ಲಕ್ಷಾಂತರ ಖರ್ಚಾದರೂ ನೀರಿಲ್ಲ
ನಿರ್ಲಕ್ಷ್ಯಕ್ಕೆ ಒಳಗಾದ ಪಿಕಳಿಹಾಳ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ
Team Udayavani, Feb 29, 2020, 11:58 AM IST
ಮುದಗಲ್ಲ: ಸಮೀಪದ ನಾಗಲಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಪಿಕಳಿಹಾಳ ಗ್ರಾಮದಲ್ಲಿ ಸರಕಾರ ಲಕ್ಷಾಂತರ ಹಣ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪಿಕಳಿಹಾಳ ಗ್ರಾಮದಲ್ಲಿ ಸುಮಾರು ಒಂದು ಸಾವಿರ ಜನಸಂಖ್ಯೆ ಹೊಂದಿದೆ. ಸದರಿ ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿದೆ. ಘಟಕದ ಸೂತ್ತಲು ಎತ್ತರವಾದ ಕಾಂಪೌಂಡ್ ಗೊಡೆ ಕಟ್ಟಿಸಲಾಗಿದೆ. ಆದರೆ ಘಟಕದ ಹಿಂಬದಿಯ ಬಯಲು ಜಾಗವನ್ನು ಮಹಿಳೆಯರು, ಮಕ್ಕಳು ಶೌಚಾಲಯಕ್ಕೆ ಬಳಕೆ ಮಾಡಿಕೊಳ್ಳುವದುರಿಂದ ಘಟಕ ಆರಂಭಿಸುವುದು ಬೇಡ ದುರ್ವಾಸನೆ ಜನರು ಹೈರಾಣಾಗಿ ನೀರು ಪಡೆಯಲು ಬರುವುದಿಲ್ಲ. ಆದ್ದರಿಂದ ಸದರಿ ಘಟಕ ಸ್ಥಳಾಂತರಿಸಬೇಕೆಂಬ ಕಾರಣಕ್ಕಾಗಿ ಕಳೆದ 4-5ವರ್ಷಗಳಿಂದ ಇಲ್ಲಿನ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮದ ಜನರಿಗೆ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಸಾಕಷ್ಟು ಫ್ಲೋರೈಡ್ ಯುಕ್ತ ನೀರು ಕುಡಿಯಬೇಕಾಗಿದೆ ಎಂದು ಪಿಕಳಿಹಾಳ ಗ್ರಾಮಸ್ಥರು ಆರೋಪಿಸಿದ್ದಾರೆ.
ಪಿಕಳಿಹಾಳ ಗ್ರಾಮಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಿ ಗ್ರಾಮದ ಜನರಿಗೆ ಅನುಕೂಲ ಮಾಡಿಕೊಡಬೇಕು ಗ್ರಾಮಸ್ಥರ ಒತ್ತಾಯಿಸಿದ್ದಾರೆ.
ಪಿಕಳಿಹಾಳ ಗ್ರಾಮದ ಜನರು ಫ್ಲೋರೈಡ್‌ಯುಕ್ತ ನೀರು ಕುಡಿದು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ತಾಪಂ ಅಧಿಕಾರಿಗಳು ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಿ ಗ್ರಾಮದ ಜನರಿಗೆ ಕುಡಿಯಲು ಶುದ್ಧ ನೀರು ಕೊಡಬೇಕು.
ಬಸವರಾಜ ಮಾಕಾಪುರ,
ಮಾಜಿ ಅಧ್ಯಕ್ಷರು, ತಾಪಂ ಲಿಂಗಸುಗೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.