್!
ಸಾಲದ್ದಕ್ಕೆ ಈಚೆಗೆ ಇದನ್ನೇ ಕಳೆದ ಎರಡು ದಿನಗಳಿಂದ ಪ್ರಚಾರದಲ್ಲೂ ಹೇಳುವ ಮೂಲಕ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಮನಸ್ಥಿತಿ ಎಂಥದ್ದು ಎಂಬುದಕ್ಕೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.
ಪ್ರಕಾಶ ಹುಕ್ಕೇರಿ ವಿದ್ಯಾವಂತನೇ ಅಲ್ಲ. ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧವೇ ಇಲ್ಲದ ಈ ವ್ಯಕ್ತಿ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಲು ಅರ್ಹನೇ ಅಲ್ಲ ಎಂದು ಟೀಕಿಸಿದರು.
ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಮೇಲ್ಮನೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಪುರ ಹಾಗೂ ಹಣಮಂತ ನಿರಾಣಿ ಇಬ್ಬರೂಬನನ್ನ ಹುಡುಗರು. ಈ ಇಬ್ಬರೂ ಮೇಲ್ಮನೆ ಸದಸ್ಯರಾಗಿ ಮಾಡಿದ ಕೆಲಸಗಳು ಅವರ ಗೆಲುವನ್ನು ಸುಲಭವಾಗಿಸಿದೆ ಎಂದರು.
ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವೂಡಾ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಗೋಪಾಲ ಘಟಕಾಂಬಳೆ, ವಿಜಯ ಜೋಶಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.