ಕೋವಿಡ್ ಗಂಭೀರವಾಗಿ ಪರಿಗಣಿಸಿ

ಕೋವಿಡ್ ವಾರಿಯರ್ಗಳಿಗೆ ಸನ್ಮಾನ ಕಷ್ಟ ಕಾಲದಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಿ

Team Udayavani, Jun 28, 2020, 3:34 PM IST

28-June-16

ಮುದ್ದೇಬಿಹಾಳ: ಕೋವಿಡ್ ವಾರಿಯರ್ಗಳಾದ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಮುದ್ದೇಬಿಹಾಳ: ಕೋವಿಡ್ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ ಎನ್ನುವುದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮುಕ್ತ ಪರಿಸರದಲ್ಲಿ ಕಾರ್ಯಕ್ರಮ ಆಯೋಜಿಸುವುದನ್ನು ಎಲ್ಲರೂ ಪಾಲಿಸಬೇಕು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಇಲ್ಲಿನ ಎಪಿಎಂಸಿಯಲ್ಲಿರುವ ಕರ್ನಾಟಕ ಕೋ ಆಪ್‌ ಬ್ಯಾಂಕ್‌ ಸಭಾಭವನದಲ್ಲಿ ವೀರಮಹೇಶ್ವರ ತರುಣ ಸಂಘದ ಅಧ್ಯಕ್ಷ ಗೌರಿಶಂಕರ ಪುರಾಣಿಕಮಠ ಪರಿವಾರದಿಂದ ಶನಿವಾರ ಹಮ್ಮಿಕೊಂಡಿದ್ದ ಕೋವಿಡ್ ವಾರಿಯರ್ಗಳಿಗೆ ಗೌರವ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಅನೇಕ ಸಂಘ ಸಂಸ್ಥೆಗಳು, ವ್ಯಕ್ತಿಗಳು ಕೊರೊನಾ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿ ಕಷ್ಟ ಬಂದಾಗ ಒಬ್ಬರಿಗೊಬ್ಬರು ಕೈಜೋಡಿಸಿ ಕೆಲಸ ಮಾಡಿದರೆ ಎಂಥ ಕಷ್ಟವನ್ನೂ ಜಯಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಸಹಾಯ ಮಾಡಲಾಗದವರು ಒಳ್ಳೆಯವರಿಗೆ ಪ್ರೋತ್ಸಾಹಿಸುವುದನ್ನಾದರೂ ಮಾಡಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಸಿ.ಎಸ್‌. ನಾಡಗೌಡ ಮಾತನಾಡಿ, ಕೋವಿಡ್ ವೈರಸ್‌ ಗಾಳಿಯೊಂದಿಗೆ ಸೇರಿ ಅನಾರೋಗ್ಯವನ್ನುಂಟು ಮಾಡುತ್ತದೆ. ಔಷಧಿ  ಸಿಗುವವರೆಗೂ ಕೋವಿಡ್ ವಿರುದ್ಧ ಹೋರಾಟದ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು. ಸರ್ಕಾರಗಳು ಸ್ಯಾನಿಟೈಸರ್‌ಗಳಿಗೆ ದುಬಾರಿ ಟ್ಯಾಕ್ಸ್‌ ಹಾಕುವುದನ್ನು ಕೈಬಿಡಬೇಕು. ವ್ಯವಹಾರ ಮಾಡುವ ಸರ್ಕಾರ ನಮಗೆ ಬೇಡ. ಜನರನ್ನು ಉದ್ಧಾರ ಮಾಡುವ ಸ್ವಾಮೀಜಿಗಳು, ಜನಾಂಗದ ಸೇವೆ ಮಾಡುವ ಜಂಗಮರು ಕೋವಿಡ್ ಜಾಗೃತಿ ಮೂಡಿಸಬೇಕು. ಕೋವಿಡ್ ಲಾಕ್‌ಡೌನ್‌ ವೇಳೆ ಸಾರಾಯಿ ದರ ಗಗನಕ್ಕೇರಿತ್ತು. ಹಣ್ಣು-ಹಂಪಲು ರಸ್ತೆಗೆ ಬಿದ್ದಿದ್ದವು. ಸಮಾಜ ಇಂಥ ಬೆಳವಣಿಗೆ ಬಗ್ಗೆ ಆಳವಾದ ಚಿಂತನೆ ನಡೆಸಬೇಕು. ಪಕ್ಷ ಮೀರಿ ನಿಂತು ಜನರನ್ನು ಮನುಷ್ಯರನ್ನಾಗಿ ನೋಡುವ ಕೆಲಸ ಆಗಬೇಕು ಎಂದರು. ಸನ್ಮಾನಿತರ ಪರವಾಗಿ ವಿಜಯಪುರ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಶಿವಕುಮಾರ ಶಾರದಳ್ಳಿ ಮಾತನಾಡಿದರು.

