ಅಂಕ ಗಳಿಕೆಗೆ ಮಕ್ಕಳ ಮೇಲೆ ಒತ್ತಡ ಹೇರಬೇಡಿ: ಕೂಚಬಾಳ
Team Udayavani, Feb 12, 2020, 6:30 PM IST
ಮುದ್ದೇಬಿಹಾಳ: ಭವ್ಯ ಭಾರತದ ಭವಿಷ್ಯವಾಗಿರುವ ಮಕ್ಕಳಿಗೆ ಪಾಲಕರು, ಶಿಕ್ಷಕರು ಅಂಕ ಗಳಿಸುವ ಒತ್ತಡ ಹೇರುವುದಕ್ಕಿಂತ ಅವರಲ್ಲಿರುವ ಸುಪ್ತ ಪ್ರತಿಭೆ ಹೊರತರುವ, ಅವರಿಷ್ಟದ ಸಾಧನೆಗೆ ಅವಕಾಶ ಮಾಡಿಕೊಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಹೇಳಿದ್ದಾರೆ.
ಮುದ್ದೇಬಿಹಾಳ ತಾಲೂಕು ಹುಲ್ಲೂರ ಗ್ರಾಮದಲ್ಲಿರುವ ಅಭಿನವ ಕುಮಾರೇಶ್ವರ ವಿದ್ಯಾವರ್ಧಕ ಸಂಸ್ಥೆಯ ಸಿಬಿಎಸ್ ಶಾಲೆಯ 8ನೇ ವಾರ್ಷಿಕೋತ್ಸವ, 2020ನೇ ಸಾಲಿನ ರಾಜ್ಯಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅಗಾಧ ಪ್ರತಿಭೆ ಅಡಗಿದೆ. ಶಾಲೆಯಲ್ಲಿ ಸಂಘಟಿಸುವ ಸಾಂಸ್ಕೃತಿಕ, ಕ್ರಿಡಾ ಚಟುವಟಿಕೆಗಳು ಅವರ ಪ್ರತಿಭೆ ಅನಾವರಣಕ್ಕೆ ವೇದಿಕೆ ಆಗುತ್ತವೆ. ಪ್ರತಿಯೊಬ್ಬ ಮಗುವಿನ ಪ್ರತಿಭೆಗೆ ತಕ್ಕ ಪ್ರೋತ್ಸಾಹ ನೀಡುವುದು ಅವರ ಭವಿಷ್ಯದ ಬೆಳವಣಿಗೆಗೆ ಸಹಕಾರಿಯಾಗಿರುತ್ತದೆ ಎನ್ನುವುದನ್ನು ಪಾಲಕರು ತಿಳಿದುಕೊಳ್ಳಬೇಕು ಎಂದರು.
ಬಾಲತಪಸ್ವಿ ಸೋಮಲಿಂಗ ಮಹಾರಾಜರು ಆಶೀರ್ವಚನ ನೀಡಿ, ಮಕ್ಕಳಲ್ಲಿ ಭಗವಂತ ನೆಲೆ ನಿಂತಿರುತ್ತಾನೆ. ಮಕ್ಕಳ ಬುದ್ಧಿಮಟ್ಟ ಅತ್ಯುನ್ನತವಾಗಿದ್ದು ಎಲ್ಲವನ್ನೂ ತಿಳಿದುಕೊಳ್ಳುವ ಹುಮ್ಮಸ್ಸು ಇರುತ್ತದೆ. ಇಂಥ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಒದಗಿಸುವುದು ಉತ್ತಮ ಮಾರ್ಗ. ಮಕ್ಕಳ ಅಧ್ಯಯನ ಸಮಯದಲ್ಲಿ ಪಾಲಕರು ಟಿವಿ ಧಾರಾವಾಹಿಗೆ ಮೊರೆ ಹೋಗದೆ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ಗುಣ ಮೈಗೂಡಿಸಿಕೊಳ್ಳಬೇಕು. ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕು ಎಂದರು.
