Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ


Team Udayavani, Jun 28, 2024, 8:15 PM IST

1-wew-e-weewqewq

ಮುದ್ದೇಬಿಹಾಳ: ತಾಲೂಕಿನ ಕೃಷ್ಣಾ ನದಿ ತೀರದಲ್ಲಿರುವ ಬಂಗಾರಗುಂಡ-ಕಪನೂರ ಗ್ರಾಮ ವ್ಯಾಪ್ತಿಯ ತೆರೆದ ಬಾವಿಯ ಪಕ್ಕ ಭೂಮಿಯಲ್ಲಿ ಗೂಡು ಮಾಡಿಕೊಂಡು 15 ದಿನಗಳ ವಯಸ್ಸಿನ ತನ್ನ ಎರಡು ಮರಿಗಳೊಂದಿಗೆ ವಾಸವಾಗಿದ್ದ 12 ಅಡಿ ಉದ್ದದ ಹೆಣ್ಣು ಮೊಸಳೆಯನ್ನು ಅರಣ್ಯ ಇಲಾಖೆಯ ಸಿಬಂದಿ ಶುಕ್ರವಾರ ಸಂಜೆ ಸೆರೆ ಹಿಡಿದು ಅದನ್ನು ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ ಸುರಕ್ಷಿತವಾಗಿ ಬಿಡುವ ಮೂಲಕ ಗ್ರಾಮಸ್ಥರ ಆತಂಕ ನಿವಾರಿಸಿದ್ದಾರೆ.

ಬಹಳ ದಿನಗಳಿಂದ ಈ ಮೊಸಳೆ ತೆರೆದ ಬಾವಿಯೊಂದರಲ್ಲಿ ವಾಸವಾಗಿದ್ದು ರಾತ್ರಿ ಹೊರಗೆ ಬರುವುದು, ಹಗಲು ನೀರಲ್ಲಿರುವುದು ಮಾಡುತ್ತಿತ್ತು. ಬಾವಿಯಲ್ಲಿ ನೀರು ಕಡಿಮೆಯಾದ ಮೇಲೆ ಬಾವಿಯ ಪಕ್ಕದ ಭೂಮಿಯಲ್ಲಿದ್ದ ಗೂಡಿನಲ್ಲಿ ವಾಸವಾಗಿತ್ತು. ಮೇಲಿಂದ ಮೇಲೆ ಇದು ಜನರ ಕಣ್ಣಿಗೆ ಬಿದ್ದು ಆತಂಕ ಸೃಷ್ಟಿಸಿತ್ತು. ಇದನ್ನು ಅರಣ್ಯ ಇಲಾಖೆಯವರ ಗಮನಕ್ಕೆ ತಂದಾಗ ಅವರು ಬಂದು ಮೊಸಳೆ ಸೆರೆ ಹಿಡಿದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮುದ್ದೇಬಿಹಾಳ ಪ್ರಾದೇಶಿಕ ಅರಣ್ಯ ಇಲಾಖೆಯ ಆರ್‍ಎಫ್‍ಓ ಬಸನಗೌಡ ಬಿರಾದಾರ ಅವರ ಮಾರ್ಗದರ್ಶನದಲ್ಲಿ ಎಆರ್‍ಎಫ್‍ಓಗಳಾದ ಮಲ್ಲಪ್ಪ ತೇಲಿ, ವಿಜಯಕುಮಾರ ಕಿತ್ತೂರ ಅವರು ಮೊಸಳೆ ಹಿಡಿಯುವಲ್ಲಿ ಪರಿಣಿತಿ ಹೊಂದಿರುವ ಇಲಾಖೆಯ ಸಿಬಂದಿ ನಾಗೇಶ ಮೋಪಗಾರ ಎಂಬಾತನ ನೆರವಿನಿಂದ ಸಂಜೆ ಮೊಸಳೆಯನ್ನು ಗೂಡಿನಿಂದ ಹೊರಗೆ ಬರುವಂತೆ ಮಾಡಿ ಸೆರೆ ಹಿಡಿದರು.

ಕೋಲು, ಹಗ್ಗ ಬಳಸಿ ಮಿಸುಕಾಡದಂತೆ ಕಟ್ಟಿ ವಾಹನದ ಮೂಲಕ ಹಿನ್ನೀರಿಗೆ ಸಾಗಿಸಿ ಸುರಕ್ಷಿತವಾಗಿ ಬಿಡಲು ಕ್ರಮ ಕೈಕೊಂಡರು. ಗ್ರಾಮದ ಯುವಕರಾದ ಪರಶುರಾಮ ಕಪನೂರ, ರುದ್ರಗೌಡ ಪಾಟೀಲ, ಗ್ರಾಮಸ್ಥರು ಸಹಕರಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಎಫ್‍ಓ ಬಿರಾದಾರ ಅವರು ಈ ಮೊಸಳೆಯಿಂದ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಹಗಲು ಜನಸಂಚಾರ ಕಂಡು ಬಂದಾಗ ತನ್ನ ಗೂಡಿನಲ್ಲಿ ಹೋಗಿ ಅಡಗಿಕೊಳ್ಳುತ್ತಿದ್ದ ಇದು ರಾತ್ರಿ ವೇಳೆ ಮತ್ತು ಜನಸಂಚಾರ ಇಲ್ಲದ ವೇಳೆ ಆಹಾರ ಅರಸಲು ಹೊರಗೆ ಬರುತ್ತಿತ್ತು. ಇದು ಜನರಲ್ಲಿ ಆತಂಕ ಉಂಟು ಮಾಡಿದ್ದರಿಂದ ಸೆರೆ ಹಿಡಿದು ಸುರಕ್ಷಿತವಾಗಿ ಮರಿಗಳ ಸಮೇತ ನದಿಯಲ್ಲಿ ಬಿಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.