ಸಾಮಾಜಿಕ ಅಂತರ ಪಾಲನೆ
Team Udayavani, Apr 20, 2020, 1:18 PM IST
ಮುದ್ದೇಬಿಹಾಳ: ಕುಂಟೋಜಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ರೇಷನ್ ಪಡೆಯಲು ಸರದಿಯಲ್ಲಿ ನಿಂತಿರುವ ಫಲಾನುಭವಿಗಳು
ಮುದ್ದೇಬಿಹಾಳ: ಕುಂಟೋಜಿ ಗ್ರಾಪಂ ವ್ಯಾಪ್ತಿಯಲ್ಲಿ ಪಿಡಿಒ, ಪಂಚಾಯತ್ ಸಿಬ್ಬಂದಿ, ಅಲ್ಲಿನ ಜನಪ್ರತಿನಿಧಿಗಳು ಸ್ಥಳೀಯ ಯುವ ಸಂಘಟನೆಗಳೊಂದಿಗೆ ಸೇರಿಕೊಂಡು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಆಗುವಂತೆ ನೋಡಿಕೊಳ್ಳಲಾಗಿದೆ.
ಸರ್ಕಾರದ ಸೂಚನೆಯಂತೆ ಕುಂಟೋಜಿಯಲ್ಲಿರುವ ಪ್ರಸಿದ್ಧ ಬಸವೇಶ್ವರ ದೇವಸ್ಥಾನವನ್ನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಂದ್ ಮಾಡಲಾಗಿದೆ. ನಿತ್ಯ ಪೂಜೆ ಯಥಾವತ್ತಾಗಿ ನಡೆಯುವಂತೆ ನೋಡಿಕೊಳ್ಳಲು ದೇವಸ್ಥಾನ ಕಮಿಟಿಯವರು ಪಂಚಾಯತ್ ಆಡಳಿತಕ್ಕೆ ಸಹಕರಿಸಿದ್ದಾರೆ. ಪಿಡಿಒ ಪಿ.ಎಸ್. ನಾಯ್ಕೋಡಿ ನೇತೃತ್ವದ ಪಂಚಾಯತ್ ಸಿಬ್ಬಂದಿ ಗ್ರಾಮದಲ್ಲಿ ಜನರು ಸುಖಾಸುಮ್ಮನೆ ಹರಟೆ ಹೊಡೆಯುತ್ತಿದ್ದ ಕಟ್ಟೆಗಳ ಮೇಲೆ ಆಯಿಲ್ ಸುರಿದು, ಮುಳ್ಳುಕಂಟಿ ಹಚ್ಚಿ ಯಾರೂ ಗುಂಪುಗೂಡದಂತೆ, ರೇಷನ್, ಕಿರಾಣಿ ಮತ್ತಿತರ ಅಂಗಡಿಗಳಲ್ಲಿ ಸಾಮಗ್ರಿ ಪಡೆಯಲು ಜನ ಮುಗಿ ಬೀಳುವುದನ್ನು ತಪ್ಪಿಸಲು ಅವುಗಳ ಮುಂದೆ ಸುಣ್ಣದಲ್ಲಿ ಬಾಕ್ಸ್ ಗೆರೆ ಹಾಕಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲಾಗಿದೆ.
ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಲಾಗಿದ್ದು ಫಾಗಿಂಗ್, ಚರಂಡಿ ಸ್ವಚ್ಛತೆ, ಕೊಳಚೆಯನ್ನು ಬೇರೆಡೆ ಸಾಗಿಸುವುದು, ಪೌಡರ್ ಸಿಂಪಡಿಕೆ ಕೈಗೊಳ್ಳಲಾಗಿದೆ. ಆಟೋದಲ್ಲಿ ಮೈಕ್ ಹಚ್ಚಿ ಕೋವಿಡ್ ಮತ್ತು ಲಾಕ್‌ಡೌನ್ ಬಗ್ಗೆ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಸಲಾಗಿದೆ. ಇವೆಲ್ಲವುಗಳ ಮಧ್ಯೆ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಲು ಪಂಚಾಯತ್ ಆಡಳಿತ ಸಾಕಷ್ಟು ಶ್ರಮಿಸುತ್ತಿದೆ. ಕೊರೊನಾ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಸರ್ಕಾರದ ನಿರ್ದೇಶನದಂತೆ ಹಲವಾಗು ಆರೋಗ್ಯ ಸಂಬಂಧಿ ಕ್ರಮ ಜಾರಿಗೊಳಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಬಂದು ಜಾಗೃತಿ ಮೂಡಿಸಿದ್ದಾರೆ. ಲಾಕ್‌ಡೌನ್ ಉಲ್ಲಂಘನೆ ಆಗದಂತೆ ಸ್ಥಳೀಯ ಸಂಘಟನೆಗಳ ಯುವಜನತೆ ಸಾಕಷ್ಟು ಸಹಕಾರ ನೀಡಿ ಜನಜಾಗೃತಿ ಮೂಡಿಸಲು ಶ್ರಮಿಸಿದ್ದಾರೆ. ಇದಕ್ಕೆ ಪಂಚಾಯತ್ ಸದಸ್ಯರು, ಗ್ರಾಮಸ್ಥರ ಬೆಂಬಲ ದೊರಕಿದೆ ಎಂದು ಪಿಡಿಒ ಪಿ.ಎಸ್. ನಾಯ್ಕೋಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.