44 ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 2390 ಜನ
Team Udayavani, May 22, 2020, 4:28 PM IST
ಸಾಂದರ್ಭಿಕ ಚಿತ್ರ
ಮುದ್ದೇಬಿಹಾಳ: ತಾಲೂಕಿನ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮುದ್ದೇಬಿಹಾಳ, ತಾಳಿಕೋಟೆ ಭಾಗದ ಒಟ್ಟು 44 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಕ್ಕಳು, ಮಹಿಳೆಯರು ಸೇರಿ ಒಟ್ಟು 2390 ಜನರನ್ನು ಸುರಕ್ಷಿತವಾಗಿ ಇಡಲಾಗಿದೆ.
ಇವರೆಲ್ಲರ ಸ್ವ್ಯಾಬ್ (ಗಂಟಲುದ್ರವ) ತೆಗೆದು ಪ್ರಯೋಗಾಲಯಕ್ಕೆ ಕಳಿಸುವ ಕಾರ್ಯ ನಿರಂತರ ನಡೆದಿದೆ. ಕಳೆದ 4-5 ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಹೈರಿಸ್ಕ್ ರಾಜ್ಯಗಳಿಂದ ಆಗಮಿಸಿರುವ ಎರಡೂ ತಾಲೂಕಿನ ವಲಸೆ ಕಾರ್ಮಿಕರನ್ನು ಇಡಲಾಗಿರುವ ಕೇಂದ್ರಗಳಿಗೆ ತೆರಳುತ್ತಿರುವ ಪ್ರಯೋಗಾಲಯ ತಜ್ಞರು, ಸಹಾಯಕರ ತಂಡ ಇದುವರೆಗೆ ಅಂದಾಜು 700 ಜನರ ಗಂಟಲುದ್ರವವನ್ನು ವಿಜಯಪುರ ಜಿಲ್ಲಾ ಸಮೀಕ್ಷಾ ಘಟಕಕ್ಕೆ ಕಳಿಸಿ ಅಲ್ಲಿಂದ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ.
ಪ್ರತಿ ಹೋಬಳಿಗೆ ಒಂದರಂತೆ ಎರಡೂ ತಾಲೂಕುಗಳ 4 ಹೋಬಳಿವ್ಯಾಪ್ತಿಯಲ್ಲಿ 4 ತಂಡಗಳು ಗಂಟಲುದ್ರವ ತೆಗೆಯುವ ಕಾರ್ಯದಲ್ಲಿ ನಿರಂತರ ಶ್ರಮಿಸುತ್ತಿವೆ. ಪ್ರತಿ ತಂಡದಲ್ಲಿ 3 ತಜ್ಞರಿರುವುದರಿಂದ ಮತ್ತು ಸಂಪೂರ್ಣ ಸುರಕ್ಷತೆಯೊಂದಿಗೆ ಗಂಟಲುದ್ರವ ತೆಗೆಯಬೇಕಿರುವುದರಿಂದ ಅತ್ಯಂತ ಎಚ್ಚರಿಕೆಯಿಂದ ಈ ಕಾರ್ಯ ನಡೆಯುತ್ತಿದೆ. ಗಂಟಲುದ್ರವ ತೆಗೆಯುವಾಗ ನೇರವಾಗಿ ವ್ಯಕ್ತಿಯ ಸಂಪರ್ಕದಲ್ಲಿ ಬರುವ ಪ್ರಯೋಗಾಲಯ ತಂತ್ರಜ್ಞರಿಗೆ ಪಿಪಿಇ ಕಿಟ್ ಒದಗಿಸಲಾಗಿದೆ.
ತಾಲೂಕು ಆರೋಗ್ಯಾಕಾರಿ ಡಾ| ಸತೀಶ ತಿವಾರಿ ನೇತೃತ್ವದಲ್ಲಿ ಹಿರಿಯ ಪ್ರಯೋಗಾಲಯ ತಂತ್ರಜ್ಞ ಈರಣ್ಣ ಚಿನಿವಾರ, ಮಹ್ಮದರಫೀಕ ಮುದ್ನಾಳ, ಇಸ್ಮಾಯಿಲ್ ಮೇಟಿ, ಸರ್ಫರಾಜನವಾಜ್ ನಾಯ್ಕೋಡಿ, ಶಕೀಲಹ್ಮದ್ ನಾಯ್ಕೋಡಿ, ವಿಜಯಮಹಾಂತೇಶ ಪವಾಡಶೆಟ್ಟಿ, ಅಬ್ದುಲ್‌ಹಮೀದ್ ಪಟೇಲ, ಬಸವರಾಜ ಇಜೇರಿ, ಸಚಿನ್ ರೂಢಗಿ, ರಾಜು ಬೋರಗಿ, ಆನಂದಗೌಡ ಬಿರಾದಾರ ಮತ್ತಿತರರು ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.