Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Team Udayavani, Nov 9, 2024, 8:10 AM IST
ಮುದ್ದೇಬಿಹಾಳ: ಟಯರ್ ಪಂಚರ್ ಆಗಿ ರಸ್ತೆ ಪಕ್ಕ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನ.8ರ ಶುಕ್ರವಾರ ರಾತ್ರಿ ನಡೆದಿದೆ.
ಮುದ್ದೇಬಿಹಾಳದ ಅವಟಿ ಓಣಿ ನಿವಾಸಿ ಶಫೀಕ್ ಹಸನಸಾಬ ಯಕೀನ್ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಶಫೀಕ್ ಹಸನಸಾಬ ತಾಳಿಕೋಟಿಯಲ್ಲಿ ಸಂಬಂಧಿಕರನ್ನು ಮಾತನಾಡಿಸಿ ಮರಳಿ ಮುದ್ದೇಬಿಹಾಳಕ್ಕೆ ಬರುವಾಗ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಡಾಂಬರು ರಸ್ತೆಗೆ ಬಿದ್ದಿದ್ದು, ಆತನ ತಲೆಗೆ ಭಾರಿ ಪ್ರಮಾಣದ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
internal Fight: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧೆ ಖಚಿತ: ಶಾಸಕ ಯತ್ನಾಳ್
Vijayapura: ಇಟ್ಟಿಗೆ ಭಟ್ಟಿ ಕಾರ್ಮಿಕರಿಗೆ ಫೋನ್ ಮೂಲಕ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ
Vijayapura: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮೂವರು ಸಾವು
ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ರಾಜಕಾರಣ ಸಾಕು; ಅವರು ಮನೆಯಲ್ಲಿರಲಿ: ಸಂಸದ ಜಿಗಜಿಣಗಿ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