ಹುಡ್ಕೋ ಬಡಾವಣೆ ಸಂಪೂರ್ಣ ಸೀಲ್‌ಡೌನ್
Team Udayavani, Jun 14, 2020, 2:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುದ್ದೇಬಿಹಾಳ: ಹುಡ್ಕೋ ಬಡಾವಣೆಯ 16ನೇ ಕ್ರಾಸ್‌ನ ಮನೆಯೊಂದರಲ್ಲಿ ತಂದೆ ಮತ್ತು ಮಗನಿಗೆ ಕೋವಿಡ್ ಪಾಜಿಟಿವ್ ಕಂಡುಬಂದಿದ್ದರಿಂದ ಅವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ವಿಜಯಪುರದ ಕೋವಿಡ್ ಆಸ್ಪತ್ರೆಗೆ ರವಾನಿಸಿದ್ದು ಬಡಾವಣೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.
ಈ ಪ್ರದೇಶದ ಸುತ್ತಮುತ್ತಲಿನ ಪ್ರದೇಶವನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಸೋಂಕಿತರು ಮುಂಬೈನಿಂದ ಬಂದು ಹೋಂ ಕ್ವಾರಂಟೈನ್‌ನಲ್ಲಿ ಇದ್ದರು. ಇನ್ನು ಅದೇ ಮನೆಯಲ್ಲಿ ಮಹಿಳೆಯೊಬ್ಬರು ವಾಸವಿದ್ದು, ಅವರೂ ಸಹಿತ ಮುಂಬೈನಿಂದ ಬಂದಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಸಂಪರ್ಕದಲ್ಲಿರದಿದ್ದರೂ ಬಡಾವಣೆಯ ಜನತೆಯಲ್ಲಿ ಆಂತಕ ಉಂಟಾಗಿದೆ. ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ್ ತಿವಾರಿ ಭೇಟಿ ನೀಡಿ ಪರಿಶೀಲಿಸಿದರು.
ನಗರ ಕೋವಿಡ್-19 ತಂಡದ ಮೇಲ್ವಿಚಾರಕ ಎಂ.ಎಸ್. ಗೌಡರ, ಹಿರಿಯ ಪ್ರಯೋಗಾಲಯ ತಂತ್ರಜ್ಞ ಈರಣ್ಣ ಚಿನಿವಾರ, ಎಂಟಿಎಸ್ ಸುಲೇಮಾನ ರುದ್ರವಾಡಿ, ಆರೋಗ್ಯ ಸಹಾಯಕರಾದ ವೀರೇಶ್ ಭಜಂತ್ರಿ, ಎಸ್. ಆರ್.ಸಜ್ಜನ, ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮೀ ಐರೋಡಗಿ, ಮೇಟಿ, ಪದ್ಮ ಸಾಲೋಡಗಿ, ಸುನಂದಾ ಅಸ್ಕಿ ಮತ್ತಿತರರು ಸ್ಥಳಕ್ಕೆ ತೆರಳಿ ಸೋಂಕಿತರ ಮನೆಯವರು ಹಾಗೂ ಅಕ್ಕಪಕ್ಕದವರ ಆರೋಗ್ಯ ತಪಾಸಣೆ ನಡೆಸಿ ಕೊರೊನಾ ಜಾಗೃತಿ ಮೂಡಿಸಿದರು. ಏತನ್ಮಧ್ಯೆ ಸೋಂಕು ಕಂಡುಬಂದ ಹಿನ್ನೆಲೆ ಸೀಲ್‌ಡೌನ್ ಪ್ರದೇಶದಲ್ಲಿ ಪುರಸಭೆಯವರು ಹೈಪೋಕ್ಲೋರಾಯಿಟ್ ದ್ರಾವಣ ಸಿಂಪಡಿಸಿ ಮುಂಜಾಗ್ರತಾ ಕ್ರಮ ಕೈಕೊಂಡಿದ್ದಾರೆ.
ಶಾಸಕರಿಗೆ ಮನವಿ: ಸೋಂಕು ಪತ್ತೆಯಾಗಿದ್ದರಿಂದ ಆತಂಕಗೊಂಡಿದ್ದ 16ನೇ ಕ್ರಾಸ್‌ನ ನಿವಾಸಿಗಳು ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಅವರನ್ನು ದಾಸೋಹ ನಿಲಯದಲ್ಲಿ ಭೇಟಿ ಮಾಡಿ, ಸೋಂಕಿತರು ಒಂದೇ ಮನೆಯವರಾಗಿದ್ದು ಅವರು ಹೊರಗೆ ಎಲ್ಲಿಯೂ ತಿರುಗಾಡಿಲ್ಲ. ಅವರೊಂದಿಗೆ ಬಡಾವಣೆಯ ಯಾರೊಬ್ಬರ ಸಂಪರ್ಕಕ್ಕೂ ಬಂದಿಲ್ಲ. ಹೀಗಾಗಿ ಇಡೀ ಪ್ರದೇಶ ಸೀಲ್‌ಡೌನ್ ಮಾಡಿದರೆ ಸಮಸ್ಯೆಯಾಗಲಿದೆ. ಸೋಂಕು ಪತ್ತೆಯಾದ ಮನೆಯನ್ನು ಮಾತ್ರ ಸೀಲ್‌ಡೌನ್ ನಿಯಮಕ್ಕೆ ಒಳಪಡಿಸುವಂತೆ ತಾಲೂಕಾಡಳಿತಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದರು.
ಸ್ಥಳದಲ್ಲಿದ್ದ ತಹಶೀಲ್ದಾರ್ ಜಿ.ಎಸ್. ಮಳಗಿ, ಸಿಪಿಐ ಆನಂದ ವಾಗಮೋಡೆ,ತಾಪಂ ಇಒ ಶಶಿಕಾಂತ ಶಿವಪುರೆ ಅವರನ್ನು ವಿಚಾರಿಸಿದ ಶಾಸಕರು, ಕೋವಿಡ್-19 ಪ್ರಕರಣದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ ಕೈಕೊಳ್ಳುವ ಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಹೇಳಿ ಎಲ್ಲರನ್ನೂ ಮರಳಿ ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.