ಮುದ್ದೇಬಿಹಾಳ: ಗಾಳಿಗೆ ಮರ ಮುರಿದು ಬಿದ್ದು ಕಲಾವಿದರಾಗಿದ್ದ ಶಿಕ್ಷಕ ಮೃತ್ಯು
Team Udayavani, Apr 30, 2023, 10:02 PM IST
ಮುದ್ದೇಬಿಹಾಳ: ಮರ ಮೈಮೇಲೆ ಮುರಿದು ಬಿದ್ದು ಕಲಾವಿದರೂ ಆಗಿದ್ದ ಶಿಕ್ಷಕ ಪ್ರಕಾಶ ವೀರಭದ್ರಪ್ಪ ಛಲವಾದಿ (35) ದುರಂತ ಸಾವನ್ನಪ್ಪಿರುವ ಘಟನೆ ಆಲಮಟ್ಟಿ ಮುಖ್ಯ ರಸ್ತೆಯ ಹುಲ್ಲೂರ ಗ್ರಾಮದ ಹಳ್ಳದ ಹತ್ತಿರ ರವಿವಾರ ಸಂಜೆ ನಡೆದಿದೆ.
ಬಾಗಲಕೋಟೆ ಜಮಖಂಡಿ ತಾಲೂಕು ಚಿಮ್ಮಡ ಗ್ರಾಮದವರಾಗಿದ್ದ ನಿಡಗುಂದಿಯಲ್ಲಿ ಮನೆ ಮಾಡಿ ಕುಟುಂಬ ಸಮೇತ ವಾಸವಿದ್ದ ವೀರಭದ್ರಪ್ಪ ಅವರು ಮುದ್ದೇಬಿಹಾಳ ತಾಲೂಕು ಸಿದ್ದಾಪೂರ ಪಿಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದು ಪ್ರಭಾರಿ ಮುಖ್ಯಾಧ್ಯಾಪಕರಾಗಿಯೂ ಜವಾಬ್ಧಾರಿ ನಿರ್ವಹಿಸುತ್ತಿದ್ದರು.
ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರವಿವಾರ ಬೆಳಗ್ಗೆ ಗ್ರಾಮದಲ್ಲಿ ನಡೆದ ನಮ್ಮ ಮತ ನಮ್ಮ ಹಕ್ಕು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮುದ್ದೇಬಿಹಾಳದಲ್ಲಿ ನಡೆದ ಶಿಕ್ಷಕ ದಂಪತಿ ಬಿ.ವಿ.ಕೋರಿ ಮತ್ತು ಸರೋಜಾ ಕಿತ್ತೂರ ದಂಪತಿಯರ ಪುತ್ರಿಯ ಮದುವೆಯಲ್ಲಿ ಭಾಗವಹಿಸಿದ್ದರು. ಸಂಜೆ ಜೋರಾಗಿ ಗಾಳಿ ಬೀಸುತ್ತಿದ್ದರೂ ಲೆಕ್ಕಿಸದೆ ಬೈಕ್ ಮೇಲೆ ನಿಡಗುಂದಿಗೆ ಹೊರಟಾಗ ಜೋರಾದ ಗಾಳಿಗೆ ಬೇವಿನ ಮರ ಮುರಿದು ಇವರ ಮೇಲೆ ಬಿದ್ದಿದೆ. ಅದರ ಕೆಳಗೆ ಸಿಕ್ಕ ಇವರ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿದೆ.
ಜೋರಾದ ಗಾಳಿ ಮಳೆಯ ಕಾರಣ ಯಾರೂ ಈ ಘಟನೆ ಗಮನಿಸಿದ್ದಿಲ್ಲ. ಇವರ ದುರಂತ ಸಾವು ಇಡೀ ಶಿಕ್ಷಕ ವಲಯದಲ್ಲಿ ಅಪಾರ ಶೋಕದ ಮೂಡಿಸಿದೆ. ಕಲಾವಿದರೂ, ಗಾಯಕರು, ಸಾಹಿತಿ, ಕವಿ ಹೀಗೆ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಇವರು ಹಲವು ಕಡೆಗಳಲ್ಲಿ ತಂಡದೊಂದಿಗೆ ವೇದಿಕೆ ಪ್ರದರ್ಶನವನ್ನೂ ನೀಡುತ್ತಿದ್ದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.