ಸನ್ಮಾನ: ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ, ಪೊಲೀಸ್‌, ಕಂದಾಯ ಇಲಾಖೆ ಸಿಬ್ಬಂದಿ, ಪೌರ ಕಾರ್ಮಿಕರು, ಪತ್ರಕರ್ತರು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ್ದ 100ಕ್ಕೂ ಹೆಚ್ಚು ಜನರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಕೋವಿಡ್ ಯೋಧರಿಗೆ ಸನ್ಮಾನಿಸಿದ್ದಕ್ಕೆ ಗೌರವಾರ್ಥವಾಗಿ ಗೌರಿಶಂಕರ, ಜಯಲಕ್ಷ್ಮೀ ದಂಪತಿಯನ್ನು ದಾನಯ್ಯ ಹಿರೇಮಠ ಸನ್ಮಾನಿಸಿದರು.

ಬಸವನಬಾಗೇವಾಡಿ ಸಂಸ್ಥಾನಮಠ ಶಿವಪ್ರಕಾಶ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕವಡಿಮಟ್ಟಿಯ ಶ್ರೀದೇವಿ ಆರಾಧಕ ಬಸವಪ್ರಭು ಸ್ವಾಮೀಜಿ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಗೌರಿಶಂಕರ ಪುರಾಣಿಕಮಠ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ತಹಶೀಲ್ದಾರ್‌ ಜಿ.ಎಸ್‌. ಮಳಗಿ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಂಗಮೇಶ ಹೊಲ್ದೂರ, ತಾಲೂಕು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಅನಿಲಕುಮಾರ ಶೇಗುಣಸಿ, ತಾಪಂ ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ, ಆರ್‌ಬಿಎಸ್‌ ಕೆ ವೈದ್ಯಾಧಿಕಾರಿ ಡಾ| ಪ್ರವೀಣ ಸುಣಕಲ್ಲ, ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ(ಚಿನ್ನು) ನಾಡಗೌಡ, ಜಯಲಕ್ಷ್ಮೀ ಪುರಾಣಿಕಮಠ ಇತರರು ಇದ್ದರು. ಗಾಯಕಿ ಸ್ಫೂರ್ತಿ ತೆಗ್ಗಿನಮಠ ಪ್ರಾರ್ಥಿಸಿದರು. ಲ್ಯಾಬ್‌ ಟೆಕ್ನೀಶಿಯನ್‌ ಎನ್‌.ಎಸ್‌. ಸಂಗಮ ಸ್ವಾಗತಿಸಿದರು. ಹಾಸ್ಯ ಕಲಾವಿದ ಗೋಪಾಲ ಹೂಗಾರ ನಿರೂಪಿಸಿದರು. ಎನ್‌.ಎಸ್‌. ಹಿರೇಮಠ ವಂದಿಸಿದರು.

ಕೋವಿಡ್ ನಿಯಂತ್ರಿಸುವಲ್ಲಿ ಪ್ರಾಮಾಣಿಕ ಸೇವೆ ಮಾಡಿರುವ ವಾರಿಯರ್ಗಳೆಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಹೇಳಿದ್ದಾರೆ. ನಾವೂ ಸಹಿತ ಅವರೆಲ್ಲರನ್ನೂ ಅಭಿನಂದಿಸಬೇಕು. ಒಳ್ಳೆಯ ಕೆಲಸ ಮಾಡುವವರನ್ನು ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳಬೇಕು. ಕೋವಿಡ್ ಬಂದ ಮೇಲೆ ಸರ್ಕಾರಿ ಆಸ್ಪತ್ರೆ ಮಹತ್ವ ಮರುಕಳಿಸಿದ್ದು ಹೆಮ್ಮೆಯ ಸಂಗತಿ.
ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.