ಮಾಸ್ಕ್ ಧರಿಸಿ ಸಂಚರಿಸಿ: ಡಿವೈಎಸ್ಪಿ
Team Udayavani, May 9, 2020, 4:40 PM IST
ಸಾಂದರ್ಭಿಕ ಚಿತ್ರ
ಮುದ್ದೇಬಿಹಾಳ: ಲಾಕ್‌ಡೌನ್ ಸಡಿಲಿಕೆ ಆಗಿದ್ದರೂ ಕೆಲ ನಿಯಮ ಜಾರಿಯಲ್ಲಿವೆ. ಸಾರ್ವಜನಿಕರು, ವಾಹನಗಳ ಚಾಲಕರು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಸವನಬಾಗೇವಾಡಿ ಪೊಲೀಸ್ ವಲಯದ ಡಿವೈಎಸ್ಪಿ ಈ. ಶಾಂತವೀರ ವಿನಂತಿಸಿದ್ದಾರೆ.
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆದು ಮಾಸ್ಕ್ ಧರಿಸಿ ಮತ್ತು ಸಂಚಾರ ನಿಯಮ ಪಾಲಿಸುವಂತೆ ತಿಳಿಹೇಳಿದರು. ದ್ವಿಚಕ್ರ ವಾಹನದಲ್ಲಿ ಒಬ್ಬರಿಗೆ, ನಾಲ್ಕು ಚಕ್ರದ ವಾಹನದಲ್ಲಿ ಚಾಲಕ ಸೇರಿ ಮೂವರಿಗೆ ಮಾತ್ರ ಅವಕಾಶವಿದೆ. ಇದನ್ನು ಉಲ್ಲಂಘಿಸಿದಲ್ಲಿ ದಂಡ ಹಾಕುವುದು ಅನಿವಾರ್ಯವಾಗಲಿದೆ. ನಿಯಮ ಪಾಲಿಸಿ ಪೊಲೀಸರ ಜತೆ ಸಹಕರಿಸಿ ಎಂದು ವಿನಂತಿಸಿದರು. ಇದೇ ಕೆಲವರಿಗೆ ಲಾಠಿ ರುಚಿ ತೋರಿಸಿದರು.
ಅಂಬೇಡ್ಕರ್ ವೃತ್ತದಲ್ಲಿ ಬುಲೆಟ್ ಬೈಕ್ ಮೇಲೆ ಆರ್ಮಿ ಎಂದು ಬರೆದುಕೊಂಡಿದ್ದ ವ್ಯಕ್ತಿ ಮಾಸ್ಕ್ ಧರಿಸದೆ ಮತ್ತೂಬ್ಬ ಸವಾರನನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ. ಈತನನ್ನು ತಡೆದ ಡಿವೈಎಸ್ಪಿ ಆರ್ಮಿಯಲ್ಲಿರುವ ನೀವೇ ಕಾನೂನು ಉಲ್ಲಂಘಿಸಿದರೆ ಹೇಗೆ. ಮೊದಲು ಮಾಸ್ಕ್ ಧರಿಸಿ ಎಂದು ಬುದ್ದಿವಾದ ಹೇಳಿದರು.
40 ಸಾವಿರ ರೂ. ದಂಡ ವಸೂಲಿ
ಈ ಮಧ್ಯೆ ಸ್ಥಳೀಯ ಪುರಸಭೆ ಅಧಿಕಾರಿಗಳ ತಂಡ ಮುಖ್ಯಾಧಿಕಾರಿ ಗೋಪಾಲ ಕಾಸೆ ನೇತೃತ್ವದಲ್ಲಿ ಪಟ್ಟಣದ ವಿವಿಧೆಡೆ ಸಂಚರಿಸಿ ಲಾಕಡೌನ್ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಕಾರ್ಯ ಮುಂದುವರಿಸಿದೆ. ಮೇ 4ರಿಂದ ಶುಕ್ರವಾರ ಸಂಜೆಯವರೆಗೆ ವಿವಿಧ ಪ್ರಕರಣಗಳಲ್ಲಿ ಒಟ್ಟಾರೆ 40000 ರೂ. ದಂಡ ವಿಧಿಸಿ, ಮೊತ್ತವನ್ನು ಸರ್ಕಾರದ ಖಾತೆಗೆ ಜಮಾ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.