ಇಳಕಲ್ಲ ಡೈಟ್‌ನ ಉಪನ್ಯಾಸಕ ಎಂ.ಎಂ. ಬೆಳಗಲ್ ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಆರೂಢ ಶ್ರೀ ಸಾನ್ನಿಧ್ಯ ವಹಿಸಿದ್ದರು. ಪ್ರಭಾರ ಬಿಇಒ ರೇಣುಕಾ ಕಲಬುರ್ಗಿ, ಸಂಸ್ಥೆ ಅಧ್ಯಕ್ಷ ಮಹಾದೇವ ಪವಾರ, ನಿವೃತ್ತ ಜಲಾಯನ ಅಧಿಕಾರಿ ಎಚ್. ಎಚ್. ಬೊಮ್ಮಣಗಿ, ಚಿಂತಕ ಅಶೋಕ ಹಂಚಲಿ, ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ಎಲ್. ಕರಡ್ಡಿ, ಬಿಆರ್‌ಪಿ ಎಸ್.ಪಿ. ರಾಠೊಡ, ಹುಲ್ಲೂರ ಪಿಕೆಪಿಎಸ್ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಸುರೇಶ ಹಳೇಮನಿ, ಶ್ರೀಶೈಲ ಕಡಿ, ಎಸ್. ಎಸ್.ಪಾಟೀಲ, ಗ್ರಾಪಂ ಸದಸ್ಯರಾದ ಸುಭಾಷ್ ಓಲೇಕಾರ, ತಾವರಪ್ಪ ಜಾಧವ, ಭೀಮನಗೌಢ ಸಂಕಪ್ಪನವರ, ಶಿವಕುಮಾರ ಅಂಗಡಿ, ಕೃಷ್ಣಾಜಿ ಬಂಡಿವಡ್ಡರ, ಬಾಬು ನಾಯ್ಕೋಡಿ, ಮುಖ್ಯಾಧ್ಯಾಪಕ ಯಲಗೂರೇಶ ಬಳಬಟ್ಟಿ ವೇದಿಕೆಯಲ್ಲಿದ್ದರು.
ಉಚಿತ ಆರೋಗ್ಯ ಶಿಬಿರ ಆಯೋಜಿಸುವ ಮೂಲಕ ಬಡರೋಗಿಗಳಿಗೆ ನೆರವು ನೀಡುತ್ತಿರುವ ಬೆಂಗಳೂರಿನ ನ್ಯಾಷನಲ್ ಸೇವಾ ಡಾಕ್ಟರ್ ಅಸೋಸಿಯೇಷನ್‌ನ ಸದಸ್ಯರಾದ ಮಕ್ಕಳ ತಜ್ಞ ಡಾ| ಹರೀಶಕುಮಾರ ಎಚ್, ಡಾ| ಮಂಜುನಾಥ ನಾಯಕ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ 2020ನೇ ಸಾಲಿನ ರಾಜ್ಯಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಪುರಸ್ಕೃತರ ಪರವಾಗಿ ಡಾ| ಹರೀಶಕುಮಾರ ಮಾತನಾಡಿ, ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು ಹೆಚ್ಚು ಗಮನ ಹರಿಸಬೇಕು. ಮೊಬೈಲ್ ಸಾಮಾಜಿಕ ಜಾಲತಾಣ ಬಳಕೆ ಮೇಲೆ ನಿಗಾ ಇರಿಸಬೇಕು ಮತ್ತು ರಾಸಾಯನಿಕ ಮಿಶ್ರಿತ ಆಹಾರ ಕೊಡಕೂಡದು ಎಂದರು.
ಇದೇ ವೇಳೆ ಶಾಲೆಯಲ್ಲಿ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗೋಸ್ಕರ ಅಳವಡಿಸಲಾದ ಪ್ರೋಜೆಕ್ಟರ್ ಅನ್ನು
ಕೆಸರಟ್ಟಿ ಶ್ರೀ ಉದ್ಘಾಟಿಸಿದರು. ಅರವಿಂದ ಪಾಸೋಡಿ ಸ್ವಾಗತಿಸಿದರು. ಭೀಮನಗೌಡ ಕೊಡಗಾನೂರ ನಿರೂಪಿಸಿದರು. ಬಿ.ಎಚ್. ಬಳಬಟ್ಟಿ ವಂದಿಸಿದರು. ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.