Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Team Udayavani, Nov 10, 2024, 12:26 PM IST
ಮುದ್ದೇಬಿಹಾಳ: ಕೂಲಿ ಕೆಲಸಕ್ಕೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪ್ಯಾಜೋ ಆಟೋ ಪಲ್ಟಿಯಾಗಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು 10-15 ಕಾರ್ಮಿಕರು ಗಾಯಗೊಂಡಿರುವ ಘಟನೆ ನ.10ರ ರವಿವಾರ ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ತಾಲೂಕಿನ ಗಡಿಭಾಗ ತಂಗಡಗಿಯ ಕೃಷ್ಣಾ ನದಿ ಬಳಿಯ ಅಮರಗೋಳ ಕ್ರಾಸನಲ್ಲಿ ನಡೆದಿದೆ.
ಮೃತ ಮಹಿಳೆ ಕೋಳೂರು ಗ್ರಾಮದ ಮಾಲಾ ಖಾದರಬಾಷಾ ಹವಾಲ್ದಾರ್ (45) ಎಂದು ಗುರುತಿಸಲಾಗಿದೆ. ಆಟೋದಲ್ಲಿದ್ದವರೆಲ್ಲ ಅದೇ ಗ್ರಾಮದವರು ಎಂದು ಮೂಲಗಳು ತಿಳಿಸಿವೆ.
ನದಿಯ ಆ ಕಡೆ ಭಾಗದಲ್ಲಿರುವ ಬಾಗಲಕೋಟ ಜಿಲ್ಲೆ ಹುನಗುಂದ ತಾಲೂಕು ವ್ಯಾಪ್ತಿಯ ಕೂಡಲಸಂಗಮದ ಜಮೀನುಗಳಲ್ಲಿ ಈರುಳ್ಳಿ ಬಿಡಿಸಲು 25 ಕ್ಕೂ ಹೆಚ್ಚು ಕಾರ್ಮಿಕರನ್ನು ಆಟೋದಲ್ಲಿ ಕರೆದೊಯ್ಯಲಾಗುತ್ತಿತ್ತು. ರಾಜ್ಯ ಹೆದ್ದಾರಿಯಲ್ಲಿ ಓವರಟೇಕ್ ಮಾಡಲು ಹೋಗಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳಿಗೆ ತಂಗಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.